15ರಿಂದ 18 ವರ್ಷದ ಮಕ್ಕಳಿಕೆ ಲಸಿಕೆ; ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್
15ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸುತ್ತಿದ್ದಂತೆ ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ನರೇಂದ್ರ ಮೋದಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ.
ಬೆಂಗಳೂರು: ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಅದು ಲಸಿಕೆ (Vaccine). ಎರಡು ಡೋಸ್ ಲಸಿಕೆ ಪಡೆದವರು ಕೊರೊನಾ ಸೋಂಕಿನ ವಿರುದ್ಧ ಗೆಲ್ಲಬಹುದು. ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ನಿನ್ನೆ (ಡಿ.26) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಜನರಿಗೆ ಸಿಹಿಸುದ್ದಿ ನೀಡಿದ್ದಾರೆ. 15ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುತ್ತೇವೆ. ಹೊಸವರ್ಷದ ಮೊದಲ ತಿಂಗಳು ಅಂದರೆ ಜನವರಿ ಮೂರರಿಂದ ಮಕ್ಕಳಿಗೆ ಲಸಿಕೆ ವಿತರಣೆ ಆರಂಭವಾಗಲಿದೆ ಅಂತ ತಿಳಿಸಿದ್ದಾರೆ.
15ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸುತ್ತಿದ್ದಂತೆ ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಟ್ವೀಟ್ ಮೂಲಕ ನರೇಂದ್ರ ಮೋದಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ.
ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಜಿಯವರ ಕೊವಿಡ್ ವಿರುದ್ಧದ ಹೋರಾಟವನ್ನು ಸ್ವಾಗತಿಸುತ್ತೇನೆ. ಅವರ ದೂರದೃಷ್ಟಿ, ಪ್ರಯತ್ನ ಹಾಗೂ ನಿರ್ಣಯಗಳು ಕೊವಿಡ್ ವಿರುದ್ಧದ ಹೋರಾಟವನ್ನು ಯಶಸ್ವಿಗೊಳಿಸುತ್ತದೆ ಎಂಬ ಸಂಪೂರ್ಣವಾದ ನಂಬಿಕೆಯಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿಯವರ ನಿರ್ಣಯ ಹಾಗೂ ಸಲಹೆಯನ್ನು ದೇಶ ಮತ್ತು ರಾಜ್ಯದ ಜನತೆ ಗಂಭೀರವಾಗಿ ಪರಿಗಣಿಸಿ ಅದನ್ನು ಕಾರ್ಯರೂಪಕ್ಕೆ ತಂದಿದೆ. ಆದರೆ ಮಕ್ಕಳು, ಆರೋಗ್ಯ ಸೇವಾ ಕಾರ್ಯಕರ್ತರು, ವಯೋವೃದ್ಧರನ್ನು ಮಹಾಮಾರಿ ಕೊವಿಡ್ನಿಂದ ಸಂಪೂರ್ಣವಾಗಿ ರಕ್ಷಿಸಲು ಸಾಧ್ಯವಾಗುತ್ತದೆ. ಈ ನಿರ್ಧಾರ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ ಅಂತ ಸಿಎಂ ಟ್ವೀಟ್ ಮಾಡಿದ್ದಾರೆ.
ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ಕೋವಿಡ್ ವಿರುದ್ಧದ ಹೋರಾಟವನ್ನು ಸ್ವಾಗತಿಸುತ್ತೇನೆ. ಅವರ ದೂರದೃಷ್ಟಿ, ಪ್ರಯತ್ನ ಹಾಗೂ ನಿರ್ಣಯಗಳು ಕೋವಿಡ್ ವಿರುದ್ಧದ ಹೋರಾಟವನ್ನು ಯಶಸ್ವಿಗೊಳಿಸುತ್ತದೆ ಎಂಬ ಸಂಪೂರ್ಣವಾದ ನಂಬಿಕೆಯಿದೆ. 1/3@narendramodi @AmitShah @JPNadda @BJP4Karnataka
— Basavaraj S Bommai (@BSBommai) December 25, 2021
ಇದನ್ನೂ ಓದಿ
PM Narendra Modi Speech: 15 ವರ್ಷ ದಾಟಿದ ಮಕ್ಕಳಿಗೆ ಲಸಿಕೆ, ಜನವರಿ 3ರಿಂದ ಜಾರಿ: ನರೇಂದ್ರ ಮೋದಿ
ಬಾಗಲಕೋಟೆ: ರಂಗೋಲಿಯಲ್ಲಿ ಅರಳಿತು ಅಪ್ಪು ಭಾವಚಿತ್ರ; ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ಜನ