ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಮಾಡಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಎಂ ಎಸ್ ರಾಮಯ್ಯ ಆಸ್ಪತ್ರೆಯಿಂದ ಅವರನ್ನು ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಅವರ ಕಾರಿನಲ್ಲೇ ಶಿಫ್ಟ್ ಮಾಡಲಾಗಿದೆ. ಅಂದಹಾಗೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಎರಡನೆಯ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿಂದೆ ಕೊರೊನಾ ಸೋಂಕು ಬಂದಾಗ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು.
ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು
ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:16 pm, Fri, 16 April 21