ರಾಜ್ಯ ಸಿವಿಲ್ ಸೇವೆ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ
ಕರ್ನಾಟಕ ಸರ್ಕಾರವು ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದಿದೆ. 2024ರ ನವೆಂಬರ್ 25ರ ಸುತ್ತೋಲೆಯನ್ನು ಉಲ್ಲಂಘಿಸಿ ಕೆಲವು ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿರುವುದರಿಂದ ಈ ನಿರ್ಧಾರ. ನವೆಂಬರ್ 28ರ ನಂತರದ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ರದ್ದುಗೊಳಿಸಲು ಸರ್ಕಾರ ಸೂಚಿಸಿದೆ.

ಬೆಂಗಳೂರು, ಏಪ್ರಿಲ್ 11: ರಾಜ್ಯ ಸಿವಿಲ್ ಸೇವೆಗಳಲ್ಲಿನ (State Civil Service) ಹುದ್ದೆಗಳ ನೇಮಕಾತಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರ (Karnataka Government) ಸುತ್ತೋಲೆ ಹೊರಡಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು 2024ರ ನವೆಂಬರ್ 25 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಆದರೂ ಕೂಡ ಕೆಲವು ನೇಮಕಾತಿ ಪ್ರಾಧಿಕಾರಿಗಳು ಈ ಸೂಚನೆ ಉಲ್ಲಂಘಿಸಿ ನೇರ ನೇಮಕಾರಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಹೀಗಾಗಿ 2024ರ ನವೆಂಬರ್ 28ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಸರ್ಕಾರ ಸೂಚಿಸಿದೆ.
ಸಿದ್ದರಾಮಯ್ಯ ಟ್ವೀಟ್
ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ… pic.twitter.com/UV1auzSm7X
— Siddaramaiah (@siddaramaiah) April 11, 2025
ಇದನ್ನೂ ಓದಿ: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. “ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ವರದಿ: ಈರಣ್ಣ ಬಸವ