Cabinet Decisions: 2,859 ಆರೋಗ್ಯ ಉಪ ಕೇಂದ್ರಗಳು ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ: ಸಿಎಂ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಸರ್ಕಾರಿ ಅನುದಾನಿತ ಶಾಲಾಕಾಲೇಜುಗಳಲ್ಲಿ ಶುಚಿ ಯೋಜನೆಗೆ 47 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದ್ದು, 2,859 ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 478 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಖಾತೆ ಹಂಚಿಕೆ ಬಳಿಕ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ಸಭೆಗೆ ಸಚಿವ ಆನಂದ್ ಸಿಂಗ್ ಮತ್ತು ಶ್ರೀರಾಮುಲು ಗೈರಾಗಿದ್ದರು. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಸಂಪುಟ ಉಪ ಸಮಿತಿಗಳನ್ನು ವಿಸರ್ಜಿಸಲಾಗಿತ್ತು. 14 ಸಂಪುಟ ಉಪ ಸಮಿತಿ ರಚನೆಗೆ ಸಿಎಂಗೆ ಅಧಿಕಾರ ನೀಡಲಾಗಿದೆ. ವಿಧೇಯಕ 2021ರ ಡ್ರಾಫ್ಟ್ ನಿಯಮಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಅನುದಾನಿತ ಶಾಲಾಕಾಲೇಜುಗಳಲ್ಲಿ ಶುಚಿ ಯೋಜನೆಗೆ 47 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದ್ದು, 2,859 ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 478 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಕೇಂದ್ರಗಳಲ್ಲಿ ಬಿಎಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ನೇಮಕಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ ಸಚಿವ ಮಾಧುಸ್ವಾಮಿ, ಪರಿಕರ ಖರೀದಿ, ಕಟ್ಟಡ ಬಾಡಿಗೆಗೂ ಯೋಜನೆ ಅಡಿ ಅವಕಾಶ ಮಾಡಲಾಗಿದೆ. ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ಅಡಿಯಲ್ಲಿ ಕೆಲವು ಯೋಜನೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ದಿನಾಚರಣೆ ದಿನ ಘೋಷಿಸಿದ್ದ 11 ಯೋಜನೆಗಳಿಗೆ ಸಂಪುಟ ಸಭೆಯ ಸಮ್ಮತಿ ನೀಡಲಾಗಿದೆ. ಸ್ವಚ್ಛ ಸುಂದರ ನಗರ ಯೋಜನೆಗೆ 75 ಕೋಟಿ, 750 ಪಿಹೆಚ್ಸಿಗಳಿಗೆ 150 ಕೋಟಿ ರೂಪಾಯಿ ನೀಡಲು ಸಂಪುಟ ನಿರ್ಧರಿಸಿದೆ ಎಂದು ಸಚಿವರು ಹೇಳಿದರು.
ಎಲ್ಲ ಯೋಜನೆಗಳಿಗೆ ಹಣಕಾಸು ಇಲಾಖೆ ಸಹಮತಿ ಇದೆ. ಹಣಕಾಸು ಇಲಾಖೆ ಸಮರ್ಥವಾಗಿದೆ. ಕೊವಿಡ್ 3ನೇ ಅಲೆಯ ಆತಂಕ ಸದ್ಯಕ್ಕೆ ಕಂಡುಬಂದಿಲ್ಲ. ಹೀಗಾಗಿ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ. ಇಂದಿರಾ ಕ್ಯಾಂಟಿನ್ ವಿಚಾರದಲ್ಲಿ ಕ್ಯಾಬಿನೆಟ್ನಲ್ಲಿ ಯಾವುದೇ ಚರ್ಚೆ ಆಗಿಲ್ಲ ಅಂತ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ:
‘ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್’ ಧಾರಾವಾಹಿಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲ; ಹೊಸ ಯುಗ ಶುರು
(Karnataka CM Basavaraj Bommai Cabinet Decisions 2859 Primary Health Centre Upgraded as Health Centers)