AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ನೀಡಲು ಕೇಂದ್ರ ಒಪ್ಪಿದೆ: ಸಿಎಂ ಬೊಮ್ಮಾಯಿ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ  ಆರೋಪಿಗಳು ಯಾರೇ ಆಗಿರಲಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ  ಸ್ಪಷ್ಟ ಆದೇಶ ನೀಡಿದ್ದೇನೆ. ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ‌ ಇಲ್ಲ ಹಾಗೂ ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ನೀಡಲು ಕೇಂದ್ರ ಒಪ್ಪಿದೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 26, 2021 | 10:12 PM

Share

ದೆಹಲಿ: ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. ಇಂದು ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗ ಪ್ರತಿ ದಿನ 3.5 ಲಕ್ಷದಿಂದ 4 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಡೋಸ್ ಲಸಿಕೆ ಹಾಕಲು ರಾಜ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬ ಸಂಗತಿಯನ್ನು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಯಿತು. ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದರು ಎಂದು ಸಿಎಂ ತಿಳಿಸಿದರು.

ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದೆ. ದೇಶದಲ್ಲಿಯೇ ಮೊಟ್ಟ ಮೊದಲ ರಾಜ್ಯವಾಗಿ ಕರ್ನಾಟಕ ಅನುಷ್ಠಾನಕ್ಕೆ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರೋಪಿ ಯಾರೇ ಇದ್ದರೂ ಬಿಡುವುದಿಲ್ಲ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ  ಆರೋಪಿಗಳು ಯಾರೇ ಆಗಿರಲಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ  ಸ್ಪಷ್ಟ ಆದೇಶ ನೀಡಿದ್ದೇನೆ. ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ‌ ಇಲ್ಲ ಹಾಗೂ ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ ಪ್ರತಾಪ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಬಳಿ ಮಾತನಾಡಿದ್ಧೇನೆ.  ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ  ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.  ತನಿಖೆ ಚುರುಕಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದರು. ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ.  ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡುತ್ತಾರೆಂದು  ತಿಳಿಸಿದರು.

ಇದನ್ನೂ ಓದಿ: ‘ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಹೇಳಿಕೆ ಹಿಂಪಡೆಯುವೆ, ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

(Karnataka CM Basavaraj Bommai says union government has agreed to give 5 lakh Covid vaccine every day to the state)

Published On - 10:09 pm, Thu, 26 August 21