AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ರಿಲೀಫ್: ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ತಡೆ

ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಯಡಿಯೂರಪ್ಪ ವಿರುದ್ಧ 2011ರಲ್ಲಿ ಅಲಂ ಪಾಷಾ ದೂರು ಸಲ್ಲಿಸಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ ಜತೆ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಆರೋಪ ಎದುರಿಸುತ್ತಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ರಿಲೀಫ್: ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ತಡೆ
ಸಿಎಂ ಬಿ.ಎಸ್​. ಯಡಿಯೂರಪ್ಪ
guruganesh bhat
|

Updated on:Apr 05, 2021 | 12:37 PM

Share

ದೆಹಲಿ: ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ ಭೂಮಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಐಟಿ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಆರೋಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಕೇಳಿಬಂದಿತ್ತು. ನಂತರ ಲೋಕಾಯುಕ್ತ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. 

ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಯಡಿಯೂರಪ್ಪ ವಿರುದ್ಧ 2011ರಲ್ಲಿ  ಅಲಂ ಪಾಷಾ ದೂರು ಸಲ್ಲಿಸಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ ಜತೆ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಆರೋಪ ಎದುರಿಸಿದ್ದರು.

ಏನಿದು ಪ್ರಕರಣ? ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿ ಕೆಐಎಡಿಬಿ  ಸುಮಾರು 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. 2012ರಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿ ಅನುಸಾರ ಕ್ರಮ ಜರುಗಿಸಲು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹೈಕೋರ್ಟ್ ಸೂಚನೆ ನೀಡಿತ್ತು.

ಸಿಎಂ ಯಡಿಯೂರಪ್ಪ ವಿರುದ್ಧ ಕೇಳಿಬಂದಿದ್ದ ಆರೋಪಗಳೇನು? ಬೆಂಗಳೂರು ಉತ್ತರ ತಾಲೂಕು ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿನ ಕೆಐಎಡಿಬಿಗೆ ಸೇರಿದ್ದ 20 ಎಕರೆ ಜಮೀನನ್ನು ಭೂ ಸ್ವಾಧೀನದಿಂದ ಕೈಬಿಟ್ಟ ಆರೋಪ ಬಿ.ಎಸ್.ಯಡಿಯೂರಪ್ಪ ಅವರ ಮೇಲಿತ್ತು. ಹಾರ್ಡ್‌ವೇರ್‌ ಪಾರ್ಕ್‌ನ ಮಧ್ಯಭಾಗದ ಜಮೀನನ್ನು ಭೂ ಮಾಲೀಕರಿಗೆ ಡಿನೋಟಿಫಿಕೇಷನ್‌ ಮಾಡಿದ ಆರೋಪವಿತ್ತು. ಭೂಸ್ವಾಧೀನಗೊಂಡು ನಿವೇಶನ ಅಭಿವೃದ್ಧಿ ಪಡಿಸಿದ ಬಳಿಕವೂ ನಿಯಮ ಪಾಲಿಸದೇ ಡಿನೋಟಿಫಿಕೇಷನ್‌ ಮಾಡಿ ಸರ್ಕಾರದ ಬೊಕ್ಕಸಕ್ಕೆ 6 ಕೋಟಿ ರೂಪಾಯಿ ನಷ್ಟವುಂಟು ಮಾಡಿದ ಆರೋಪ ಕೇಳಿಬಂದಿತ್ತು.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಕೇಳಿಬಂದಿದ್ದ ಆರೋಪಗಳೇನು? ಆಗ ಸಚಿವರಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ದಾಬಸ್‌ಪೇಟೆ ಬಳಿಯ 4 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಷನ್‌ ಮಾಡಿದ ಆರೋಪ ಎದುರಿಸಿದ್ದರು. ಸೋಂಪುರ ಕೈಗಾಗಿಕಾ ಪ್ರದೇಶದಲ್ಲಿನ ಅಭಿವೃದ್ಧಿ ಹೊಂದಿದ ನಿವೇಶನ ಭೂಮಾಲೀಕರಿಗೆ ಬಿಟ್ಟುಕೊಟ್ಟು ಸರ್ಕಾರದ ಬೊಕ್ಕಸಕ್ಕೆ 1 ಕೋಟಿ 30ಲಕ್ಷ ರೂಪಾಯಿ ನಷ್ಟ ಉಂಟು ಮಾಡಿದ ಆರೋಪ ಎದುರಿಸಿದ್ದರು.

10 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪರಿಗೆ ನಿಟ್ಟುಸಿರು ಬಿಡುವಂತಹ ಆದೇಶವನ್ನು ಸರ್ವೋಚ್ಛ ನ್ಯಾಯಾಲಯ ನೀಡಿದೆ.

ಇದನ್ನೂ ಓದಿ: ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಒಟ್ಟಿಗೆ ವೇದಿಕೆ ಏರಿದರೂ ಮಾತನಾಡಿಕೊಳ್ಳದ ಸಿಎಂ ಯಡಿಯೂರಪ್ಪ ಮತ್ತು ಸಚಿವ ಈಶ್ವರಪ್ಪ

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ

Published On - 12:26 pm, Mon, 5 April 21

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ