AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ, ಆಯೋಗಕ್ಕೆ ಸರ್ಕಾರ ಶಿಫಾರಸು

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದು.ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳನವಾಗಿದೆ ಎಂದು ಕೇಂದ್ರ ಸರ್ಕಾರ ಹಾಗು ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಂಭೀರ ಆರೋಪ ಮಾಡಿದ್ದು, ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ, ಸ್ಥಳೀಯ ಸಂಸೆ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಆದ್ಯತೆ ನೀಡುವಂತೆ ಶಿಫಾರಸು ಮಾಡಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ, ಆಯೋಗಕ್ಕೆ ಸರ್ಕಾರ ಶಿಫಾರಸು
Ballot Paper
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Sep 04, 2025 | 7:10 PM

Share

ಬೆಂಗಳೂರು, (ಸೆಪ್ಟೆಂಬರ್ 04): ಕರ್ನಾಟಕದಲ್ಲಿ (Karnataka)  ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ (Local Body Elections) ಬ್ಯಾಲೆಟ್ ಪೇಪರ್  (ballot papers) ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಅನುಮೋದನೆ ದೊರೆತಿದೆ. ಹೌದು…ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಂದೆ ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ (EVM) ಬದಲು ಬ್ಯಾಲೆಟ್ ಪೇಪರ್ ಜಾರಿಗೆ ನಿಯಮಗಳನ್ನು ರೂಪಿಸಲು ಆಯೋಗಕ್ಕೆ ಸೂಕ್ತ ಶಿಫಾರಸ್ಸು ಮಾಡಲು ತೀರ್ಮಾನ ಕೈಗೊಂಡಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್‌ಕೆ ಪಾಟೀಲ್‌, ಇತ್ತೀಚೆಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ. ಮತಗಳ್ಳತನ ಚರ್ಚೆ ಮಾತು ನಡೆದಿದೆ. ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: 1991ರಲ್ಲಿಯೇ ಕಾಂಗ್ರೆಸ್ ಮತಕಳ್ಳತನ ಮಾಡಿತ್ತಾ? ತಿರುಗುಬಾಣವಾದ ಸಿದ್ದರಾಮಯ್ಯ ಹೇಳಿಕೆ

ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ‌ ತರಲು, ನಿಯಮಾವಳಿ ರಚನೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯ ಕಾನೂನು ಮತ್ತು ನಿಯಮಾವಳಿಗಳಿಗೂ ಕೆಲವು ತಿದ್ದುಪಡಿ ಮಾಡಬೇಕಾಗುತ್ತದೆ. ತಿದ್ದುಪಡಿ ಮಾಡಲು ಅಗತ್ಯ ಕಾನೂನು ಮಾಡಲು ಕ್ಯಾಬಿನೆಟ್ ಶಿಫಾರಸು ಮಾಡಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗವು, ರಾಜ್ಯ ಮಾಡಿದ ಕಾನೂನಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!