ಲಕ್ಷ್ಮೀ ಹೆಬ್ಬಾಳ್ಕರ್​​, ಸಿಟಿ ರವಿ ಕೇಸ್​ನಲ್ಲಿ ನನ್ನ ತೀರ್ಪೇ ಅಂತಿಮ: ಹೊರಟ್ಟಿ ಹೇಳಿಕೆಗೆ ಪರಮೇಶ್ವರ್​ ಹೇಳಿದ್ದಿಷ್ಟು

ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿರುವುದನ್ನು ವಿರೋಧಿಸಿ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​​, ಸಿಟಿ ರವಿ ಕೇಸ್​ನಲ್ಲಿ ನನ್ನ ತೀರ್ಪೇ ಅಂತಿಮ: ಹೊರಟ್ಟಿ ಹೇಳಿಕೆಗೆ ಪರಮೇಶ್ವರ್​ ಹೇಳಿದ್ದಿಷ್ಟು
ಜಿ ಪರಮೇಶ್ವರ್​, ಬಸವರಾಜ್​ ಹೊರಟ್ಟಿ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Jan 12, 2025 | 10:57 AM

ಬೆಂಗಳೂರು, ಜನವರಿ 12: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ (Laxmi Hebbalkar) ವಿರುದ್ಧ ವಿಧಾನಪರಿಷತ್​ ಸದಸ್ಯ ಸಿಟಿ ರವಿ (CT Ravi) ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣವನ್ನು ಸಿಐಡಿಗೆ (CID) ನೀಡುರುವ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಆಕ್ಷೇಪ ವ್ಯಕ್ತಪಡಿಸಿ ಗೃಹ ಸಚಿವ ಜಿ. ಪರಮೇಶ್ವರ್​ಗೆ ಪತ್ರ ಬರೆದಿದ್ದಾರೆ.

ಸಿಟಿ ರವಿ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಸದನದಲ್ಲಿ ನಡೆದ ಘಟನೆಯ ಬಗ್ಗೆ ಚರ್ಚಿಸುವುದು ಮತ್ತು ಮುಕ್ತಾಯ ಮಾಡುವ ಕುರಿತು ತೀರ್ಮಾನಿಸುವುವ ಸೌರ್ವಭೌಮತ್ವ ಅಧಿಕಾರ ಸದನಕ್ಕೆ ಇರುತ್ತದೆ. ಡಿ.19 ರಂದು ನಡೆದ ಘಟನೆಗೆ ಸಂಬಂಧಿಸಿ ಪರಾಮರ್ಶಿಸಿಕೊಂಡು ಪೀಠದ ತೀರ್ಪು ನೀಡಲಾಗಿದೆ. ಸದನದ ಆವರಣದ ಒಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಸಭಾಪತಿಗಿದೆ. ಸಭಾಪತಿಗೆ ಪ್ರದತ್ತವಾಗಿದೆ, ಸಭಾಪತಿ ತೀರ್ಪೇ ಇದರಲ್ಲಿ ಅಂತಿಮ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಾಸಕಾಂಗಕ್ಕೆ ಮತ್ತು ಸಭಾಪತಿಯವರಿಗೆ ಪ್ರದತ್ತವಾದ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗವು ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಸಾಂವಿಧಾನಿಕ ಸಂಘರ್ಷಣೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಭಾಸವಾಗುತ್ತಿದೆ. ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷದ ಪ್ರಮೇಯ ನಿರ್ಮಾಣ ಆಗಬಾರದು ಎಂದಿದ್ದಾರೆ.

ಇದನ್ನೂ ಓದಿ: ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲವೆಂದ ಸಿಟಿ ರವಿ: ತನಿಖೆಗೆ ಒತ್ತಾಯ

ಘಟನೆ ಸಭಾಪತಿಯವರ ಕಾರ್ಯವ್ಯಾಪ್ತಿಗೆ ಬರುತ್ತೆಂದು ತಮಗೆ ತಿಳಿದಿರುವ ವಿಚಾರ. ಕಾರ್ಯಾಂಗ ಮತ್ತು ಶಾಸಕಾಂಗದ ನಾವಿಬ್ಬರೂ ಪರಸ್ಪರ ಗೌರವದೊಂದಿಗೆ. ನಮ್ಮ ನಮ್ಮ ಕರ್ತವ್ಯ ನಿರ್ವಹಿಸಬೇಕಿದೆ. ತಾವೂ ಸಂವಿಧಾನದ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವುಳ್ಳವರು, ಸಂವಿಧಾನದ ಅಡಿಯಲ್ಲೇ ಕರ್ತವ್ಯವನ್ನು ನಿರ್ವಹಿಸುತ್ತೀರಿ ಎಂಬ ವಿಶ್ವಾಸ ಇದೆ. ಸಭಾಪತಿಯವರ ಹಕ್ಕುಗಳನ್ನು, ಸದನದ ಸಾರ್ವಭೌಮತ್ವ ಗಮನದಲ್ಲಿಟ್ಟುಕೊಂಡು ಪ್ರಕರಣವನ್ನು ನಿರ್ವಹಿಸುತ್ತೀರಿ ಎಂದು ನಂಬುತ್ತೇನೆ ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಹೊರಟ್ಟಿ ತಿಳಿಸಿದ್ದಾರೆ.

ನನಗೆ ಇನ್ನೂ ಪತ್ರ ತಲುಪಿಲ್ಲ: ಪಮೇಶ್ವರ್​

ಸಭಾಪತಿ ಬಸವರಾಜ ಹೊರಟ್ಟಿಯವರು ಬರೆದ ಪತ್ರ ನನಗೆ ಇನ್ನೂ ತಲುಪಿಲ್ಲ, ಕಚೇರಿಗೆ ತಲುಪಿದೆಯಾ ನೋಡುತ್ತೇನೆ. ಕಾನೂನು ಸಲಹೆಗಾರರ ಸಲಹೆ ಪಡೆದು ನಿರ್ಧಾರ ಮಾಡುತ್ತೇನೆ. ಕಾನೂನು ಎಲ್ಲರಿಗೂ ಒಂದೇ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗುತ್ತೆ. ಸಚಿವೆ ಲಕ್ಷ್ಮೀ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅನವಶ್ಯಕ ಗೊಂದಲ ಆಗಬಾರದು ಅಂತಾ ಸಿಐಡಿಗೆ ಕೊಟ್ಟಿದ್ದೇವೆ. ಸಭಾಪತಿ ಮತ್ತು ಸರ್ಕಾರದ ನಡುವೆ ಯಾವುದೇ ಸಂಘರ್ಷ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್​ ಸ್ಪಷ್ಟಪಡಿಸಿದರು.

ಏನಿದು ಪ್ರಕರಣ

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಅಮಿತ್‌ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡೆಯವಾಗ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು.

ನನ್ನ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:56 am, Sun, 12 January 25

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?