ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಮಾತುಕತೆ
Basavaraj Bommai: ಅಂದಾಜು 200 ಮಂದಿ ರಾಜ್ಯದ ವಿದ್ಯಾರ್ಥಿಗಳು ಕಾರಕಿವ್ ನಲ್ಲಿ ಇದ್ದಾರೆ. ಗಗನಗೌಡ ಎಂಬ ಬೆಂಗಳೂರಿನ ಮೂಲದ ವಿದ್ಯಾರ್ಥಿ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜತೆ ಸಿಎಂ ಮಾತನಾಡಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಉಪಸ್ಥಿತರಿದ್ದರು.
ಬೆಂಗಳೂರು: ಉಕ್ರೇನ್ ನಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (Karnataka CM Basavaraj Bommai) ಇಂದು ದೂರವಾಣಿ ಮೂಲಕ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ‘ಕಾರಕೀವ್ ದಿಂದ 30 ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಇದನ್ನು ಆಲಿಸುತ್ತಾ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಅಂದಾಜು 200 ಮಂದಿ ರಾಜ್ಯದ ವಿದ್ಯಾರ್ಥಿಗಳು ಕಾರಕಿವ್ ನಲ್ಲಿ ಇದ್ದಾರೆ. ಗಗನಗೌಡ ಎಂಬ ಬೆಂಗಳೂರಿನ ಮೂಲದ ವಿದ್ಯಾರ್ಥಿ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜತೆ ಸಿಎಂ ಮಾತನಾಡಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಉಪಸ್ಥಿತರಿದ್ದರು.
ನವೀನ್ ಕುಟುಂಬಕ್ಕೆ ಪರಿಹಾರವನ್ನು ನೀಡುತ್ತೇವೆ, ಯುದ್ಧದಿಂದ ಮೃತದೇಹ ತರಲು ಕಷ್ಟ; ಸಿಎಂ ಬೊಮ್ಮಾಯಿ ಬೆಂಗಳೂರು: ಉಕ್ರೇನ್ಗೆ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ನವೀನ್ ರಷ್ಯಾ ದಾಳಿಗೆ ಬಲಿಯಾಗಿದ್ದಾರೆ. ಕನ್ನಡಿಗ ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಅಂತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವೀನ್ ಮೃತದೇಹ ಹೋಲುವ ಕೆಲ ಫೋಟೋ ಬಂದಿದೆ. ನವೀನ್ ಸ್ನೇಹಿತರು ಫೋಟೋಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಭಾರತದ ರಾಯಭಾರ ಕಚೇರಿ ಜತೆ ಚರ್ಚೆ ಮಾಡುತ್ತೇನೆ. ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತೇವೆ. ಯುದ್ಧ ನಡೆಯುತ್ತಿರುವ ಹಿನ್ನೆಲೆ ಸ್ವಲ್ಪ ಕಷ್ಟವಾಗುತ್ತಿದೆ ಅಂತ ಬೊಮ್ಮಾಯಿ ತಿಳಿಸಿದರು.
ಯುದ್ಧ ನೆಲೆಯಿಂದ ಕನ್ನಡಿಗರನ್ನು ಕರೆತರುತ್ತೇವೆ ಎಂದು ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ, ನವೀನ್ ಜತೆಗಿದ್ದ ಸ್ನೇಹಿತರ ಮಾಹಿತಿ ಕಲೆಹಾಕುತ್ತಿದ್ದೇವೆ. ಇಂತಹ ವಿಚಾರದಲ್ಲೂ ರಾಜಕೀಯ ಮಾಡಬಾರದು. ಯುದ್ಧದ ಸಮಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾತನಾಡುತ್ತದೆ. ಅಂದರೆ ಕಾಂಗ್ರೆಸ್ ಎಷ್ಟು ತಳ ಮಟ್ಟಕ್ಕೆ ಹೋಗಿದೆ ಅನ್ನೋದು ಗೊತ್ತಾಗುತ್ತದೆ. ಈ ಹಿಂದೆ ಯುದ್ಧ ನಡೆದಾಗ ಒಬ್ಬರನ್ನು ಕರೆತರಲಿಲ್ಲ. ಈಗ ರಾಜಕಾರಣ ಮತನಾಡುತ್ತಿದ್ದಾರೆ ಅಂತ ಹೇಳಿದರು.
Published On - 3:16 pm, Thu, 3 March 22