ಜನಿವಾರ ವಿವಾದ: ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಕೆ

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಸಿಇಟಿ ಮತ್ತು ನೀಟ್ ಪರೀಕ್ಷಾ ಕೇಂದ್ರಗಳಲ್ಲಿ ತೆಗೆದ ಘಟನೆಗೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದೆ. ಶಿವಮೊಗ್ಗ, ಬೀದರ್ ಮತ್ತು ಧಾರವಾಡದಲ್ಲಿ ಈ ಘಟನೆಗಳು ನಡೆದಿವೆ. ಧಾರ್ಮಿಕ ಆಚರಣೆಗಳಿಗೆ ಧಕ್ಕೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಜನಿವಾರ ವಿವಾದ: ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಕೆ
ಜನಿವಾರ, ಹೈಕೋರ್ಟ್​​
Edited By:

Updated on: May 05, 2025 | 5:38 PM

ಬೆಂಗಳೂರು, ಮೇ 05: ಸಿಇಟಿ (CET) ಮತ್ತು ನೀಟ್​ (NEET) ಪರೀಕ್ಷೆಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (Janivar) ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಹ್ಮಣ (Brahman) ಸಭಾ ಹೈಕೋರ್ಟ್‌ಗೆ (High Court) ಪಿಐಎಲ್ ಸಲ್ಲಿಕೆ ಮಾಡಿದೆ. ಈ ಬಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಮಾಹಿತಿ ನೀಡಿದ್ದು, ಇತ್ತೀಚೆಗೆ ಎಲ್ಲ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಜನಿವಾರ ತೆಗೆಸುತ್ತಿದ್ದಾರೆ. ಇದರಿಂದ ಬ್ರಾಹ್ಮಣರ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿದೆ ಎಂದು ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಲಾಗಿತ್ತು

ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರ ಮತ್ತು ಕೈಗೆ ಕಟ್ಟಿದ್ದ ಕಾಶಿ ದಾರವನ್ನು ತೆಗೆಸಿ ಅಧಿಕಾರಿಗಳು ಕಸದ ಬುಟ್ಟಿಗೆ ಎಸೆದಿದ್ದರು. ಬೀದರ್‌ನಲ್ಲಿ ಜನಿವಾರ ಹಾಕಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿರಲಿಲ್ಲ.

ಜನಿವಾರ ಹಾಕಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಂಗ್ರೆಸ್​ ಸರ್ಕಾರ ಸಂಕಷ್ಟಕ್ಕೆ ದೂಡಿದೆ ಎಂದು ರಾಜ್ಯ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಇದನ್ನೂ ಓದಿ
ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಸತೀಶ್ ಜಾರಕಿಹೊಳಿ
ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿಗೆ ಮತ್ತೆ ಜನಿವಾರ ಧಾರಣೆ
ಜನಿವಾರ ತೆಗೆದು ನೀಟ್​ ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
ಕಾಶಿ ಮಾದರಿಯಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಅಭಿವೃದ್ಧಿ

ರಾಜ್ಯಾದ್ಯಂತ ಸರ್ಕಾರದ ವಿರುದ್ಧ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಬೀದರ್​ನಲ್ಲಿನ ಪರೀಕ್ಷಾ ಕೇಂದ್ರದ (ಖಾಸಗಿ ಕಾಲೇಜು) ಪ್ರಾಂಶುಪಾಲ ಮತ್ತು ಆ ಕೇಂದ್ರದ ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು.

ರೈಲ್ವೆ ಇಲಾಖೆ ಪರೀಕ್ಷೆಗೂ ತಟ್ಟಿತ್ತು ಜನಿವಾರ ಬಿಸಿ

ಕೆಲ ದಿನಗಳ ಹಿಂದೆಯಷ್ಟೇ ನಡೆದ ರೈಲ್ವೆ ಪರೀಕ್ಷೆಗೆ ಜನಿವಾರ ಬಿಸಿ ತಟ್ಟಿತ್ತು. ಅಭ್ಯರ್ಥಿಗಳು ಧಾರ್ಮಿಕ ಚಿಹ್ನೆಗಳನ್ನು ತೆಗೆದಿಟ್ಟು ಪರೀಕ್ಷೆ ಬರೆಯಬೇಕು ಎಂಬ ನಿಯಮ ಬ್ರಾಹ್ಮಣ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿತ್ತು. ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗಬೇಕಾ ಎಂಬ ಪ್ರಶ್ನೆ ಮೂಡಿತ್ತು. ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗುತ್ತಿದ್ದಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ತುರ್ತಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಪಷ್ಟನೆ ನೀಡಿದರು. ಅಭ್ಯರ್ಥಿಗಳು ಜನಿವಾರ ಮತ್ತು ಮಾಂಗಲ್ಯವನ್ನು ತೆಗೆಯುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ವಿದ್ಯಾರ್ಥಿ ಸ್ವಯಂ ಪ್ರೇರಿತವಾಗಿ ಜನಿವಾರ ತೆಗೆದಿದ್ದನೇ? ಸಿಬ್ಬಂದಿ ಈಗ ಹೇಳೋದೇ ಬೇರೆ!

ನೀಟ್​ ಪರೀಕ್ಷೆಯಲ್ಲೂ ಜನಿವಾರ ವಿವಾದ

ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ರವಿವಾರ (ಮೇ. 04) ನಡೆದಿದ್ದ ನೀಟ್​ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಅವರ ಜನಿವಾರವನ್ನು ಪರೀಕ್ಷಾ ಕೇಂದ್ರ ಸಿಬ್ಬಂದಿ ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರು. ಪ್ರಕರಣ ಸಂಬಂಧ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಅರೆಸ್ಟ್​ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ