ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು; ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ
ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ವೈದ್ಯರ ತಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ಇಟ್ಟು ಯಡಿಯೂರಪ್ಪ ಅವರನ್ನು ನೋಡಿಕೊಳ್ಳಲಾಗುತ್ತಿದೆ.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ (ಏ.16) ಕೊರೊನಾ ಸೋಂಕು ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ವೈದ್ಯರ ತಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ಇಟ್ಟು ಯಡಿಯೂರಪ್ಪ ಅವರನ್ನು ನೋಡಿಕೊಳ್ಳಲಾಗುತ್ತಿದೆ. ಸದ್ಯ ಬಿಎಸ್ವೈ ಆರೋಗ್ಯ ಸ್ಥಿರವಾಗಿರುವುದಾಗಿ ಮಾಹಿತಿ ಇದೆ.
ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ನಿನ್ನೆ ಮಧ್ಯಾಹ್ನ ಓಲ್ಡ್ ಏರ್ಪೊರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸಿಎಂ ದಾಖಲಾಗಿದ್ದಾರೆ. ನುರಿತ ವೈದ್ಯರ ತಂಡ ರಚಿಸಿ ನಿಗಾ ಇರಿಸಲಾಗಿದೆ. ಉಸಿರಾಟ ಸಂಬಂಧಿತ ಚಿಕಿತ್ಸೆ ಲಕ್ಷ್ಯ ವಹಿಸಲಾಗಿದೆ. ಸದ್ಯ ಸಿಎಂ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸಿಎಂ ಯಡಿಯೂರಪ್ಪ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿಪಾಲ್ನಲ್ಲಿ ಚಿಕಿತ್ಸೆ ಪಡಿಯುತ್ತಿರುವ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಭದ್ರತೆಗೆ 50 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜೀವನ್ ಭೀಮಾ ನಗರ ಪೊಲೀಸರಿಂದ ಆಸ್ಪತ್ರೆಗೆ ಭದ್ರತೆ ಕ್ರಮ ಕೈಗೊಂಡಿದ್ದು, ಆಸ್ಪತ್ರೆಯ 11 ನೇ ಮಹಡಿಯಲ್ಲಿ ಯಡಿಯೂರಪ್ಪ ಅವರಿಗೆ ಚಿಕಿತ್ಸೆ ಮುಂದುವರಿದೆ.
ಇದನ್ನೂ ಓದಿ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್ ಆಸ್ಪತ್ರೆಗೆ ದಾಖಲು
ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?
(Karnataka Chief minister BS Yediyurappa treatment continues at Manipal hospital in Bangalore)