AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಎಲ್ಲರೂ ವರ್ತಿಸಬೇಕು; ಶಾಂತಿಯಿಂದ ಇರಲು ವಿದ್ಯಾರ್ಥಿಗಳಿಗೆ ಮನವಿ: ಸಿಎಂ ಬೊಮ್ಮಾಯಿ

ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಯಾರೂ ಪ್ರಚೋದನೆ ಮಾಡುವ ಕೆಲಸ ಮಾಡಬಾರದು. ಹೈಕೋರ್ಟ್ ಆದೇಶ ಬರುವವರೆಗೆ ತಾಳ್ಮೆಯಿಂದ ಇರಬೇಕು. ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಎಲ್ಲರೂ ವರ್ತಿಸಬೇಕು ಎಂದು ಸಿಎಂ ಬೊಮ್ಮಾಯಿ ಕೇಳಿಕೊಂಡಿದ್ದಾರೆ.

ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಎಲ್ಲರೂ ವರ್ತಿಸಬೇಕು; ಶಾಂತಿಯಿಂದ ಇರಲು ವಿದ್ಯಾರ್ಥಿಗಳಿಗೆ ಮನವಿ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ganapathi bhat|

Updated on:Feb 08, 2022 | 5:40 PM

Share

ದೆಹಲಿ: ಕಾಲೇಜುಗಳಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ವಿಚಾರವಾಗಿ ಹಲವು ತೀರ್ಪು ಬಂದಿದೆ. ಕರ್ನಾಟಕ ಹೈಕೋರ್ಟ್‌ನಲ್ಲೂ ವಿಚಾರಣೆ ನಡೆಯುತ್ತಿದೆ. ವಿದ್ಯಾರ್ಥಿಗಳಲ್ಲಿ ಸೌಹಾರ್ದತೆ ಇರಬೇಕು. ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಯಾರೂ ಪ್ರಚೋದನೆ ಮಾಡುವ ಕೆಲಸ ಮಾಡಬಾರದು. ಹೈಕೋರ್ಟ್ ಆದೇಶ ಬರುವವರೆಗೆ ತಾಳ್ಮೆಯಿಂದ ಇರಬೇಕು. ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಎಲ್ಲರೂ ವರ್ತಿಸಬೇಕು. ಇದಕ್ಕೆ ಬೇರೆ ಬಣ್ಣವನ್ನು ಕೊಡುವ ಕೆಲಸ ಮಾಡುವುದು ಬೇಡ ಎಂದು ಸಿಎಂ ಬೊಮ್ಮಾಯಿ ಕೇಳಿಕೊಂಡಿದ್ದಾರೆ.

ಹೈಕೋರ್ಟ್‌ ತೀರ್ಪು ಬರುವವರೆಗೂ ಶಾಂತಿ ಕಾಪಾಡಬೇಕು. ಯಾರೂ ಕೂಡಾ ಪ್ರಚೋದನಾಕಾರಿ ಹೇಳಿಕೆ ನೀಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಕ್ತ ಸೂಚನೆ ಕೊಡಲಾಗಿದೆ. ಯಾವುದೇ ಕಾರಣಕ್ಕೂ ಶಾಂತಿ ಭಂಗ ತರಲು ಬಿಡುವುದಿಲ್ಲ. ಶಾಂತಿಯಿಂದ ಇರಲು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮನವಿ ಮಾಡಲಾಗಿದೆ. ಹಿಜಾಬ್ ವಿವಾದದ ಸಂಬಂಧವೂ ಪರಿಹಾರ ಸಿಗುವ ವಿಶ್ವಾಸ ಇದೆ. ಹೈಕೋರ್ಟ್ ತೀರ್ಪಿನ ನಂತರ ಪರಿಹಾರ ಸಿಗುವ ವಿಶ್ವಾಸ ಇದೆ. ಗಲಭೆ ಆಗಿರುವ ಪ್ರದೇಶಗಳಲ್ಲಿ, ತೊಂದರೆಯಾಗಿರುವ ಕಡೆ ನಾಳೆಯೂ ಶಾಲೆ ಬಂದ್ ಮಾಡಲು ಸೂಚನೆ ನೀಡಲಾಗಿದೆ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಅಲ್ಲದೆ, ಮೂರು ದಿನಗಳ ಕಾಲ ಶಾಲಾ- ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹೀಗೆ ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ. ಸಂಬಂಧಿಸಿದ ಎಲ್ಲರೂ ಸಹಕರಿಸಿ ಎಂದು ಸಿಎಂ ಬೊಮ್ಮಾಯಿ ಕೇಳಿಕೊಂಡಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿ

ನಾಳೆ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿ ಮಾಡಲಾಗಿದೆ. ಹಿಜಾಬ್‌, ಕೇಸರಿ ಶಾಲು ವಿವಾದದ ಬಗ್ಗೆ ಚರ್ಚೆ ಸಾಧ್ಯತೆ ಇದೆ. ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸುವ ಬಗ್ಗೆ ಹೇಳಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂ ಚರ್ಚಿಸುವ ಸಾಧ್ಯತೆ ಇದೆ. ಈಗಾಗಲೇ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಿಎಂ ಮಾಹಿತಿ ಸಂಗ್ರಹ ಮಾಡಿದ್ದಾರೆ. ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ನಾಳೆ (ಫೆಬ್ರವರಿ 9) ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.

ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಇದನ್ನೂ ಓದಿ: Hijab: ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ, ಮಂಗಳೂರು, ಹಾಸನ, ಹರಿಹರದಲ್ಲಿ ಪ್ರತಿಭಟನೆ

Published On - 5:38 pm, Tue, 8 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ