Karnataka Caste Census Report: ಹೈಕೋರ್ಟ್ ಅಂಗಳಕ್ಕೆ ಜಾತಿ ಗಣತಿ ವರದಿ
ಜಾತಿ ಗಣತಿ ವರದಿ ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಎಬ್ಬಿಸಿದೆ. ನಿನ್ನೆ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ವರದಿಗೆ ವೀರಶೈವ ಲಿಂಗಾಯತ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಬೆನ್ನೆಲೆ ಇಂದು ಹೈಕೋರ್ಟ್ ಜಾತಿ ಗಣತಿ ಪ್ರಶ್ನಿಸಿ ಶಿವರಾಜ್ ಕನಶೆಟ್ಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿದ್ದು, ಸರ್ಕಾರ ವರದಿ ಸ್ವೀಕರಿಸಿದೆಯೇ ಇಲ್ಲವೇ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಸರ್ಕಾರಿ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಪೀಠ ಸೂಚನೆ ನೀಡಿದ್ದು, ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಿದೆ.
ಬೆಂಗಳೂರು, ಮಾರ್ಚ್ 1: ರಾಜ್ಯದಲ್ಲಿ ಜಾತಿ ಗಣತಿ (Caste Census) ಪ್ರಶ್ನಿಸಿ ಶಿವರಾಜ್ ಕನಶೆಟ್ಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿದ ಹೈಕೋರ್ಟ್, ಜಾತಿಗಣತಿ ನಡೆಸಿದ 9 ವರ್ಷಗಳ ನಂತರ ವರದಿ ಸಲ್ಲಿಸಲಾಗಿದೆ. ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಚುನಾವಣೆ ವೇಳೆ ಜಾತಿಗಣತಿ ವರದಿ ಸ್ವೀಕರಿಸಲಾಗಿದೆ. ರಾಜಕೀಯ ಕಾರಣಕ್ಕೆ ಸರ್ಕಾರದಿಂದ ಕ್ರಮವೆಂದು ಆರೋಪಿಸಿ ಅರ್ಜಿದಾರರ ಪರ ಹಿರಿಯ ವಕೀಲ ಜಿ.ಆರ್.ಗುರುಮಠ್ ವಾದ ಮಂಡಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕರಿಸಿದ ಬಗ್ಗೆ ಮಾಹಿತಿ ಇಲ್ಲ ಎಂದು ಸರ್ಕಾರಿ ವಕೀಲರು ಹೇಳಿದ್ದಾರೆ.
ಸರ್ಕಾರ ವರದಿ ಸ್ವೀಕರಿಸಿದೆಯೇ ಇಲ್ಲವೇ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಸರ್ಕಾರಿ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಪೀಠ ಸೂಚನೆ ನೀಡಿದ್ದು, ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 5ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲಿ ನಮ್ಮ ಅಭಿಪ್ರಾಯ ಕೇಳುತ್ತಾರೆ? ಶಾಮನೂರು ಶಿವಶಂಕರಪ್ಪ ಹೀಗೆನ್ನಲು ಕಾರಣ ಇಲ್ಲಿದೆ
ನಿನ್ನೆ ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಂದ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕರಿಸಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ವರದಿ ಅಂತಾ ಹೆಸರಿದ್ರೂ, ಸಮಿಕ್ಷೆಯ ಪ್ರಶ್ನಾವಳಿಯಲ್ಲಿ ಜಾತಿ ಯಾವುದು ಅನ್ನೋ ಪ್ರಶ್ನೆ ಇದ್ದುದರಿಂದ ಇದು ಜಾತಿ ಗಣತಿಯೇ ಆಗಿದೆ. ಜಾತಿ ಗಣತಿ ವರದಿ ಸ್ವೀಕರಿಸಿರೋ ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಅಂದಿದ್ದಾರೆ.
ಜಾತಿ ಗಣತಿ ವರದಿ ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಎಬ್ಬಿಸಿದೆ. ನಿನ್ನೆ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ವರದಿಗೆ ವೀರಶೈವ ಲಿಂಗಾಯತ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾತಿ ಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಗಣತಿಗೆ ನಿಯುಕ್ತರಾದ ಸಿಬ್ಬಂದಿ ಹಲವರ ಮನೆಗಳಿಗೆ ಖುದ್ದು ಭೇಟಿ ನೀಡದೆ ಸರಿಯಾದ ಮಾಹಿತಿಯನ್ನೂ ದಾಖಲಿಸಿಲ್ಲ. ಇದನ್ನು ತರಾತುರಿಯಲ್ಲಿ ಅಂಗೀಕರಿಸಿದರೆ, ಉಪಯೋಗಕ್ಕಿಂತ ಹಾನಿಯೇ ಹೆಚ್ಚಾಗುತ್ತದೆ. ಈ ಹಿನ್ನಲೆಯಲ್ಲಿ ಈ ವರದಿ ತಿರಸ್ಕರಿಸಬೇಕು ಎಂದು ಮಹಾಸಭಾ ಮತ್ತೊಮ್ಮೆ ಒತ್ತಾಯಿಸಿದೆ.
ಇದನ್ನೂ ಓದಿ: ನನ್ನ ಕುರ್ಚಿಗೆ ಕೈಹಾಕಿದರೆ ಹುಷಾರ್: ಜಾತಿಗಣತಿ ವರದಿ ಸ್ವೀಕರಿಸುವ ಮೂಲಕ ಡಿಕೆಶಿಗೆ ಎಚ್ಚರಿಕೆ ನಿಡಿದ್ರಾ ಸಿದ್ದರಾಮಯ್ಯ?
ಅಂಗೀಕರಿಸಿದರೆ ರಾಜ್ಯದ ಎಲ್ಲಾ ಹರ-ಗುರು ಚರಮೂರ್ತಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ವೀರಶೈವ ಲಿಂಗಾಯತ ಮಹಾಸಭಾ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದೆ.
ಜಾತಿಗಣತಿ ವರದಿ ಸಿಎಂ ಸಿದ್ದರಾಮಯ್ಯನವರ ಕೈಸೇರಿದೆ. ಆದ್ರೆ ಜಾತಿಗಣತಿ ವರದಿ ಅವೈಜ್ಞಾನಿಕವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈಗಾಗಲೇ ಒಕ್ಕಲಿಗ, ಲಿಂಗಾಯತ ಸಮುದಾಯ ವಿರೋಧಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.