AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಬಳಿಕ ಖಾತೆ ಹಂಚಿಕೆ ಕಗ್ಗಂಟಾಗಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಭಾನುವಾರ ತಡರಾತ್ರಿ ಭೇಟಿಯಾಗಿ ಚರ್ಚಿಸಿದ್ದು, ಎರಡು-ಮೂರು ಸಚಿವರ ಬದಲಾವಣೆ ಹಾಗೂ ಖಾತೆಗಳ ಅದಲು-ಬದಲು ಸಾಧ್ಯತೆಯೂ ಚರ್ಚೆಯಲ್ಲಿದೆ. ರಾಹುಲ್ ಗಾಂಧಿ ಒಪ್ಪಿಗೆ ಸಿಕ್ಕಿದರೆ ಇಂದು ಸಂಜೆಯೇ ಖಾತೆ ಹಂಚಿಕೆ ಫೈನಲ್ ಆಗುವ ನಿರೀಕ್ಷೆ ಇದೆ.

ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ
ಭಾನುವಾರ ರಾತ್ರಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ ಸಿಎಂ ಡಿಕೆ ಶಿವಕುಮಾರ್Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Aug 10, 2026 | 6:47 AM

Share

ಮುಖ್ಯಾಂಶಗಳು

  • ಖಾತೆ ಹಂಚಿಕೆಗೆ ಹೈಕಮಾಂಡ್ ಒಪ್ಪಿಗೆ ಬಾಕಿ
  • ಡಿಕೆಶಿ-ಖರ್ಗೆ ತಡರಾತ್ರಿ ಮಹತ್ವದ ಮಾತುಕತೆ
  • ಎರಡು ಮೂರು ಮಂದಿ ಸಚಿವರ ಬದಲಾವಣೆ ಸಾಧ್ಯತೆ

ನವದೆಹಲಿ, ಆಗಸ್ಟ್ 10: ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಕಾಂಗ್ರೆಸ್ (Congress) ಹೈಕಮಾಂಡ್ ಇನ್ನೂ ಗ್ರೀನ್‌ಸಿಗ್ನಲ್ ನೀಡಿಲ್ಲ. ಖಾತೆ ಹಂಚಿಕೆ ಕಗ್ಗಂಟಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಡರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅಸಮಾಧಾನ ತಣಿಸುವುದು ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ಸಿಎಂ ಡಿಕೆಶಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳಿಸುವ ಒತ್ತಡವೂ ಹೆಚ್ಚಾಗಿದೆ.

ಭಾನುವಾರ ರಾತ್ರಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸುಮಾರು 11 ಗಂಟೆ ವೇಳೆಗೆ ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಖರ್ಗೆ ಭೇಟಿ ಬಳಿಕ ಮಾತನಾಡಿದ ಸಿಎಂ, ಖಾತೆ ಹಂಚಿಕೆ ಕುರಿತು ಏನು ಮಾಡಬೇಕೆಂದು ಹೈಕಮಾಂಡ್ ತಿಳಿಸುತ್ತದೆ ಎಂದು ಹೇಳಿದರು.

ಖಾತೆ ಹಂಚಿಕೆ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ದೆಹಲಿಯಲ್ಲಿ ನಾನು ಎಷ್ಟು ದಿನ ಇದ್ದೆ, ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಎಷ್ಟು ದಿನ ಇದ್ದರು ಎಂದು ಡಿಕೆಶಿ ಮರುಪ್ರಶ್ನಿಸಿದರು. ಈಗಾಗಲೇ ಸಚಿವರು ಮೂರು ದಿನಗಳ ಕಾಲ ಪ್ರವಾಸ ನಡೆಸಿ ಬರ ಪರಿಸ್ಥಿತಿ ಕುರಿತು ಅಧ್ಯಯನ ಮಾಡಿ ವರದಿ ನೀಡಿದ್ದಾರೆ. ಸಚಿವರು ಉತ್ತಮ ಕೆಲಸ ಮಾಡಿದ್ದಾರೆ ಎಂದೂ ಹೇಳಿದರು.

ಅಗತ್ಯಬಿದ್ದರೆ ಎಲ್ಲ ಖಾತೆಗಳಿಗೂ ನಾನೇ ಉತ್ತರಿಸುತ್ತೇನೆ

ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದರೂ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದರು. ಅಗತ್ಯಬಿದ್ದರೆ ಅಧಿವೇಶನದಲ್ಲಿ ಎಲ್ಲ ಖಾತೆಗಳ ಬಗ್ಗೆಯೂ ತಾನೊಬ್ಬನೇ ಉತ್ತರಿಸುವುದಾಗಿ ಹೇಳಿದರು.

ನಾಳೆಯೇ ಖಾತೆ ಹಂಚಿಕೆ ಮಾಡಬೇಕೆಂದೇನೂ ಇಲ್ಲ. ಅಧಿವೇಶನ ನಡೆಯುವಾಗ ಆಯಾ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಮಾತನಾಡಲು ಸೂಚಿಸುತ್ತೇನೆ ಎಂದು ಡಿಕೆಶಿ ತಿಳಿಸಿದರು. ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ಭರ್ತಿ ಮಾಡುವ ವಿಚಾರದಲ್ಲಿ ತುರ್ತು ಇಲ್ಲ ಎಂದೂ ಸ್ಪಷ್ಟಪಡಿಸಿದರು.

ಎರಡು-ಮೂರು ಮಂದಿ ಸಚಿವರ ಬದಲಾವಣೆಗೆ ಚಿಂತನೆ?

ಇದರ ನಡುವೆ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅತೃಪ್ತಿ ಇನ್ನೂ ಶಮನವಾಗದ ಹಿನ್ನೆಲೆಯಲ್ಲಿ ಎರಡು-ಮೂರು ಮಂದಿ ಸಚಿವರ ಬದಲಾವಣೆಯ ಸಾಧ್ಯತೆಯೂ ಚರ್ಚೆಯಲ್ಲಿದೆ ಎನ್ನಲಾಗಿದೆ. ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಲು ಕೆಲ ಸಚಿವರನ್ನು ಬದಲಾಯಿಸುವ ಬಗ್ಗೆ ರಾಹುಲ್ ಗಾಂಧಿ ಅವರ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಲ್ಲದೆ, ಈಗಾಗಲೇ ಹಂಚಿಕೆಯಾಗಿರುವ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ವಿಚಾರವೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಎಲ್ಲ ವಿಚಾರಗಳಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ, ಇಂದು ಸಂಜೆಯೇ ಖಾತೆ ಹಂಚಿಕೆ ಹಾಗೂ ಬದಲಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ದೆಹಲಿಗೆ ತೆರಳುವ ಮುನ್ನ ಡಿ.ಕೆ. ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದರು.

ಸಮಾಜ ಕಲ್ಯಾಣ ಖಾತೆಗೆ ತಂಗಡಗಿ, ಮುನಿಯಪ್ಪ ಪೈಪೋಟಿ

ಇನ್ನು ಸಮಾಜ ಕಲ್ಯಾಣ ಇಲಾಖೆ ಖಾತೆಗಾಗಿ ಸಚಿವ ಶಿವರಾಜ್ ತಂಗಡಗಿ ಮತ್ತು ಕೆ.ಎಚ್. ಮುನಿಯಪ್ಪ ನಡುವೆ ಪೈಪೋಟಿ ನಡೆದಿದೆ ಎನ್ನಲಾಗಿದೆ. ತಂಗಡಗಿ ನಿನ್ನೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮತ್ತೊಂದೆಡೆ, ಹಾಲಿ ಆಹಾರ ಇಲಾಖೆಯ ಬಗ್ಗೆ ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ ಹೊಂದಿದ್ದು, ಸಮಾಜ ಕಲ್ಯಾಣ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಮುನಿಯಪ್ಪ ಕೂಡ ಖರ್ಗೆ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್

ಬೆಳಗ್ಗೆ ದೆಹಲಿಯಿಂದ ವಾಪಸ್ ಆಗುತ್ತಿರುವ ಡಿಕೆ ಶಿವಕುಮಾರ್, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆಯಲಿರುವ ‘ಸಾಧನೆಯ ಸಂಭ್ರಮ’ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಖಾತೆ ಹಂಚಿಕೆಯ ಪಟ್ಟಿಯೊಂದಿಗೆ ಬೆಂಗಳೂರಿಗೆ ವಾಪಸ್ ಆಗುತ್ತಾರಾ ಎಂಬ ಕುತೂಹಲ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!