AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಕಚೇರಿಯಿಂದಲೇ ಲೈಂಗಿಕ ಸಿಡಿ ಕೇಸ್​ ನಿರ್ವಹಣೆಯಾಗುತ್ತಿದೆ: ಬಿಜೆಪಿ ಟ್ವೀಟ್

ಸಂತ್ರಸ್ತೆಗೆ ನಲಪಾಡ್‌ ಸ್ನೇಹಿತರು ಕಾರಿನ ವ್ಯವಸ್ಥೆ ಮಾಡುತ್ತಾರೆ. ಕೆಪಿಸಿಸಿ ಕಚೇರಿಯಿಂದಲೇ ಸಿಡಿ ಲೇಡಿ ಕೇಸ್​ ನಿರ್ವಹಣೆಯಾಗುತ್ತಿದೆ ಎನ್ನುವುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕೆಪಿಸಿಸಿ ಕಚೇರಿಯಿಂದಲೇ ಲೈಂಗಿಕ ಸಿಡಿ ಕೇಸ್​ ನಿರ್ವಹಣೆಯಾಗುತ್ತಿದೆ: ಬಿಜೆಪಿ ಟ್ವೀಟ್
ಬಿಜೆಪಿ
shruti hegde
| Updated By: ganapathi bhat|

Updated on:Mar 31, 2021 | 10:34 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಪ್ರಕರಣದ ಸಂತ್ರಸ್ತೆ ಫೋನ್‌ ಸಂಭಾಷಣೆಯಲ್ಲಿ ಮಹಾನಾಯಕ ನೆರವು ನೀಡುತ್ತಿದ್ದಾರೆ ಎಂದು ಹೇಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರಾಗುವಾಗ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಮುಕುಂದ್‌ ರಾಜ್ ಹಾಜರಿರುತ್ತಾರೆ. ಏನಾಗುತ್ತಿದೆ ಇಲ್ಲಿ? ಎಂದು ಬಿಜೆಪಿ ಬರೆದುಕೊಂಡಿದೆ.

ಸಂತ್ರಸ್ತೆಗೆ ನಲಪಾಡ್‌ ಸ್ನೇಹಿತರು ಕಾರಿನ ವ್ಯವಸ್ಥೆ ಮಾಡುತ್ತಾರೆ. ಸಂತ್ರಸ್ತೆಯ ಕಾರನ್ನು ನಲಪಾಡ್ ಸ್ನೇಹಿತರು ಹಿಂಬಾಲಿಸುತ್ತಾರೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ ಎಂಬುದಾಗಿ ಬಿಜೆಪಿ ಟ್ವೀಟರ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.

ಇಂದು ಸಂತ್ರಸ್ತ ಯುವತಿಯ ವಿಚಾರಣೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿ, ಸಿಡಿಯಲ್ಲಿರುವ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸಿಡಿ ಯುವತಿಗೆ ಮನೋವೈದ್ಯರಿಂದ ಕೌನ್ಸೆಲಿಂಗ್ ಕೂಡ ಮಾಡಲಾಗಿದೆ. ಮನೋ ವೈದ್ಯರು, ಸಮಾಜದಲ್ಲಿನ ಮುಂದಿನ ಆಗುಹೋಗುಗಳ ಬಗ್ಗೆ ತಿಳಿವಳಿಕೆ ನೀಡಿ, ಕಾನೂನು ಹೋರಾಟ, ಪೊಲೀಸರ ವಿಚಾರಣೆ ಬಗ್ಗೆ ಧೈರ್ಯತುಂಬಿದ್ದಾರೆ.ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಯುವತಿಗೆ ಒಆರ್​ಎಸ್ ಹಾಗೂ ಚಿತ್ರಾನ್ನ ನೀಡಲಾಗಿದೆ. ಸಿಡಿಯಲ್ಲಿರುವ ಯುವತಿ ಒಆರ್​ಎಸ್ ಕುಡಿದು, ಚಿತ್ರಾನ್ನ ಸೇವಿಸಿದ್ದಾರೆ.

1/2#DKShiMustResign‌ pic.twitter.com/JW3uoL1OEd

— BJP Karnataka (@BJP4Karnataka) March 31, 2021

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಬಿಜೆಪಿ ಮನೆಯೊಂದು ಮೂರು ಬಾಗಿಲು.. ಭಿನ್ನ ಹೇಳಿಕೆಗಳ ಸುಳಿಯಲ್ಲಿ ಸಚಿವರುಗಳು

Published On - 4:53 pm, Wed, 31 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ