ಹಳ್ಳಿಗಳಲ್ಲಿ ಕೊವಿಡ್ ಕಡಿಮೆ ಮಾಡಲು ಹೆಚ್ಚಿನ ಗಮನ ಕೊಡಿ; ಸಿಎಂ ಯಡಿಯೂರಪ್ಪ ಸೂಚನೆ
ಕೊವಿಡ್ ಸೋಂಕುಮುಕ್ತರಾದವರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುವಾಗ ಶಿಷ್ಟಾಚಾರ ಪಾಲನೆಯಾಗಬೇಕು. ಬ್ಲ್ಯಾಕ್ ಫಂಗಸ್ ಔಷಧ ಎಲ್ಲೇ ಸಿಕ್ಕಿದರೂ ಖರೀದಿಸಬೇಕು ಎಂದು ಸಿಎಂ ಯಡಿಯೂರಪ್ಪ ತಮ್ಮ ಸಹೋದ್ಯೋಗಿಗಳಿಗೆ ನಿರ್ದೇಶನ ನೀಡಿದರು.
ಬೆಂಗಳೂರು: ಸದ್ಯ ಜಾರಿಯಲ್ಲಿರುವ ಕಠಿಣ ನಿಯಮಗಳಿಂದ ನಗರಗಳಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ನಗರಗಳ ಜತೆಗೆ ಹಳ್ಳಿಗಳಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಒತ್ತು ನೀಡಬೇಕು. ವೈದ್ಯರ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟ ಸಭೆಯಲ್ಲಿ ಸೂಚನೆ ನೀಡಿದರು. ಎರಡು ದಿನಗಳಿಗೆ ಒಮ್ಮೆ ರಾಜ್ಯದಲ್ಲಿ ಕೊವಿಡ್ ನಿರ್ವಹಣೆಯ ಬಗ್ಗೆ ನಡೆಸುವ ತಮ್ಮ ಸಂಪುಟದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಕೊವಿಡ್ ಸೋಂಕುಮುಕ್ತರಾದವರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುವಾಗ ಶಿಷ್ಟಾಚಾರ ಪಾಲನೆಯಾಗಬೇಕು. ಬ್ಲ್ಯಾಕ್ ಫಂಗಸ್ ಔಷಧ ಎಲ್ಲೇ ಸಿಕ್ಕಿದರೂ ಖರೀದಿಸಬೇಕು ಎಂದು ಸಿಎಂ ಯಡಿಯೂರಪ್ಪ ತಮ್ಮ ಸಹೋದ್ಯೋಗಿಗಳಿಗೆ ನಿರ್ದೇಶನ ನೀಡಿದರು.
ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು. ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಸಚಿವರಾದ ಆರ್. ಅಶೋಕ್, ಅರವಿಂದ ಲಿಂಬಾವಳಿ ಮತ್ತು ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇಂದಿನ ಕೊವಿಡ್ ಸೋಂಕಿತರೆಷ್ಟು? ಕರ್ನಾಟಕದಲ್ಲಿ ಇಂದು ಒಂದೇ ದಿನ 22,823 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 52,253 ಜನರು ಕೊವಿಡ್ನಿಂದ ಗುಣಮುಖರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 5736 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇಂದು ಒಂದೇ ದಿನ 31,237 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ ಇದೇ ಅವಧಿಯಲ್ಲಿ 1,38,983 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಲ್ಲಿ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.16.42ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷ ಒಳಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೊರೊನಾ ವೈರಸ್ ಎಲ್ಲಿಂದ ಹರಡಿತು? ಕೊವಿಡ್ ರೋಗದ ಸೋಂಕಿನ ಅರಿಯಲು ಸಿಐಎ ತನಿಖೆಗೆ ಆಮೆರಿಕ ಅಧ್ಯಕ್ಷ ಜೋ ಬೈಡೆನ್ ಆದೇಶ
ಹೊಸ ಐಟಿ ನಿಯಮಗಳ ಉಲ್ಲಂಘನೆ: ಟ್ವಿಟರ್ ವಿರುದ್ಧ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ದಾಖಲು
(Karnataka CM BS Yediyurappa directs give attention to villages to reduce covid cases to his cabinet colleagues)