AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಮತ್ತೆ ಮನವಿ ಮಾಡಿದ ಸರ್ಕಾರ: ಏನಿದು ಕೇಸ್?

ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿದೆ.

ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಮತ್ತೆ ಮನವಿ ಮಾಡಿದ ಸರ್ಕಾರ: ಏನಿದು ಕೇಸ್?
ಯಡಿಯೂರಪ್ಪ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 28, 2024 | 8:20 PM

Share

ಬೆಂಗಳೂರು, (ನವೆಂಬರ್ 28): ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮತ್ತೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿದೆ. ಈ ಹಿಂದೆ ತಿರಸ್ಕಾರವಾಗಿದ್ದ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​, ಇದೀಗ ಮತ್ತೆ ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ. ಈ ಬಗ್ಗೆ ಸ್ವತಃ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇಂದು (ನವೆಂಬರ್ 28) ಸಚಿವ ಸಂಪುಟದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್​​ಕೆ ಪಾಟೀಲ್, ರಾಮಲಿಂಗಂ ಕಂಪನಿ ಅಕ್ರಮದ ಬಗ್ಗೆ ಟಿ.ಜೆ.ಅಬ್ರಾಹಂ ಅವರು 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ದೂರು ನೀಡಿದ್ದರು. PMLA ಕಾಯ್ದೆ ಅಡಿ ದೂರು ನೀಡಿ ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದ್ರೆ, ಅಂದು ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದೀಗ ಅದನ್ನು ಮತ್ತೆ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಆದ್ರೆ, ರಾಜ್ಯಪಲಾರು ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ಮತ್ತೆ ತಿರಸ್ಕಾರ ಮಾಡುತ್ತಾರಾ ಎನ್ನುವುದರ ಮೇಲೆ ಯಡಿಯೂರಪ್ಪನವರ ಭವಿಷ್ಯ ಅಡಗಿದೆ.

ಏನಿದು ಪ್ರಕರಣ?

ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್​ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್​ ಕಂಪನಿಗಳಿಂದ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಟಿ.ಜೆ ಅಬ್ರಾಹಂ ಖಾಸಗಿ ದೂರು ನೀಡಿದ್ದರು. ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ನಿರ್ದೇಶಿಸಬೇಕೆಂದು ಕೋರಿದ್ದರು. ಆದ್ರೆ, ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಹೀಗಾಗಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ 2021ರ ಜುಲೈ 8ರಂದು ಅಬ್ರಾಹಂ ದೂರನ್ನು ವಜಾಗೊಳಿಸಿತ್ತು.

ದೂರಿನಲ್ಲಿತ್ತು ?

ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಪರವಾಗಿ ಬಿಡಿಎಯಿಂದ ವರ್ಕ್ ಆರ್ಡರ್ ನೀಡಲಾಗಿದೆ ಎಂದು ಟಿಜೆ ಅಬ್ರಾಹಂ ಆರೋಪಿಸಿದ್ದರು. ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕಾಶ್ ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ್ ಶ್ರೀಗಳು ಶೆಲ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಟಿಜೆ ಅಬ್ರಾಹಿಂ ದೂರಿನಲ್ಲಿ ಆರೋಪಿಸಿದ್ದರು.

2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ದೂರು ನೀಡಿದ್ದರು. PMLA ಕಾಯ್ದೆ ಅಡಿ ದೂರು ನೀಡಿ ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು.ಆದ್ರೆ, ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಮನವಿಯನ್ನು ತಿರಸ್ಕರಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:09 pm, Thu, 28 November 24