AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅನುಮೋದನೆ: 223 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿವೆ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳು

ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳ ಅಭಿವೃದ್ಧಿಗೆ 223ಕೋಟಿ ರೂ., ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ 10 ಕೋಟಿ ರೂ ಸೇರಿದಂತೆ ಮೂರು ವಿವಿಧ ಪ್ರಾಧಿಕಾರದ ಹಲವು ಯೋಜನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಅನುಮೋದನೆ ನೀಡಿದ್ದಾರೆ.

ಸಿಎಂ ಅನುಮೋದನೆ: 223 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿವೆ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳು
(ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 06, 2021 | 6:39 PM

Share

ಬೆಂಗಳೂರು: 223 ಕೋಟಿ ರೂ ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣ ಅಭಿವೃದ್ಧಿಗೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರವಾಸೋದ್ಯಮವನ್ನು ಗಮನದಲ್ಲಿರಿಸಿಕೊಂಡು ಕೆಂಪೇಗೌಡರ ಆಡಳಿತಾವಧಿಯ ಕೋಟೆಗಳು, ಕೆರೆಗಳು ಮತ್ತು ಪಾರಂಪರಿಕ ತಾಣಗಳನ್ನ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಮತ್ತು ಇದಕ್ಕಾಗಿ ಪ್ರವಾಸೋದ್ಯಮ, ಸಣ್ಣ ನೀರಾವರಿ, ಬಿಬಿಎಂಪಿ, ಪಿಡಬ್ಲ್ಯುಡಿ, ಧಾರ್ಮಿಕ ದತ್ತಿ, ಅರಣ್ಯ ಹಾಗೂ ತೋಟಗಾರಿಕೆ ಇಲಾಖೆಗಳ ಸಹಯೋಗದೊಂದಿಗೆ ಯೋಜನೆ ಸಿದ್ಧಪಡಿಸಿ ಎಂದು ಸೂಚಿಸಿದರು.

ಸಮಾಧಿ ಅಭಿವೃದ್ಧಿ ಕಾರ್ಯಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಕಳೆದುಕೊಳ್ಳುವ 46 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿ ರಸ್ತೆ, ಮತ್ತಿತರ ಮೂಲ ಸೌಕರ್ಯ ಒದಗಿಸುವ ಕುರಿತು ವ್ಯವಸ್ಥಿತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಿಎಂ ಆದೇಶ ನೀಡಿದರು. ಇದರೊಂದಿಗೆ ಕೆಂಪೇಗೌಡರ ಜೀವನಾಧಾರಿತ ಪುಸ್ತಕಗಳು ಹಾಗೂ ಕಿರುಚಿತ್ರವನ್ನು ಸಿದ್ಧಪಡಿಸಲು ಸಿಎಂ ತಿಳಿಸಿದರು.

ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಬಸವ ಅಂತರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಕಾರ್ಯ ಚಿರುಕುಗೊಳಿಸಲು ಸಿಎಂ ಸಲಹೆ:

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ಬಸವ ಅಂತಾರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಕಾರ್ಯವನ್ನು ಚುರುಕುಗೊಳಿಸಲು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಮೊದಲ ಹಂತದಲ್ಲಿ ೯೪ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ  ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ಎಂದು ಅವರು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ಶರಣೆ ಗಂಗಾಂಬಿಕೆಯ ಐಕ್ಯ ಮಂಟಪದ ಹತ್ತಿರ ಮೂಲಸೌಕರ್ಯ ಅಭಿವೃದ್ಧಿಗೆ 1.25 ಕೋಟಿ ಅನುದಾನ ಮೀಸಲಿರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರವಾಹದಿಂದ ಸಂಪೂರ್ಣ ಜಲಾವೃತಗೊಂಡ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ 81 ಮಳಿಗೆಗಳ ಎರಡು ತಿಂಗಳ 2.97 ಲಕ್ಷ ರೂ. ಬಾಡಿಗೆ ಮನ್ನಾ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ 10ಕೋಟಿ ರೂ.:

ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪ್ರಾಧಿಕಾರದ 10 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಕ್ರಿಯಾ ಯೋಜನೆಯಡಿ ರಾಣಿ ಚೆನ್ನಮ್ಮ ಸ್ಮಾರಕ ಭವನ ನಿರ್ಮಾಣ, ಚೌಕಿಮಠ ಗದ್ದುಗೆ ಅಭಿವೃದ್ಧಿ ಹಾಗೂ ಕಿತ್ತೂರು ಸಂಸ್ಥಾನದ ಅರಮನೆಯ ಪ್ರತಿರೂಪ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು. ಚೆನ್ನಮ್ಮಳ ಸಮಾಧಿ ಸ್ಥಳದ ಅಭಿವೃದ್ಧಿ, ಬೆಳವಡಿಯಲ್ಲಿ ಬೆಳವಡಿ ಮಲ್ಲಮ್ಮನ ಪ್ರತಿಮೆ ಹಾಗೂ ಇತಿಹಾಸ ಸಾರುವ ಫಲಕ ನಿರ್ಮಾಣ, ಕಿತ್ತೂರು ಸಂಸ್ಥಾನದ ಕಾಗದಪತ್ರಗಳ ಸಂರಕ್ಷಣೆಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಲು ತೀರ್ಮಾನಿಸಲಾಯಿತು.

ಪ್ರಾಧಿಕಾರವು ಸ್ಮಾರಕಗಳ ನಿರ್ವಹಣೆಗೆ ಸಂಪನ್ಮೂಲ ಸೃಜಿಸಲು ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಚೆನ್ನಮ್ಮಳ ಅರಮನೆಯ ಪುನರ್ ನಿರ್ಮಾಣವನ್ನು ರಾಜ್ಯ ಪುರಾತತ್ವ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಕೈಗೊಳ್ಳುವಂತೆ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು. ಬಜೆಟ್​ನಲ್ಲಿ  ಘೋಷಿತವಾದ 50 ಕೋಟಿ ರೂ. ಅನುದಾನದಲ್ಲಿ 10 ಕೋಟಿ ರೂ. ಕ್ರಿಯಾ ಯೋಜನೆಗೆ ಈಗ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಗೆ ಸ್ಥಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

(Karnataka CM BS Yediyurappa agrees to develop 46 heritage sites of Kempe Gowda worth 223cr)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್