ಗೌವರ್ನರ್ ಪತ್ರ ಸಮರಕ್ಕೆ ಪ್ರತ್ಯಸ್ತ್ರ: ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ದ ಮಹತ್ವದ ತೀರ್ಮಾನ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಆರಂಭಗೊಂಡ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ವಿವಿಧ ಪ್ರಕರಣಗಳ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಹಿತಿ ನೀಡುವಂತೆ ಸರ್ಕಾರಕ್ಕೆ ಮೇಲಿಂದ ಮೇಲೆ ಪತ್ರಗಳನ್ನು ಬರೆಯುತ್ತಿದ್ದಾರೆ. ಇದರಿಂದ ಕೆರಳಿರುವ ಸಿದ್ದರಾಮಯ್ಯ ಸರ್ಕಾರ, ರಾಜ್ಯಪಾಲರ ಪತ್ರ ಸಮರಕ್ಕೆ ಪ್ರತ್ಯಸ್ತ್ರ ಹೂಡಿದೆ.

ಗೌವರ್ನರ್ ಪತ್ರ ಸಮರಕ್ಕೆ ಪ್ರತ್ಯಸ್ತ್ರ: ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ದ ಮಹತ್ವದ ತೀರ್ಮಾನ
ರಾಜ್ಯಪಾಲ-ಸರ್ಕಾರ
Follow us
Pramod Shastri G
| Updated By: ರಮೇಶ್ ಬಿ. ಜವಳಗೇರಾ

Updated on: Sep 26, 2024 | 4:36 PM

ಬೆಂಗಳೂರು (ಸೆಪ್ಟೆಂಬರ್ 26): ಕರ್ನಾಟಕ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯ ಸರ್ಕಾರವನ್ನ ಬಿಟ್ಟುಬಿಡದೆ ಪತ್ರದ ಮೂಲಕ ಗವರ್ನರ್ ಕಾಡುತ್ತಿದ್ದಾರೆ. ಸೇರಿಗೆ ಸವ್ವಾಸೇರು ಎಂಬಂತೆ ಪತ್ರ ಸಮರ ನಡೆಯುತ್ತಿದ್ದು, ಸರ್ಕಾರದ ವಿರುದ್ಧದ ಪ್ರತಿ ದೂರಿಗೂ ವಿವರಣೆಯನ್ನು ಕೇಳಿ ಥಾವರ್ ಚೆಂದ್ ಗೆಹಲೋತ್ ಪತ್ರ ಬರೆಯುತ್ತಿದ್ದಾರೆ. ಅಲ್ಲದೇ ರಾಜ್ಯಪಾಲರ ಪತ್ರಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಲೆಕೆಡಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರ ಪತ್ರ ಸಮರಕ್ಕೆ ಸಿದ್ದರಾಮಯ್ಯ ಪ್ರತ್ಯಸ್ತ್ರ ಹೂಡಿದೆ. ಹೌದು..ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸಿಂದತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.

ಇಂದು (ಸೆಪ್ಟೆಂಬರ್ 26) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸಿಎಸ್​ (ಸರ್ಕಾರದ ಮುಖ್ಯಕಾರ್ಯದರ್ಶಿ) ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಪತ್ರ ಬರೆದರೂ ಸಂಪುಟ ಗಮನಕ್ಕೆ ತರಲು ಸಿಎಸ್​ಗೆ ಸೂಚನೆ ನೀಡಲಾಗಿದ್ದು, ನೇರವಾಗಿ ರಾಜ್ಯಪಾಲರಿಗೆ ಉತ್ತರಿಸದಂತೆ ನಿರ್ಣಯ ಮೂಲಕ ಮುಖ್ಯಕಾರ್ಯದರ್ಶಿಗೆ ತಿಳಿಸಲಾಗಿದೆ. ಅಲ್ಲದೇ ರಾಜ್ಯಪಾಲರ ಪತ್ರವನ್ನು ಸಚಿವ ಸಂಪುಟದ ಗಮನಕ್ಕೆ ತರಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ನಿಯಮ ಪ್ರಕಾರ ಸರ್ಕಾರದ ಮುಖ್ಯಕಾರ್ಯದರ್ಶಿ ಸಂಪುಟದ ಗಮನಕ್ಕೆ ತರಬೇಕೆಂದು ನಿರ್ಣಯ ಅಂಗೀಕರಿಸಲಾಗಿದೆ. ಕಾರ್ಯದರ್ಶಿ ಬದಲು ಸಂಪುಟ ಮೂಲಕ ರಾಜ್ಯಪಾಲರ ಪತ್ರಗಳಿಗೆ ಸರ್ಕಾರದ ಉತ್ತರ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಅಗತ್ಯವಿದ್ದರಷ್ಟೇ ಉತ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಎಚ್​ಕೆ ಪಾಟೀಲ್,  ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ತೆಗೆದುಕೊಂಡ ಮಹತ್ವದ ತೀರ್ಮಾನದ ಬಗ್ಗೆ ಸ್ಪಷ್ಟಪಡಿಸಿದರು.

ಸಚಿವ ಎಚ್​ಕೆ ಪಾಟೀಲ್​ ಹೇಳಿದ್ದೇನು?

ರಾಜ್ಯಪಾಲರು ಅಸಹನೆಯ ವರ್ತನೆಯೊಳಗೆ ಪತ್ರ ಬರೆಯುತ್ತಿದ್ದಾರೆ. ತಕ್ಷಣ ಅಥವಾ ಇವತ್ತೇ ಮಾಹಿತಿ ಕಳುಹಿಸಿ ಎಂದು ಸೂಚಿಸುತ್ತಿದ್ದಾರೆ. ಎಲ್ಲಾ ನಿಯಮಾವಳಿ ಪರಿಶೀಲನೆ ಮಾಡಿ ಕ್ಯಾಬಿನೆಟ್ ನಿರ್ಣಯಿಸಿದೆ. ಕಾರ್ಯದರ್ಶಿಗಳು ಸಂಪುಟ ನಿರ್ಣಯದ ಮೇಲೆ ಮುಂದುವರಿಯಬೇಕು. ಮಾಹಿತಿಯನ್ನು ಕಳಿಸುವ ಮೊದಲು ಸಂಪುಟ ನಿರ್ಣಯ ಪಾಲಿಸಬೇಕು. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇವೆ. ರಾಜ್ಯಪಾಲರ ಯಾವುದೇ ಪತ್ರಕ್ಕೂ ಸಂಪುಟ ಮೂಲಕ ಉತ್ತರಿಸಬೇಕು ಎಂದು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ನಿರ್ಣಯದ ಮೂಲಕ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಿ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ