AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಬಲ್ ಆಪರೇಟರ್ಸ್ ಕಚೇರಿ ಉದ್ಘಾಟನೆ; ಗ್ರಾಮೀಣ ಕೇಬಲ್ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಧ್ಯಕ್ಷ ಪ್ಯಾಟ್ರಿಕ್ ರಾಜು

Karnataka Cable TV Operators Association office inaugurated| ಸ್ವಂತ ಕಚೇರಿ ಉದ್ಘಾಟನೆಗೊಂಡ ಈ ಮಹತ್ವದ ದಿನದಂದು ಕರ್ನಾಟಕ ಕೇಬಲ್​ ಟಿವಿ ಆಪರೇಟರುಗಳ ಒಕ್ಕೂಟದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಅವರು ಮಹತ್ತರ ಘೋಷಣೆಯೊಂದನ್ನು ಮಾಡಿದ್ದಾರೆ. ಕೇಬಲ್ ಆಪರೇಟರ್ಸ್​ ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಮರಣ ಹೊಂದಿದರೆ ಅವರ ಕುಟುಂಬ ವರ್ಗಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಕೇಬಲ್ ಆಪರೇಟರ್ಸ್ ಕಚೇರಿ ಉದ್ಘಾಟನೆ; ಗ್ರಾಮೀಣ ಕೇಬಲ್ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಧ್ಯಕ್ಷ ಪ್ಯಾಟ್ರಿಕ್ ರಾಜು
ಬೆಂಗಳೂರಿನ ಕೋರಮಂಗಲದಲ್ಲಿ ಕರ್ನಾಟಕ ಕೇಬಲ್​ ಟಿವಿ ಆಪರೇಟರ್ಸ್​ ಅಸೋಸಿಯೇಷನ್ ಕಚೇರಿ ಉದ್ಘಾಟನೆ
ಸಾಧು ಶ್ರೀನಾಥ್​
| Edited By: |

Updated on:Mar 26, 2021 | 1:43 PM

Share

ಕರ್ನಾಟಕ ಕೇಬಲ್​ ಟಿವಿ ಆಪರೇಟರುಗಳ ಒಕ್ಕೂಟಕ್ಕೆ ಇಂದು ಮಹತ್ವದ ದಿನವಾಗಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಇಂದು ತನ್ನ ಸ್ವಂತ ಕಚೇರಿಯನ್ನು ತೆರೆದಿದೆ.

ಕರ್ನಾಟಕ ಕೇಬಲ್​ ಟಿವಿ ಆಪರೇಟರ್ಸ್​ ಅಸೋಸಿಯೇಷನ್ (Karnataka Cable TV Operators Association) ಸ್ವಂತ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಾದ್ಯಂತ ಎಲ್ಲ ಕೇಬಲ್ ಆಪರೇಟರುಗಳು ಪಾಲ್ಗೊಂಡಿದ್ದರು. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಸಮಾರಂಭವನ್ನು ಉದ್ಘಾಟಿಸಿ, ಮಾಧ್ಯಮದ ಜೊತೆ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಅವರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇಬಲ್ ಆಪರೇಟರುಗಳಿಗೆ ಶುಭಾಶಯ ಕೋರುವೆ ಎಂದು ಶಾಸಕ ರಾಮಲಿಂಗಾ ರೆಡ್ಡಿ ಈ ಸಂದರ್ಭದಲ್ಲಿ ಹೇಳಿದರು.

ಸ್ವಂತ ಕಚೇರಿ ಉದ್ಘಾಟನೆಗೊಂಡ ಈ ಮಹತ್ವದ ದಿನದಂದು ಒಕ್ಕೂಟದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಅವರು ಮಹತ್ತರ ಘೋಷಣೆಯೊಂದನ್ನು ಮಾಡಿದ್ದಾರೆ. ಕೇಬಲ್ ಆಪರೇಟರ್ಸ್​ ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಮರಣ ಹೊಂದಿದರೆ ಅವರ ಕುಟುಂಬ ವರ್ಗಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಇದೀಗ ತಂತ್ರಜ್ಞಾನ ಯುಗ. ಅದಕ್ಕೆ ತಕ್ಕಂತೆ ನಾವೂ ತಂತ್ರಜ್ಞಾನದ ಉನ್ನತೀಕರಣ ಮಾಡಿಕೊಳ್ಳಬೇಕು. ಹಾಗಾಗಿ, ಗ್ರಾಮೀಣ ಭಾಗದ ಕೇಬಲ್ ಆಪರೇಟರುಗಳು ಮತ್ತು ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಪ್ಯಾಟ್ರಿಕ್ ರಾಜು ಇದೇ ಸಂದರ್ಭದಲ್ಲಿ ಹೇಳಿದರು. ಇದೇ ವೇಳೆ ತಿರುಮಲೇಶ್ ದೇಸಾಯಿ ನೇತೃತ್ವದಲ್ಲಿ ಪ್ರತ್ಯೇಕ ಮಾಧ್ಯಮ ಮಾಹಿತಿ ವಿಭಾಗದ ನೆರವು ಪಡೆಯುವಂತೆ ಒಕ್ಕೂಟದ ಸದಸ್ಯರಿಗೆ ಅವರು ಕರೆ ನೀಡಿದರು.

ಇದನ್ನೂ ಓದಿ: ಫೈಬರ್​ ಕೇಬಲ್ ಅಳವಡಿಕೆಯಲ್ಲಿ ಅಕ್ರಮ ಆರೋಪ: ವಿಜಯಪುರದ BSNL ಕಚೇರಿ ಮೇಲೆ CBI ದಾಳಿ

Published On - 1:40 pm, Fri, 26 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್