ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಅವರನ್ನು ಇಂದು ಮಧ್ಯಾಹ್ನವೇ ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್​ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಸಾಧು ಶ್ರೀನಾಥ್​
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 16, 2021 | 5:06 PM

ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರನ್ನು ಇಂದು ಎಂ ಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಮಾಡಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಎಂ ಎಸ್​ ರಾಮಯ್ಯ ಆಸ್ಪತ್ರೆಯಿಂದ ಅವರನ್ನು ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಅವರ ಕಾರಿನಲ್ಲೇ ಶಿಫ್ಟ್​ ಮಾಡಲಾಗಿದೆ. ಅಂದಹಾಗೆ, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಎರಡನೆಯ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿಂದೆ ಕೊರೊನಾ ಸೋಂಕು ಬಂದಾಗ ಅವರಿಗೆ ಮಣಿಪಾಲ್​ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:16 pm, Fri, 16 April 21

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ