AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟಕ್ಕೆ ಮತ್ತೆ ಸರ್ಜರಿ? ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್ ಸಾಧ್ಯತೆ

ಅಂತೂ ಇಂತೂ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂತು ಎನ್ನುವಷ್ಟರಲ್ಲೇ ಇದೀಗ ಮತ್ತೆ ಸಂಪುಟ ಸರ್ಜರಿ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಶೀಘ್ರದಲ್ಲೇ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಇತ್ತೀಚಿನ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.

ಸಂಪುಟಕ್ಕೆ ಮತ್ತೆ ಸರ್ಜರಿ? ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್ ಸಾಧ್ಯತೆ
ಕರ್ನಾಟಕ ಸಚಿವ ಸಂಪುಟದ ಕೆಲ ಸಚಿವರು (ಸಂಗ್ರಹ ಚಿತ್ರ)Image Credit source: PTI
Pramod Shastri G
| Edited By: |

Updated on: Aug 25, 2026 | 9:44 AM

Share

ಬೆಂಗಳೂರು, ಆಗಸ್ಟ್ 25: ವಿಧಾನಮಂಡಲ ಅಧಿವೇಶನ ಮುಗಿದ ಬೆನ್ನಲ್ಲೇ ಇದೀಗ ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet) ಮತ್ತೆ ಭಾರಿ ಬದಲಾವಣೆಯಾಗುವ ಸಾಧ್ಯತೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ. ಈ ಬಾರಿ 3ರಿಂದ 5 ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ರಾಜ್ಯದ ನಾಯಕರೊಂದಿಗೆ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದು, ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೈಕಮಾಂಡ್ ಬುಲಾವ್ ನೀಡುವ ಸಾಧ್ಯತೆ ಇದ್ದು, ಗುರುವಾರ ಸಿಎಂ ದೆಹಲಿಗೆ ತೆರಳುವ ನಿರೀಕ್ಷೆಯಿದೆ. ಅಂದು ಹೈಕಮಾಂಡ್ ನಾಯಕರೊಂದಿಗೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಚಿವ ಸ್ಥಾನಕ್ಕೆ ಹಿರಿಯ ನಾಯಕರ ಪಟ್ಟು

ಸಚಿವ ಸ್ಥಾನಕ್ಕಾಗಿ ಕೆಲವು ಹಿರಿಯ ನಾಯಕರು ಈಗಾಗಲೇ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಚರ್ಚೆಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಸಂಪುಟ ಪುನಾರಚನೆಯ ಮೂಲಕ ಅಸಮಾಧಾನಗೊಂಡಿರುವ ಹಾಗೂ ರೆಬೆಲ್ ನಾಯಕರಿಗೆ ಅವಕಾಶ ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಜಾತಿ ಸಮೀಕರಣದ ವಿಷಯದಲ್ಲಿ ಅಸಮಾಧಾನ

ಸಂಪುಟದಲ್ಲಿ ಹಿರಿತನಕ್ಕೆ ಆದ್ಯತೆ ನೀಡದಿರುವುದು ಹಾಗೂ ಜಾತಿ ಸಮೀಕರಣದ ವಿಚಾರದಲ್ಲೂ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಜನತಾ ಪರಿವಾರದ ಹಿನ್ನೆಲೆಯ 17 ಮಂದಿಗೆ ಸಚಿವ ಸ್ಥಾನ ನೀಡಿರುವುದೇಕೆ ಎಂಬ ಪ್ರಶ್ನೆಯನ್ನೂ ಕೆಲವರು ಎತ್ತಿದ್ದಾರೆ.

ಇದನ್ನೂ ಓದಿ: ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ: ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೀಗಾಗಿ, ಸಿಎಂ ಡಿಕೆ ಶಿವಕುಮಾರ್ ಹಾಗೂ ಹೈಕಮಾಂಡ್ ನಾಯಕರ ನಡುವಿನ ಮಾತುಕತೆ ಬಳಿಕ ಸಂಪುಟ ಸರ್ಜರಿ ಕುರಿತು ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us