750 ಗ್ರಾಮ ಪಂಚಾಯತ್ಗಳಲ್ಲಿ ವಸತಿ ಯೋಜನೆ; ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸೂಚನೆ
Basavaraj Bommai: ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿ ಯೋಜನೆ ವಿಚಾರವಾಗಿ ಸಿಎಂ ಬೊಮ್ಮಾಯಿ ಮಹತ್ವದ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ. ಆಯ್ಕೆ ಪ್ರಕ್ರಿಯೆ ಕೂಡಲೇ ಆರಂಭಿಸುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ, ಟಿವಿ9 ಸ್ಟುಡಿಯೋದಲ್ಲಿ ಸಿಎಂ ಅಧಿಕೃತ ಆದೇಶ ಪ್ರಕಟಿಸಿದ್ದರು. ಇದೀಗ, ಫಲಾನುಭವಿಗಳ ಆಯ್ಕೆಗೆ ಸರ್ಕಾರ ಆದೇಶ ಪ್ರಕಟಿಸಿದೆ.
ಯೋಜನೆಯ ಅನ್ವಯ ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆ ನಿರ್ಮಾಣ ಮಾಡಲಾಗುತ್ತದೆ. ನಗರ, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ನಿವಾಸ ನೀಡಲಾಗುತ್ತದೆ. ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.
ಈ ಬಾರಿಯ 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ದಿನ, ಆಗಸ್ಟ್ 15 ರಂದು ಬೊಮ್ಮಾಯಿ ಈ ಯೋಜನೆ ಘೋಷಿಸಿದ್ದರು. ನಿನ್ನೆ (ಸಪ್ಟೆಂಬರ್ 9) ಯೋಜನೆಯ ಬಗ್ಗೆ ಟಿವಿ9 ಸ್ಟುಡಿಯೋದಲ್ಲಿ ಆದೇಶ ಪ್ರಕಟಿಸಿದ್ದರು. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.
ಇದನ್ನೂ ಓದಿ: ಬೀದರ್ ಗಡಿಭಾಗದ 14 ಹಳ್ಳಿಗಳಿಗೆ ಈಗಲೂ ರಸ್ತೆಯಿಲ್ಲ, ಬಸ್ಸಿಲ್ಲ; ಶಾಲಾಮಕ್ಕಳ ಬವಣೆ ವೀಕ್ಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಇದನ್ನೂ ಓದಿ: ಬೊಮ್ಮಾಯಿ ಸೂತ್ರದ ಬೊಂಬೆ ಸೂತ್ರಧಾರಿ ಯಡಿಯೂರಪ್ಪ; ಅವರೇ ಸರ್ಕಾರ ನಡೆಸುತ್ತಿದ್ದಾರೆ ಎಂದರು ಕೋಡಿಮಠ ಸ್ವಾಮೀಜಿ