ಜೂ.22 ರಂದು ಕರ್ನಾಟಕ ಬಂದ್​ಗೆ​ ಕರೆ ನೀಡಿದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ

ಜೂ.22 ರಂದು ಕರ್ನಾಟಕ ಬಂದ್​ ಕರೆ ನೀಡಿದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ಜೂ.22 ರಂದು ಕರ್ನಾಟಕ ಬಂದ್​ಗೆ​ ಕರೆ ನೀಡಿದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ
ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ
Follow us
ವಿವೇಕ ಬಿರಾದಾರ
|

Updated on:Jun 18, 2023 | 3:02 PM

ಬೆಂಗಳೂರು: ವಿದ್ಯುತ್ ದರ (Electricity Bill Price) ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ (Karnataka Bandh) ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.

ಇದನ್ನೂ ಓದಿ: Gruha Jyoti Scheme: ಉಚಿತ ವಿದ್ಯುತ್‌ ಪಡೆಯಲು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್ಕಾಂನ ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಎಲ್ಲ ವ್ಯಾಪಾರಸ್ಥರು ಮತ್ತು ಕೈಗಾರಿಕೆಗಳು ತಮ್ಮ ವ್ಯವಹಾರವನ್ನು ಜೂ. 22ರಂದು ಬಂದ್‌ ಮಾಡಲು ವಾಣಿಜ್ಯೋದ್ಯಮ ಸಂಸ್ಥೆ ಕೋರಿದೆ.

ಕಳೆದ 8 ದಿನಗಳಿಂದ ವಿದ್ಯುತ್‌ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನತೆ ಹಾಗೂ ಕೈಗಾರಿಕೆಗಳ ಮೇಲೆ ಆಗುವ ಪರಿಣಾಮಗಳ ಕುರಿತು ಸರ್ಕಾರಕ್ಕೆ ಗಂಭೀರತೆ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆದರೆ, ಅಧಿಕಾರಿಗಳು ಮತ್ತು ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ತಿಳಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 pm, Sat, 17 June 23