AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಳ ಮುಂದೆ ಕ್ರಿಶ್ಚಿಯನ್ ತೆಗೆದಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಆಗ್ರಹ

ಕರ್ನಾಟಕದ ಇಡೀ ಮೀಸಲಾತಿ ವ್ಯವಸ್ಥೆಯನ್ನೇ ಏರುಪೇರು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಬೆಂಗಳೂರಿನಲ್ಲಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಆರೋಪ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಕಚೇರಿಗೆ ಭೇಟಿ ನೀಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯ ವರದಿಯನ್ನು ನಿರ್ಲಕ್ಷಿದರೆ ಜನ ಆಕ್ರೋಶಗೊಂಡು ಪ್ರತಿಭಟನೆ ಮಾಡಬಹುದು. ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದಿದ್ದಾರೆ.

ಜಾತಿಗಳ ಮುಂದೆ ಕ್ರಿಶ್ಚಿಯನ್ ತೆಗೆದಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಆಗ್ರಹ
ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ ಬಿಜೆಪಿ ಮುಖಂಡರು
ಕಿರಣ್​ ಹನಿಯಡ್ಕ
| Edited By: |

Updated on: Sep 23, 2025 | 5:59 PM

Share

ಬೆಂಗಳೂರು, (ಸೆಪ್ಟೆಂಬರ್ 23): ಕರ್ನಾಟಕದಲ್ಲಿ ಜಾತಿ ಗಣತಿ ಸಮೀಕ್ಷೆ (Karnataka caste census) ಈಗಾಗಲೇ ಆರಂಭಗೊಂಡಿದೆ. ಆದರೆ ಜಾತಿ ಗಣತಿಯಲ್ಲಿ ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂಬ ಉಲ್ಲೇಖಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಈ ನಿಟ್ಟಿನಲ್ಲಿ 48 ಹಿಂದು ಜಾತಿಗಳನ್ನು ಕ್ರಿಶ್ಚಿಯನ್ ಎಂದು ನಮೂದಿಸಿದ್ದನ್ನು ಕೈಬಿಡಲಾಗಿತ್ತು. ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರ ನಿಯೋಗ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ನಾಯ್ಕ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವಂತೆ ಆಗ್ರಹಿಸಿದೆ.

ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ನಿಯೋಗ  ಏರು ಧ್ವನಿಯಲ್ಲೇ ಆಯೋಗದ ಅಧ್ಯಕ್ಷರ ಮುಂದೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ನಾಳೆಯಿಂದ ಜಾತಿಗಣತಿ: ಸಮೀಕ್ಷೆ ವೇಳೆ ನೀವು ಈ 60 ಪ್ರಶ್ನೆಗಳಿಗೆ ಉತ್ತರ ನೀಡಲು ಸಜ್ಜಾಗಿರಿ

ಶಾಸಕ ಸುನಿಲ್ ಕುಮಾರ್ ಹೇಳಿದ್ದೇನು?

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ , ಯಾರು ಯಾವ ಧರ್ಮಕ್ಕೆ ಮತಾಂತರ ಆಗುತ್ತಾರೋ ಆ ಜಾತಿಯಿಂದಲೇ ಮೀಸಲಾತಿ ನೀಡುವುದು ಅತ್ಯಂತ ಆತಂಕಕಾರಿ ವಿಚಾರವಾಗಿದೆ. ಸಮೀಕ್ಷೆಯಲ್ಲಿರುವ ಗೊಂದಲಗಳ ಬಗ್ಗೆ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಹಿಂದೂ ಉಪ ಜಾತಿಗಳಿಗೆ ಕ್ರಿಶ್ಚಿಯನ್ ನಾಮಕರಣ ಕೈ ಬಿಡಬೇಕೆಂದು ಒತ್ತಾಯ ಮಾಡಿದ್ದರೂ ಇನ್ನೂ ಆಯೋಗ ಸ್ಪಷ್ಟಪಡಿಸಿಲ್ಲ  ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ ಸುನೀಲ್ ಕುಮಾರ್ ಆಕ್ಷೇಪಿಸುತ್ತಾ, ‘ಸಮೀಕ್ಷೆಯಲ್ಲಿರುವ ಗೊಂದಲಗಳ ಬಗ್ಗೆ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಹಿಂದೂ ಉಪ ಜಾತಿಗಳಿಗೆ ಕ್ರಿಶ್ಚಿಯನ್ ನಾಮಕರಣ ಕೈಬಿಡುವಂತೆ ಆಗ್ರಹಿಸಿದ್ದೇವೆ. ನಾವು ಆಗ್ರಹ ಮಾಡಿದ್ದರೂ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿಲ್ಲ.33 ಉಪ ಜಾತಿ ಕೈಬಿಡುವಂತೆ ನನಗೆ ರಾಜಕೀಯ ಒತ್ತಡವಿತ್ತೆಂದು ಹೇಳುತ್ತಾರೆ’ ಎಂದು ಹೇಳಿದ್ದಾರೆ.

‘ಹಿಂದುಳಿದ ವರ್ಗಗಳ ಆಯೋಗವೇ ಗೊಂದಲದ ವಾತಾವರಣ ಸೃಷ್ಟಿಸಿದೆ. ರಾಜಕೀಯ ಉಪಯೋಗಕ್ಕಾಗಿ ಈ ಸಮೀಕ್ಷೆ ಬಳಕೆಯಾಗಬಾರದು. ಸಿದ್ದರಾಮಯ್ಯನವರ ರಾಜಕೀಯ ಉಪಯೋಗಕ್ಕೆ ಬಳಕೆಯಾಗುವಂತೆ ಕಾಣುತ್ತಿದೆ. ಆಯೋಗದ ಅಧ್ಯಕ್ಷರನ್ನು ಇನ್ಯಾರೋ ನಿಯಂತ್ರಣ ಮಾಡುತ್ತಿದ್ದಾರೆ. ಸಮೀಕ್ಷೆ ವರದಿಯನ್ನು ಸರ್ಕಾರ ನಿರ್ಲಕ್ಷ್ಯ ಮಾಡುವ ಕೆಲಸ ಮಾಡುತ್ತಿದೆ. ಜನ ಆಕ್ರೋಶಗೊಂಡು ಪ್ರತಿಭಟನೆ ಇಳಿಯುವ ಮೊದಲೇ ಕೈಬಿಡಿ ಎಂದಿದ್ದೇವೆ. ಪ್ರತಿಭಟನೆಗೆ ಹಿಂದುಳಿದ ವರ್ಗಗಳ ಆಯೋಗ ಅವಕಾಶ ಮಾಡಿಕೊಡಬಾರದು’ ಎಂದು ಸುನೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್