ಮುಡಾ ಕೇಸ್: ಸಿಬಿಐ ತನಿಖೆಯಿಂದ ಪಾರಾಗಲು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

ಯಾವ ಹೊತ್ತಲ್ಲಿ ಏನಾಗುತ್ತೋ.. ಯಾವ ಕ್ಷಣದಲ್ಲಿ ಕಂಟಕ ತಟ್ಟುತ್ತೋ.. ಮುಡಾ ಸೈಟ್ ಹಗರಣದ ಉರುಳು ಹೆಜ್ಜೆ ಹೆಜ್ಜೆಗೂ ಸಿದ್ದರಾಮಯ್ಯಗೆ ಬಿಗಿ ಆಗ್ತಿದೆ.. ಪತ್ನಿ ಹೆಸರಿಗೆ ಹಂಚಿಕೆ ಆಗಿರುವ 14 ಸೈಟ್​​​ಗಳ ಅಕ್ರಮದ ಕೇಸ್​​​​, ಹತ್ತಾರು ರೀತಿಯಲ್ಲಿ ಸಿದ್ದರಾಮಯ್ಯಗೆ ಬಿಸಿ ತಟ್ತಿದೆ.. ತವರಿನಲ್ಲೇ ಸಿದ್ದು ವಿರುದ್ಧ FIR ದಾಖಲಾಗಲು ಕೌಂಟ್​ಡೌನ್​ ಶುರುವಾಗಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರ ಯಾವುದೇ ಸಂದರ್ಭದಲ್ಲಿ ಸಿಬಿಐ ಅನ್ನ ದುರ್ಬಳಕೆ ಮಾಡಿಕೊಳ್ಳಬಹುದೆಂಬ ಭೀತಿ ಸಿದ್ದರಾಮಯ್ಯ ಸರ್ಕಾರಕ್ಕಿದೆ. ಇದರ ಸುಳಿವು ಅರಿಯುತ್ತಿದ್ದಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರವನ್ನು ಮೊಟಕುಗೊಳಿಸಿದೆ. ಹಾಗಾದ್ರೆ, ಸಿದ್ದರಾಮಯ್ಯಗೆ ಸಿಬಿಐ ತನಿಖೆ ಭಯ ಕಾಡುತ್ತಿದೆಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಮುಡಾ ಕೇಸ್: ಸಿಬಿಐ ತನಿಖೆಯಿಂದ ಪಾರಾಗಲು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ-ಸಿಬಿಐ
Follow us
|

Updated on:Sep 26, 2024 | 10:09 PM

ಬೆಂಗಳೂರು, (ಸೆಪ್ಟೆಂಬರ್ 26): ಮುಡಾ ಸೈಟ್ ಅಕ್ರಮ ಆರೋಪದಡಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ಕೋರ್ಟ್​ ಆದೇಶಿಸಿತ್ತು. ಮೈಸೂರು ಲೋಕಾಯುಕ್ತ ಎಸ್​​​​ಪಿಗೆ ತನಿಖೆ ಹೊಣೆವಹಿಸಿ, 3 ತಿಂಗಳ ಕಾಲಮಿತಿಯನ್ನೂ ನೀಡಿದೆ. ಪ್ರಕರಣದ ಮುಂದಿನ ಹಂತದ ತನಿಖೆ ಬಗ್ಗೆ ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಇವತ್ತು ಸಭೆ ನಡೆಸಿದರು. ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ಗೆ ಆಗಮಿಸಿ ಆದೇಶ ಪ್ರತಿ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ಷಣದಲ್ಲಿ FIR ದಾಖಲಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಸಿದ್ದರಾಮಯ್ಯಗೆ ಸಿಬಿಐ ತನಿಖೆ ಭಯ ಕಾಡುತ್ತಿದೆಯಾ? ಹೀಗೊಂದು ಪ್ರಶ್ನೆ ಉದ್ಭವಿಸಲು ಕಾರಣವೂ ಸಹ ಇದೆ. ಯಾಕಂದ್ರೆ, ಸಿಬಿಐಗೆ ಇದ್ದ ಅಧಿಕಾರವನ್ನು ರಾಜ್ಯ ಸರ್ಕಾರ ಮೊಟಕುಗೊಳಿಸಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಸಿಬಿಐ ನೇರ ಪ್ರವೇಶಕ್ಕೆ ತಡೆ ಏಕೆ?

ರಾಜ್ಯದಲ್ಲಿ ಮುಡಾ ಹಾಗೂ ವಾಲ್ಮೀಕಿ ಪ್ರಕರಣ ಸಖತ್ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರ ಯಾವುದೇ ಸಂದರ್ಭದಲ್ಲಿ ಸಿಬಿಐ ಅನ್ನ ದುರ್ಬಳಕೆ ಮಾಡಿಕೊಳ್ಳಬಹುದೆಂಬ ಭೀತಿ ಸರ್ಕಾರಕ್ಕಿದೆ. ಇದರ ಸುಳಿವು ಅರಿಯುತ್ತಿದ್ದಂತೆ ರಾಜ್ಯ ಸರ್ಕಾರ ಈ ಹೆಜ್ಜೆ ಇಟ್ಟಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿಬಿಐ ನೇರ ಪ್ರವೇಶಕ್ಕೆ ಬ್ರೇಕ್‌ ಹಾಕಲಾಗುತ್ತಿದೆ.

ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಸಿಬಿಐ ದುರ್ಬಳಕೆ ಆರೋಪ ಕೇಳಿ ಬಂದಿದೆ. ಸಿಎಂ, ಸಚಿವರು ವಿರುದ್ಧವೂ ಕೇಂದ್ರ ಸರ್ಕಾರ ಸಿಬಿಐ ಬಳಸಿಕೊಳ್ಳಲು ಮುಂದಾಗಿದೆ ಅನ್ನೋ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಇಂದಿನ ಸಂಪುಟ ಸಭೆಯಲ್ಲಿ ಸಿಬಿಐ ಪ್ರವೇಶಕ್ಕೆ ನಿರ್ಬಂಧ ವಿಧಿಸಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ

ಈ ಮೂಲಕ ಕೇಂದ್ರ ಸರ್ಕಾರಕ್ಕೆ ಟಕ್ಕರ್ ನೀಡಿರುವ ರಾಜ್ಯ ಸರ್ಕಾರ, ಯಾವುದೇ ಪ್ರಕರಣದೊಂದಿಗೆ ನೇರ ಪ್ರವೇಶ ಮಾಡುವಂತಿಲ್ಲ. ಸರ್ಕಾರದ ಅನುಮತಿ ಇಲ್ಲದಂತೆ ಸಿಬಿಐ ಪ್ರವೇಶಿಸುವಂತಿಲ್ಲ. ರಾಜ್ಯ ಸರ್ಕಾರದ ಅನುಮತಿ ದೊರೆತರಷ್ಟೇ ಎಂಟ್ರಿಗೆ ಅವಕಾಶ ನೀಡುವ ನಿರ್ಧಾರ ಕೈಗೊಂಡಿದೆ.

ಸಿದ್ದರಾಮಯ್ಯಗೆ ಕಾಡುತ್ತಿದೆಯಾ ಸಿಬಿಐ ತನಿಖೆ ಭಯ?

ಮುಡಾ ಹಗರಣದಲ್ಲಿ ಸಿಬಿಐ ತನಿಖೆಗೆ ನೀಡ್ಬೇಕು ಅಂತಾ ವಿಪಕ್ಷದವರು ಆಗ್ರಹಿಸ್ತಿದ್ದಾರೆ. ದೂರುದಾರರು ಸಹ ಸಿಬಿಐ ತನಿಖೆಗೆ ಒತ್ತಾಯಿಸ್ತಿದ್ದಾರೆ. ಹೀಗಾಗಿ ಹೊಸ ದಾಳು ಉರುಳಿಸಿರೋ ಸಿಎಂ ಸಿದ್ದರಾಮಯ್ಯ, ಸಿಬಿಐಗೆ ಇದ್ದ ಅಧಿಕಾರವನ್ನೇ ಮೊಟಕುಗೊಳಿಸಿದ್ದಾರೆ.   ಈ ಹಿಂದೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ನೇರವಾಗಿ ಸಿಬಿಐ ತನಿಖೆ ನಡೆಸಲು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯಿದೆ 1946ರ ಅಡಿ ಸರ್ಕಾರ ಅವಕಾಶ ನೀಡಿತ್ತು. ಇದೀಗ ಸಿಬಿಐ ಮುಕ್ತ ತನಿಖೆಗೆ ಇದ್ದ ಕಾಯ್ದೆಯನ್ನು ವಾಪಸ್ ಪಡೆಯಲಾಗಿದೆ. ಆ ಮುಕ್ತ ಅವಕಾಶದ ಬಿಲ್ ವಾಪಸ್‌ಗೆ ನಿರ್ಧಾರ ಮಾಡಲಾಗಿದೆ. ಈ ಮೂಲಕ ಸಿಎಂ ಸಿಬಿಐ ತನಿಖೆಯಿಂದ ಪಾರಾಗಲು ಈ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿರುತ್ತಿವೆ.

ಇಂದಿನ ಕ್ಯಾಬಿನೆಟ್ ತೆಗೆದುಕೊಂಡ ನಿರ್ಧಾರ ಗಮನಿಸಿದರೆ, ಸಿದ್ದರಾಮಯ್ಯಗೆ ಸಿಬಿಐ ತನಿಖೆ ಭಯ ಕಾಡ್ತಿದ್ಯಾ ಅನ್ನೋ ಪ್ರಶ್ನೆ ಕಾಡುತ್ತಿದೆ. ಈ ಆತಂಕದಿಂದಲೇ ಸಿಬಿಐ ಪರವಾಗಿ ಇದ್ದ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಣಯ ತೆಗೆದುಕೊಂಡಿತಾ ಎಂಬ ಚರ್ಚೆ ಶುರುವಾಗಿದೆ. ಯಾಕೆಂದ್ರೆ, ಮುಂದೊಂದು ದಿನ ಕೋರ್ಟ್ ಆದೇಶ ಪಡೆದು ಸಿಬಿಐಗೆ ದೂರು ನೀಡುವ ಅವಕಾಶ ದೂರುದಾರರಿಗಿದೆ. ಯಾರಾದರೂ ಸಿಬಿಐಗೆ ದೂರು ನೀಡಿದರೆ ಸಿಬಿಐ ನೇರವಾಗಿ ತನಿಖೆ ನಡೆಸಬಹುದು. ಇಂಥಾದ್ದೊಂದು ಅವಕಾಶ ದೂರದಾರರಿಗೆ ಸಿಗುತ್ತೆಂಬ ಲೆಕ್ಕಾಚಾರ ಹಾಕಿಯೇ ಸಿಎಂ, ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಸೂಚನೆಯನ್ನ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲಾಗಿದೆ.

ಅದೇನೇ ಇರಲಿ, ಕಾನೂನು ತಜ್ಞರು, ಹಿರಿಯ ಸಚಿವರ ಜೊತೆ ಇವತ್ತು ಬೆಳಗ್ಗೆ ಸಭೆ ನಡೆಸಿದ ಸಿಎಂ, ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಎಲ್ಲರ ಚಿತ್ತ ಎಫ್​ಐಆರ್​ನತ್ತ ನೆಟ್ಟಿದ್ದು, FIR ದಾಖಲಾಗುತ್ತಿದ್ದಂತೆಯೇ ಮುಡಾ ಯುದ್ಧಕ್ಕೆ ಮತ್ತೊಂದು ತಿರುವು ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:44 pm, Thu, 26 September 24

ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!