ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ; ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ

Karnataka- Maharashtra Border Row: ನಾನು ಈಗಾಗಲೇ ಗಡಿ ವಿಚಾರದಲ್ಲಿ ರಾಜ್ಯದ ನಿಲುವಿನ ಬಗ್ಗೆ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ. ಈ ಬಗ್ಗೆ ನಮ್ಮ ಸರ್ಕಾರ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುವ ಸಾಧ್ಯತೆಯಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ; ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
| Updated By: ಸುಷ್ಮಾ ಚಕ್ರೆ

Updated on: Dec 10, 2022 | 1:34 PM

ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ (Karnataka- Maharashtra Border Dispute) ಸಂಬಂಧಿಸಿದಂತೆ ಮುಂದಿನ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವ ಸಾಧ್ಯತೆಯಿದೆ. ಈಗಾಗಲೇ ಮಹಾರಾಷ್ಟ್ರದ ನಿಯೋಗ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಮಹಾರಾಷ್ಟ್ರದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನಿಲುವು ಮತ್ತು ವಾಸ್ತವದ ಕುರಿತು ವಿವರಗಳನ್ನು ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾನು ಈಗಾಗಲೇ ಗಡಿ ವಿಚಾರದಲ್ಲಿ ರಾಜ್ಯದ ನಿಲುವಿನ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ. ಈ ಬಗ್ಗೆ ಚರ್ಚಿಸಲು ನಮ್ಮ ಸರ್ಕಾರ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಕಾಸ್ ಅಘಾಡಿ (ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಒಕ್ಕೂಟ) ಸಂಸದರ ನಿಯೋಗ ಶುಕ್ರವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಈ ಹೇಳಿಕೆ ನೀಡಿದ್ದಾರೆ. ಈಗಾಗಲೇ ನಾನು ನಮ್ಮ ಸಂಸದರ ನಿಯೋಗಕ್ಕೆ ಸೋಮವಾರ ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಹೇಳಿದ್ದೇನೆ. ನಾನು ಅಮಿತ್ ಶಾ ಅವರೊಂದಿಗೂ ಮಾತನಾಡಿದ್ದೇನೆ. ಅವರು ಮಾಹಿತಿ ಕಳುಹಿಸುವುದಾಗಿ ಹೇಳಿದ್ದಾರೆ. ಮುಂದಿನ 2-3 ದಿನಗಳಲ್ಲಿ ಅವರು ನನಗೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಕರೆ ಮಾಡಲಿದ್ದಾರೆ. ಬಹುಶಃ ಆ ಸಭೆಯು ಡಿಸೆಂಬರ್ 14 ಅಥವಾ 15ರಂದು ನಡೆಯಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Belagavi border row: ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನಿಲುವು ಮತ್ತು ವಾಸ್ತವಾಂಶದ ಬಗ್ಗೆ ಈಗಾಗಲೇ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ. ಸೋಮವಾರ ನಮ್ಮ ಸಂಸದರು ಎಲ್ಲಾ ವಿವರಗಳನ್ನು ಹಂಚಿಕೊಳ್ಳುತ್ತಾರೆ. ಅಮಿತ್ ಶಾ ಫೋನ್ ಮಾಡಿದ ತಕ್ಷಣ ನಾನು ಕೂಡ ಹೋಗಿ ಅವರ ಮುಂದೆ ಕರ್ನಾಟಕದ ನಿಲುವನ್ನು ಪುನರುಚ್ಚರಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನಿಯೋಗ ಅಮಿತ್ ಶಾ ಅವರನ್ನು ಭೇಟಿ ಮಾಡುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ನಿನ್ನೆ ರಾತ್ರಿ ಟ್ವೀಟ್ ಮಾಡಿದ್ದರು. ಅಲ್ಲದೆ, ತಮ್ಮ ಸರ್ಕಾರವು ಈ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಗಡಿ ವಿವಾದ: ಅಮಿತ್​ ಶಾ ಭೇಟಿಯಾದ ಮಹಾರಾಷ್ಟ್ರ ನಾಯಕರು, ಕರ್ನಾಟಕದ ವಿರುದ್ಧ ದೂರು

ಗಡಿ ವಿವಾದದ ಕುರಿತು ಚರ್ಚಿಸಲು ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ ಬಗ್ಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಇಬ್ಬರೊಂದಿಗೂ ನಾನು ಮಾತನಾಡುತ್ತೇನೆ. ನಿನ್ನೆ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿ ಮುಂದಿನ ಬೆಳವಣಿಗೆಗಳ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದ್ದೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರ ಬಳಿಯೂ ಮಾತನಾಡುತ್ತೇನೆ ಎಂದಿದ್ದಾರೆ.

ಈಗಾಗಲೇ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಪರಸ್ಪರ ದೂರವಾಣಿ ಮೂಲಕ ಮಾತನಾಡಿ ಎರಡೂ ಕಡೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಒಪ್ಪಿಗೆ ಸೂಚಿಸಿದ್ದಾರೆ. ಹಿಂದಿನ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿದ್ದ ಬೆಳಗಾವಿಯ ಮೇಲೆ ಮಹಾರಾಷ್ಟ್ರವು ಹಕ್ಕು ಸಾಧಿಸಿತ್ತು. ಇದು ಮರಾಠಿ ಭಾಷೆಯನ್ನು ಹೆಚ್ಚು ಮಾತನಾಡುವ ಜನಸಂಖ್ಯೆಯನ್ನು ಹೊಂದಿದೆ. ಹೀಗಾಗಿ, ಮಹಾರಾಷ್ಟ್ರ ಪ್ರಸ್ತುತ ಕರ್ನಾಟಕದ ಭಾಗವಾಗಿರುವ 814 ಮರಾಠಿ ಮಾತನಾಡುವ ಹಳ್ಳಿಗಳಿಗೆ ಹಕ್ಕು ಸಲ್ಲಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ