ಹುಬ್ಬಳ್ಳಿ ಕುಚಿಕು ಗೆಳೆಯ ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ, ಬಿಕ್ಕಿ ಬಿಕ್ಕಿ ಅಳುತ್ತಾ ಅಂತಿಮ ನಮನ

ಇದಕ್ಕೂ ಮುನ್ನ ನಿನ್ನೆ ಗೆಳೆಯ ರಾಜು ಪಾಟೀಲ್ ಸಾವಿನ ಸುದ್ದಿ ಕೇಳಿ, ಮೌನಕ್ಕೆ ಶರಣಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜು ಪಾಟೀಲ್ ಅವರ ಸಾವಿಗೆ ಕಂಬನಿ ಮಿಡಿದು, ತಮ್ಮ ಮತ್ತು ಆತನ ಗೆಳೆತನದ ಬಗ್ಗೆ ಫೇಸ್​ಬುಕ್​ನಲ್ಲಿ ಬರೆದುಕೊಂಡರು.

ಹುಬ್ಬಳ್ಳಿ ಕುಚಿಕು ಗೆಳೆಯ ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ, ಬಿಕ್ಕಿ ಬಿಕ್ಕಿ ಅಳುತ್ತಾ ಅಂತಿಮ ನಮನ
ಹುಬ್ಬಳ್ಳಿ: ಕುಚಿಕು ಗೆಳೆಯ ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 16, 2021 | 11:12 AM

ಬೆಂಗಳೂರು: ಅವರದು ಬಾಲ್ಯ ಸ್ನೇಹ. ಒಬ್ಬರು ರಾಜು ಪಾಟೀಲ್; ಮತ್ತೊಬ್ಬರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ನಿನ್ನೆ ಬುಧವಾರ ರಾಜು ಪಾಟೀಲ್ ಅವರು ಅಕಾಲಿಕವಾಗಿ ವಿಧಿವಶರಾದರು. ಗೆಳೆಯನ ಅಗಲಿಕೆ ತಾಳದೆ, ಮನ ಮಿಡಿದ ಸಿಎಂ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಗೆ ತೆರಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್.ಟಿ. ನಗರದ ನಿವಾಸದಿಂದ ಏರ್‌ಪೋರ್ಟ್‌ಗೆ ತೆರಳಿ, ಕೆಐಎಬಿಯಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದ್ದಾರೆ. ಹುಬ್ಬಳ್ಳಿಯ ಶಕ್ತಿನಗರ ಬಡಾವಣೆಯ ನಿವಾಸಿ ರಾಜು ಪಾಟೀಲ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಆತ್ಮೀಯ ಸ್ನೇಹಿತ. ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

ಇದಕ್ಕೂ ಮುನ್ನ ನಿನ್ನೆ ಗೆಳೆಯನ ಸಾವಿನ ಸುದ್ದಿ ಕೇಳಿ, ಮೌನಕ್ಕೆ ಶರಣಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜು ಪಾಟೀಲ್ ಅವರ ಸಾವಿಗೆ ಕಂಬನಿ ಮಿಡಿದು, ತಮ್ಮ ಮತ್ತು ಆತನ ಗೆಳೆತನದ ಬಗ್ಗೆ ಫೇಸ್​ಬುಕ್​ನಲ್ಲಿ ಬರೆದುಕೊಂಡರು.

ಹುಬ್ಬಳ್ಳಿ ವರದಿ: ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದರು. ರಾಜು ಪಾಟೀಲ್ ಪಾರ್ಥಿವ ಶರೀರ ಕಂಡು ಸಿಎಂ ಬಿಕ್ಕಿ ಬಿಕ್ಕಿ ಅಳುತ್ತಾ, ಅಂತಿಮ ನಮನ ಸಲ್ಲಿಸಿದರು.

ಗೆಳೆಯನ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೇಸ್​ ಬುಕ್​​ ಪೋಸ್ಟ್​ ಸಾರಾಂಶ ಹೀಗಿದೆ:

ಸಹೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರು ಇಂದು ನಿಧನರಾಗಿದ್ದು, ನಾನು ತುಂಬಾ ದುಃಖಿತನಾಗಿದ್ದೇನೆ. ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು.

ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ನ ಜತೆ ಇರುತ್ತಿದ್ದರು. ಅವರ ಅಗಲಿಕೆಯು ನನಗೆ ಅತೀವ ದುಃಖ ತರಿಸಿದ್ದು, ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ.

(Karnataka chief minister basavaraj bommai lost childhood friend raju patil to attend funeral in hubballi)

ಇದನ್ನೂ ಓದಿ: ವಯೋಸಹಜ ಕಾಯಿಲೆಯಿಂದ ಸಾಕು ನಾಯಿ ಸಾವು, ದುಃಖ ಹಂಚಿಕೊಂಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

Published On - 8:16 am, Thu, 16 September 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ