Cyclone Tauktae in Karnataka: ಉಡುಪಿ‌, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ

ಸಿಕ್ಕಿಹಾಕಿಕೊಂಡಿರುವ ಮೀನುಗಾರರ ರಕ್ಷಣೆಯ ಕಾರ್ಯಾಚರಣೆ ಸಂಬಂಧ ಕೇಂದ್ರದ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳಿ. ಹೆಲಿಕಾಪ್ಟರ್ ಸೇರಿ ಇನ್ನಿತರ ಯಾವುದೇ ಅಗತ್ಯವಿದ್ದರೂ ಕೂಡಲೇ ವ್ಯವಸ್ಥೆ ಮಾಡಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.

Cyclone Tauktae in Karnataka: ಉಡುಪಿ‌, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
guruganesh bhat
|

Updated on: May 16, 2021 | 10:50 PM

ಬೆಂಗಳೂರು: ರಾಜ್ಯದಲ್ಲಿ ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ಉಡುಪಿ‌, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ಪಡೆದರು. ಇದೇ ವೇಳೆ ಸಮುದ್ರದಲ್ಲಿ ಸಿಲುಕಿರುವವರ ರಕ್ಷಣೆಗೆ ಎಲ್ಲಾ ರೀತಿ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಸಿಕ್ಕಿಹಾಕಿಕೊಂಡಿರುವ ಮೀನುಗಾರರ ರಕ್ಷಣೆಯ ಕಾರ್ಯಾಚರಣೆ ಸಂಬಂಧ ಕೇಂದ್ರದ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳಿ. ಹೆಲಿಕಾಪ್ಟರ್ ಸೇರಿ ಇನ್ನಿತರ ಯಾವುದೇ ಅಗತ್ಯವಿದ್ದರೂ ಕೂಡಲೇ ವ್ಯವಸ್ಥೆ ಮಾಡಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.

ತೌಕ್ತೆ ಚಂಡಮಾರುತದ ಅಬ್ಬರ ರಾಜ್ಯದಲ್ಲಿ ಅತ್ಯಂತ ಜೋರಾಗಿಯೇ ಇದೆ. ತೌಕ್ತೆ ಚಂಡಮಾರುತದ ಪ್ರಭಾವದಿಂದ ಕಳೆದ ಎರಡು ದಿನಗಳಿಂದಲೂ ರಾಜ್ಯದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಗಾಳಿಯೂ ಜೋರಾಗಿದೆ. ಇನ್ನು ನಾಳೆ ಕೂಡ ರಾಜ್ಯಾದ್ಯಂತ ಮಳೆಯ ಪ್ರಭಾವ ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೂಡ ಬೆಳಗ್ಗೆಯಿಂದಲೂ ಒಂದೇ ಸಮ ಜಿಟಿಜಿಟಿ ಮಳೆ ಸುರಿಯುತ್ತಲೇ ಇದೆ. ಕರಾವಳಿ ಭಾಗದಲ್ಲಿ ಇಂದು ಬೆಳಗ್ಗೆಯವರೆಗೂ ರೆಡ್ ಅಲರ್ಟ್​ ಇತ್ತು. ನಾಳೆ ಮೇ 17ರಂದು ಕೂಡ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆಯಾಗಲಿದೆ. ಹಾಗೇ ಮೇ 20ರವರೆಗೂ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿತ್ತು. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರು ಮೊಮಿರುಲ್ ಮುಲ್ಲಾ( 34), ಕರೀಮುಲ್ಲಾ ಶೇಕ್ (24) ಎಂಬುವರು ಟ್ಯೂಬ್​ನಲ್ಲಿ ಈಜಿಕೊಂಡು ಬಂದು ಜೀವ ಉಳಿಸಿಕೊಂಡಿದ್ದರು. ಇಬ್ಬರೂ ಉಡುಪಿಯ ಮಟ್ಟುಕೊಪ್ಲ ಎಂಬಲ್ಲಿ ದಡ ಸೇರಿದ್ದರು.

ಇದನ್ನೂ ಓದಿ: ಮನೆಯಲ್ಲಿ ಜಾಗವಿಲ್ಲದೆ, ಮರದ ಮೇಲೆ 11 ದಿನ ಐಸೋಲೇಟ್ ಆದ ಕೊವಿಡ್​ 19 ಸೋಂಕಿತ ಯುವಕ..

ಕಣ್ಮುಂದೆಯೇ ನಮ್ಮ ಕಚೇರಿ ಕಟ್ಟಡ ಉರುಳಿ ಬಿತ್ತು, ಪ್ರಾಣಭಯದಿಂದ ನಾನು ಓಡಿದೆ: ಇಸ್ರೇಲ್ ವೈಮಾನಿಕ ದಾಳಿಯ ಬಗ್ಗೆ ಪತ್ರಕರ್ತನ ಅನುಭವ ಬರಹ   (Karnataka CM BS Yediyurappa calls Udupi Dakshina Kannada And Uttara Kannada DCs to know situation about Cyclone Tauktae in Karnataka)

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್