ಮೀಸಲಾತಿ ಬೇಡಿಕೆಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿ ಯಡಿಯೂರಪ್ಪ ಆದೇಶ
ಸಚಿವ ಸಂಪುಟದ ತೀರ್ಮಾನದಂತೆ ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕ, ಕಾನೂನಾತ್ಮಕವಾಗಿ ಚೌಕಟ್ಟಿನಲ್ಲಿ ಪರೀಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಮೀಸಲಾತಿಗೆ ಒತ್ತಾಯಿಸಿ ವಿವಿಧ ಸಮುದಾಯಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ, ವಿವಿಧ ಸಮುದಾಯಗಳ ಬೇಡಿಕೆ ಕುರಿತು ಪರಿಶೀಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಿತಿಯೊಂದನ್ನು ರಚಿಸಿದ್ದಾರೆ. ಸಚಿವ ಸಂಪುಟದ ತೀರ್ಮಾನದಂತೆ ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕ, ಕಾನೂನಾತ್ಮಕವಾಗಿ ಚೌಕಟ್ಟಿನಲ್ಲಿ ಪರೀಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಹಾಗೂ ಮೈಸೂರು ಮಹಾರಾಣಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಬಿ.ವಿ.ವಸಂತಕುಮಾರ್ ಸಮಿತಿಯ ಸದಸ್ಯರಾಗಿರುತ್ತಾರೆ.
ಸಚಿವ ಸಂಪುಟದ ತೀರ್ಮಾನದಂತೆ, ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕವಾಗಿ ಹಾಗು ಕಾನೂನಾತ್ಮಕ ಚೌಕಟ್ಟಿನಲ್ಲಿ ಪರೀಶೀಲಿಸಲು ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿ ರವರ ಅಧ್ಯಕ್ಷತೆಯಲ್ಲಿ, ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಮತ್ತು… (1/2)
— CM of Karnataka (@CMofKarnataka) March 10, 2021
ಸಚಿವ ಸಂಪುಟದಲ್ಲಿ ತೀರ್ಮಾನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಾರ್ಚ್ 3ರಂದು ನಡೆದ ಬಜೆಟ್ ಸಿದ್ಧತಾ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿತ್ತು. ಈ ಕುರಿತು ಮಾಹಿತಿ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸರ್ಕಾರದ ಒಬಿಸಿ ಲಿಸ್ಟ್ಗೆ ವೀರಶೈವ ಹಾಗೂ ಒಕ್ಕಲಿಗ ಸಮುದಾಯದ ಕೆಲ ಪಂಗಡಗಳನ್ನ ಸೇರಿಸಲಾಗಿದೆ. ಸುಪ್ರೀಂಕೋರ್ಟ್ ಶೇ 50ಕ್ಕಿಂತ ಹೆಚ್ಚು ಮೀಸಲಾತಿ ಇರಬಾರದು ಎಂದು ಹೇಳಿದೆ. ಇತರ ಕೆಲ ರಾಜ್ಯಗಳಲ್ಲಿ ಇದೇ ರೀತಿ ಬೇಡಿಕೆ ಬಂದಿದೆ ಎಂದು ಹೇಳಿದ್ದರು.
ಮೀಸಲಾತಿ ಬಗ್ಗೆ ಉನ್ನತ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ವೀರಶೈವ, ಒಕ್ಕಲಿಗೆ ಸೇರಿದಂತೆ ಇತರೆ ಸಮುದಾಯದ ಕೆಲ ಪಂಗಡಗಳನ್ನ ಸೇರಿಸಲಾಗಿದೆ. ಎಸ್‌ಟಿಗೆ ಸೇರಿಸಲು ಕುರುಬ ಸಮುದಾಯ ಒತ್ತಾಯಿಸುತ್ತಿದೆ. ಶೇ 50ಕ್ಕಿಂತ ಹೆಚ್ಚು ಮೀಸಲಾತಿ ಇರಬಾರದೆಂದು ಸುಪ್ರೀಂಕೋರ್ಟ್ ಹೇಳಿದೆ. ಬೇರೆಬೇರೆ ರಾಜ್ಯಗಳಲ್ಲೂ ಇದೇ ರೀತಿ ಬೇಡಿಕೆ ಬಂದಿದೆ ಎಂದು ಹೇಳಿದರು.
ಮೀಸಲಾತಿ ಕುರಿತು ಸಮಗ್ರ ವರದಿ ನೀಡಲು ಉನ್ನತ ಸಮಿತಿ ರಚನೆಗೆ ತೀರ್ಮಾನ ಕೈಗೊಳ್ಳಲಾಗಿದೆ. ವರದಿ ನೀಡಲು ಉನ್ನತ ಸಮಿತಿಗೆ ಯಾವುದೇ ಗಡುವು ನೀಡಿಲ್ಲ. ಸಮಿತಿಗೆ ಸದಸ್ಯರ ನೇಮಕ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿದ್ದೇವೆ ಎಂದು ಸಂಪುಟ ಸಭೆ ಬಳಿಕ ಅವರು ಪ್ರತಿಕ್ರಿಯೆ ನೀಡಿದ್ದರು.
ಇದನ್ನೂ ಓದಿ: ಮೀಸಲಾತಿ ಸಾಧ್ಯತೆ ಪರಿಶೀಲನೆಗೆ ಉನ್ನತ ಸಮಿತಿ ರಚನೆ: ಕರ್ನಾಟಕ ಸಚಿವ ಸಂಪುಟ ಸಭೆ ನಿರ್ಧಾರ
ಇದನ್ನೂ ಓದಿ: ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿಗೆ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ
Published On - 9:40 pm, Wed, 10 March 21