ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಪ್ರಕರಣದ ಸಂತ್ರಸ್ತೆ ಫೋನ್ ಸಂಭಾಷಣೆಯಲ್ಲಿ ಮಹಾನಾಯಕ ನೆರವು ನೀಡುತ್ತಿದ್ದಾರೆ ಎಂದು ಹೇಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರಾಗುವಾಗ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಮುಕುಂದ್ ರಾಜ್ ಹಾಜರಿರುತ್ತಾರೆ. ಏನಾಗುತ್ತಿದೆ ಇಲ್ಲಿ? ಎಂದು ಬಿಜೆಪಿ ಬರೆದುಕೊಂಡಿದೆ.
ಸಂತ್ರಸ್ತೆಗೆ ನಲಪಾಡ್ ಸ್ನೇಹಿತರು ಕಾರಿನ ವ್ಯವಸ್ಥೆ ಮಾಡುತ್ತಾರೆ. ಸಂತ್ರಸ್ತೆಯ ಕಾರನ್ನು ನಲಪಾಡ್ ಸ್ನೇಹಿತರು ಹಿಂಬಾಲಿಸುತ್ತಾರೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ ಎಂಬುದಾಗಿ ಬಿಜೆಪಿ ಟ್ವೀಟರ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.
ಇಂದು ಸಂತ್ರಸ್ತ ಯುವತಿಯ ವಿಚಾರಣೆ
ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿ, ಸಿಡಿಯಲ್ಲಿರುವ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸಿಡಿ ಯುವತಿಗೆ ಮನೋವೈದ್ಯರಿಂದ ಕೌನ್ಸೆಲಿಂಗ್ ಕೂಡ ಮಾಡಲಾಗಿದೆ. ಮನೋ ವೈದ್ಯರು, ಸಮಾಜದಲ್ಲಿನ ಮುಂದಿನ ಆಗುಹೋಗುಗಳ ಬಗ್ಗೆ ತಿಳಿವಳಿಕೆ ನೀಡಿ, ಕಾನೂನು ಹೋರಾಟ, ಪೊಲೀಸರ ವಿಚಾರಣೆ ಬಗ್ಗೆ ಧೈರ್ಯತುಂಬಿದ್ದಾರೆ.ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಯುವತಿಗೆ ಒಆರ್ಎಸ್ ಹಾಗೂ ಚಿತ್ರಾನ್ನ ನೀಡಲಾಗಿದೆ. ಸಿಡಿಯಲ್ಲಿರುವ ಯುವತಿ ಒಆರ್ಎಸ್ ಕುಡಿದು, ಚಿತ್ರಾನ್ನ ಸೇವಿಸಿದ್ದಾರೆ.
1/2#DKShiMustResign pic.twitter.com/JW3uoL1OEd
— BJP Karnataka (@BJP4Karnataka) March 31, 2021
ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಬಿಜೆಪಿ ಮನೆಯೊಂದು ಮೂರು ಬಾಗಿಲು.. ಭಿನ್ನ ಹೇಳಿಕೆಗಳ ಸುಳಿಯಲ್ಲಿ ಸಚಿವರುಗಳು
Published On - 4:53 pm, Wed, 31 March 21