ಸಿಎಂ ಯಡಿಯೂರಪ್ಪ ಮೊಮ್ಮಗಳು-ಅಳಿಯಗೆ ಕೊರೊನಾ ಪಾಸಿಟಿವ್; ಮೂವರಿಗೂ ಅಕ್ಕಪಕ್ಕದ ಬೆಡ್ಗಳಲ್ಲಿಯೇ ಚಿಕಿತ್ಸೆ
ಸೌಂದರ್ಯ ಜೊತೆಗೆ ಅವರ ಪತಿ ಡಾ ನಿರಂಜನಗೂ ಸಹ ಕೋವಿಡ್ ಪಾಸಿಟಿವ್ ಆಗಿದ್ದು, ಅವರೂ ಮೊನ್ನೆಯೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಿಎಂ ಹಾಗೂ ಅವರ ಮೊಮ್ಮಗಳು ಮತ್ತು ಮೊಮ್ಮಗಳ ಗಂಡ ಅಕ್ಕಪಕ್ಕದ ಬೆಡ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಮತ್ತು ಅಳಿಯನಿಗೆ ಕೊರೊನಾ ಸೋಂಕು ತಗುಲಿದೆ. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಸೌಂದರ್ಯ ಅವರ ಪತಿ ಡಾ.ನಿರಂಜನ್‌ಗೂ ಕೊರೊನಾ ಪಾಸಿಟಿವ್ ಆಗಿದೆ. ಏಪ್ರಿಲ್ 15ರಂದು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರಿ ಪದ್ಮಾವತಿ ಅವರ ಮಗಳಾದ ಡಾ. ಸೌಂದರ್ಯಗೆ ಕೋವಿಡ್ ಪಾಸಿಟಿವ್ ಆಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಆಗೋಕು ಮುಂಚೆಯೇ ಅಂದರೆ ಒಂದು ದಿನ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಸೌಂದರ್ಯ ಅಡ್ಮಿಟ್ ಆಗಿದ್ದಾರೆ.
ಸೌಂದರ್ಯ ಜೊತೆಗೆ ಅವರ ಪತಿ ಡಾ ನಿರಂಜನಗೂ ಸಹ ಕೋವಿಡ್ ಪಾಸಿಟಿವ್ ಆಗಿದ್ದು, ಅವರೂ ಮೊನ್ನೆಯೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಿಎಂ ಹಾಗೂ ಅವರ ಮೊಮ್ಮಗಳು ಮತ್ತು ಮೊಮ್ಮಗಳ ಗಂಡ ಅಕ್ಕಪಕ್ಕದ ಬೆಡ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಶಿವಮೊಗ್ಗದಲ್ಲಿ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಕೊರೊನಾ ಸೋಂಕು ಹಿನ್ನೆಲೆ ಬಿಎಸ್ ವೈ ಅಭಿಮಾನಿಗಳು ಮತ್ತು ಬಿಜೆಪಿ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ನಗರದಲ್ಲಿ ವಿಶೇಷ ಪೂಜೆ ನಡೆಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶೀಘ್ರ ಗುಣಮುಖ ಹೊಂದಲು ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆದಿವೆ.
(Karnataka chief minister bs yediyurappa grand daughter and son in law contract coronavirus treated in manipal hospital)
Published On - 9:35 am, Sat, 17 April 21