ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ
ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 26: ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ (Cabinet) ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಈ ಹಿಂದೆ ಮುಕ್ತ ತನಿಖೆ ನಡೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಎಂದಿದ್ದಾರೆ.
ರಾಜ್ಯದಲ್ಲಿ ಡೆಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ 1946 ಅಡಿ ಅಪರಾಧ ಪ್ರಕರಣ ತನಿಖೆ ಮಾಡಲು ಮುಕ್ತ ಅವಕಾಶ ಇತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ನಿರ್ಧಾರ ಮಾಡಲಾಗಿದೆ. ಸಿಬಿಐ ದುರ್ಬಳಕೆ ಆಗಬಹುದು ಎಂಬ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.
ಎಎನ್ಐ ಟ್ವೀಟ್
Karnataka Law Minister HK Patil says, “We are withdrawing open consent for CBI investigation in the state. We are expressing our concerns about the misuse of the CBI. In all the cases we have referred to the CBI, they have not filed charge sheets, leaving many cases pending. They… pic.twitter.com/ZsQnnBcirb
— ANI (@ANI) September 26, 2024
ನಾವು ರಾಜ್ಯದಲ್ಲಿ ಸಿಬಿಐ ತನಿಖೆಗೆ ಮುಕ್ತ ಅನುಮತಿಯನ್ನು ಹಿಂಪಡೆಯುತ್ತಿದ್ದೇವೆ. ಆ ಮೂಲಕ ಸಿಬಿಐ ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೆಚ್.ಕೆ.ಪಾಟೀಲ್, ನಾವು ಸಿಬಿಐಗೆ ವಹಿಸಿದ್ದ ಎಲ್ಲಾ ಪ್ರಕರಣಗಳಲ್ಲಿ ಅವರು ಚಾರ್ಜ್ ಶೀಟ್ ಸಲ್ಲಿಸಿಲ್ಲ, ಅನೇಕ ಪ್ರಕರಣಗಳು ಬಾಕಿ ಉಳಿದಿವೆ. ಹೀಗಾಗಿ ಕೇಂದ್ರ ತನಿಖಾ ಸಂಸ್ಥೆಯು ತಪ್ಪು ದಾರಿ ಹಿಡಿಯುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಸೂಚನೆ ವಾಪಸ್ ಪಡೆದುಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬಿಐ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:40 pm, Thu, 26 September 24