ಹೊಸ ವರ್ಷಕ್ಕೆ ಸಂಪುಟ ಪುನಾರಚನೆ?; ಸಿಎಂ ಸಿದ್ದರಾಮಯ್ಯ ಪರೋಕ್ಷ ಸುಳಿವು

| Updated By: ಸುಷ್ಮಾ ಚಕ್ರೆ

Updated on: Jan 01, 2025 | 7:51 PM

ಸಚಿವ ಸಂಪುಟ ಪುನಾರಚನೆ ವಿಚಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯಿಂದ ಮತ್ತೆ ಜೀವ ಪಡೆದಿದೆ. ಹೊಸ ವರ್ಷದಲ್ಲಿ ಹೊಸ ಟೀಂ ಕಟ್ಟುವ ಬಗ್ಗೆ ಸಿದ್ದರಾಮಯ್ಯ ಪರೋಕ್ಷ ಸುಳಿವು ನೀಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಬಗ್ಗೆ ಚರ್ಚೆಯಾಗಿತ್ತು. ಆದರೆ, ಇದೀಗ ಮತ್ತೆ ಸಂಪುಟ ಪುನರ್​ರಚನೆ ಬಗ್ಗೆ ಚರ್ಚೆ ನಡೆದಿದೆ.

ಹೊಸ ವರ್ಷಕ್ಕೆ ಸಂಪುಟ ಪುನಾರಚನೆ?; ಸಿಎಂ ಸಿದ್ದರಾಮಯ್ಯ ಪರೋಕ್ಷ ಸುಳಿವು
Siddaramaiah Dk Shivakumar
Follow us on

ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ಈ ಹೊಸ ವರ್ಷಕ್ಕೆ ಸಂಪುಟ ಪುನಾರಚನೆ ಆಗಲಿದೆಯೇ? ಎಂಬ ಕುರಿತು ಮತ್ತೆ ಚರ್ಚೆ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿತ್ತು. ಹಾಗೇ, ಹೊಸ ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಳ್ಳುವ ಬಗ್ಗೆಯೂ ವದಂತಿಗಳು ಹರಿದಾಡಿದ್ದವು. ಆದರೆ, ಕಾಂಗ್ರೆಸ್ ಪಕ್ಷದ ಯಾವ ನಾಯಕರೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಸಂಪುಟ ಪುನಾರಚನೆ ವಿಚಾರ ಮತ್ತೆ ಜೀವ ಪಡೆದಿದೆ.

ಹೊಸ ಟೀಂ ಕಟ್ಟುವ ಬಗ್ಗೆ ಸಿದ್ದರಾಮಯ್ಯ ಪರೋಕ್ಷ ಸುಳಿವು ನೀಡಿದ್ದಾರೆ.  ಹೊಸ ತಂಡವನ್ನು ಕಟ್ಟುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ ಅಂತ್ಯಕ್ಕೆ ಸಂಪುಟ ಪುನಾರಚನೆ ಬಗ್ಗೆ ಬೆಳವಣಿಗೆ ಆಗಿತ್ತು. ಕೆಲವು ಪ್ರಭಾವಿ ನಾಯಕರ ಒತ್ತಡಕ್ಕೆ ಆ ವಿಷಯ ತಣ್ಣಗಾಗಿತ್ತು. ಇದೀಗ ಮತ್ತೆ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಆಗ್ರಹ ಶುರುವಾಗಿದೆ. ಬಜೆಟ್ ಅಧಿವೇಶನದ ವೇಳೆಗೆ ಕೆಲವು ಬದಲಾವಣೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡಬೇಕೆಂದಿದ್ದ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆಯನ್ನು ಯಾಕೆ ಮಾಡಿಲ್ಲ? ಸಿಟಿ ರವಿ

ಈ ಬದಲಾವಣೆ ಒಂದೇ ಸ್ಥಾನಕ್ಕೆ ಸೀಮಿತನಾ ಅಥವಾ ಹೆಚ್ಚು ಸಚಿವರ ಬದಲಾವಣೆಯಾಗುತ್ತದೆಯಾ? ಎಂಬ ಬಗ್ಗೆ ಖಚಿತ ಮಾಹಿತಿಯಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ನಾಯಕರು ಕಣ್ಣು ಇಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಹಲವು ನಾಯಕರು ಲಾಬಿ ಮಾಡುತ್ತಿದ್ದಾರೆ. ಸಚಿವ ಸ್ಥಾನದ ಜತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವ ಬೇಡಿಕೆ ಕೇಳಿಬಂದಿದೆ. ಈ ಬಗ್ಗೆ ಕಾಂಗ್ರೆಸ್​ ಹೈಕಮಾಂಡ್ ನಿರ್ಧಾರದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇದನ್ನೂ ಓದಿ: New Year 2025: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೊಸ ವರ್ಷ 2025 ಅದ್ಧೂರಿ ಸ್ವಾಗತ

ಈ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಬಳಿಕ, ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಮನವೊಲಿಸಿ ಡಿಸಿಎಂ ಸ್ಥಾನ ವಹಿಸಿತ್ತು. 2025ರಲ್ಲಿ ರಾಜ್ಯ ಸರ್ಕಾರದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎನ್ನಲಾಗಿತ್ತು. ಇತ್ತೀಚೆಗಷ್ಟೆ ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್, ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಅಧಿಕಾರ ಹಂಚಿಕೆ ವಿಷಯದಲ್ಲಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದರು.

ಸಿಎಂ ಸಿದ್ದರಾಮಯ್ಯ ಕೂಡ ಹೊಸ ವರ್ಷದಲ್ಲಿ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ