ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ

ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ
ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ
Edited By:

Updated on: Sep 26, 2024 | 4:59 PM

ಬೆಂಗಳೂರು, ಸೆಪ್ಟೆಂಬರ್​ 26: ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್​
ಪಡೆಯಲು ಸಚಿವ ಸಂಪುಟ ಸಭೆಯಲ್ಲಿ (Cabinet) ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಈ‌ ಹಿಂದೆ ಮುಕ್ತ ತನಿಖೆ ನಡೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಎಂದಿದ್ದಾರೆ.

ರಾಜ್ಯದಲ್ಲಿ ಡೆಲ್ಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್ 1946 ಅಡಿ ಅಪರಾಧ ಪ್ರಕರಣ ತನಿಖೆ ಮಾಡಲು ಮುಕ್ತ ಅವಕಾಶ ಇತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ನಿರ್ಧಾರ ಮಾಡಲಾಗಿದೆ. ಸಿಬಿಐ ದುರ್ಬಳಕೆ ಆಗಬಹುದು ಎಂಬ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

ಎಎನ್​ಐ ಟ್ವೀಟ್ 

ನಾವು ರಾಜ್ಯದಲ್ಲಿ ಸಿಬಿಐ ತನಿಖೆಗೆ ಮುಕ್ತ ಅನುಮತಿಯನ್ನು ಹಿಂಪಡೆಯುತ್ತಿದ್ದೇವೆ. ಆ ಮೂಲಕ ಸಿಬಿಐ ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೆಚ್.ಕೆ.ಪಾಟೀಲ್​, ನಾವು ಸಿಬಿಐಗೆ ವಹಿಸಿದ್ದ ಎಲ್ಲಾ ಪ್ರಕರಣಗಳಲ್ಲಿ ಅವರು ಚಾರ್ಜ್ ಶೀಟ್ ಸಲ್ಲಿಸಿಲ್ಲ, ಅನೇಕ ಪ್ರಕರಣಗಳು ಬಾಕಿ ಉಳಿದಿವೆ. ಹೀಗಾಗಿ ಕೇಂದ್ರ ತನಿಖಾ ಸಂಸ್ಥೆಯು ತಪ್ಪು ದಾರಿ ಹಿಡಿಯುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಸೂಚನೆ ವಾಪಸ್​ ಪಡೆದುಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬಿಐ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Thu, 26 September 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us