AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಪ್ಯಾಕೇಜ್​ನ ಕಾರ್ಯ ಯೋಜನೆ ರೂಪಿಸಲು ಮೌಖಿಕ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ

Karnataka Lockdown Package: ಆರ್ಥಿಕ ಹಿನ್ನಡೆ ನಡುವೆ ಪ್ಯಾಕೇಜ್ ಹೇಗೆ ಘೋಷಿಸಬೇಕು? ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ಯಾಕೇಜ್ ಘೋಷಣೆಗೆ ಇರುವ ಮಾರ್ಗಗಳನ್ನು ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲಾಕ್​ಡೌನ್ ಪ್ಯಾಕೇಜ್​ನ ಕಾರ್ಯ ಯೋಜನೆ  ರೂಪಿಸಲು ಮೌಖಿಕ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
guruganesh bhat
|

Updated on: May 16, 2021 | 3:05 PM

Share

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲು ಕಾರ್ಯ ಯೋಜನೆ (ಪ್ಲ್ಯಾನ್ ಆಫ್ ಆ್ಯಕ್ಷನ್) ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದಾರೆ. ಆರ್ಥಿಕ ಸಂಕಷ್ಟದ ವೇಳೆ ಪ್ಯಾಕೇಜ್ ಹೇಗೆ ಘೋಷಿಸಬಹುದು? ಜನ, ಸರ್ಕಾರದ ಮೇಲೆ ಹೇಗೆ ಹೊರೆ ಕಡಿಮೆ ಮಾಡಬಹುದು? ಆರ್ಥಿಕ ಹಿನ್ನಡೆ ನಡುವೆ ಪ್ಯಾಕೇಜ್ ಹೇಗೆ ಘೋಷಿಸಬೇಕು? ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ಯಾಕೇಜ್ ಘೋಷಣೆಗೆ ಇರುವ ಮಾರ್ಗಗಳನ್ನು ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಮುನ್ನ ಕೆಲವು ಬಾರಿ ಸಿಎಂ ಯಡಿಯೂರಪ್ಪ ಲಾಕ್​ಡೌನ್ ಪ್ಯಾಕೇಜ್ ಘೋಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಮೊದಲು ಜನರ ಜೀವ ರಕ್ಷಿಸುವುದು ನಮ್ಮ ಆದ್ಯತೆ, ಆನಂತರ ಪ್ಯಾಕೇಜ್ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಮತ್ತು ಅವರ ಸಹೋದ್ಯೋಗಿಗಳು ತಿಳಿಸಿದ್ದರು.

ಮಧುಮೇಹಿಗಳು, ಸ್ಟಿರಾಯ್ಡ್ ಬಳಸುವವರು ಎಚ್ಚರವಾಗಿರಿ ಬೆಂಗಳೂರಿನಲ್ಲೂ ಬ್ಲ್ಯಾಕ್ ಫಂಗಸ್​ಗೆ ಬಲಿಯಾಗುತ್ತಿರುವ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಬ್ಲ್ಯಾಕ್ ಫಂಗಸ್ ವಿಚಾರದಲ್ಲಿ ಎಚ್ಚರ ವಹಿಸುವುದು ಅಗತ್ಯ. ಮಧುಮೇಹಿಗಳು, ಸ್ಟಿರಾಯ್ಡ್ ಬಳಸುವವರು ಎಚ್ಚರವಾಗಿರಿ. ಕೊವಿಡ್ ಚಿಕಿತ್ಸೆಗೆ ಹೆಚ್ಚಾಗಿ ಸ್ಟಿರಾಯ್ಡ್ ಬಳಸುವುದರಿಂದ, ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಳ್ಳಬಹುದು. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೂ ಬ್ಲ್ಯಾಕ್ ಫಂಗಸ್ ಕಾಣಿಸುತ್ತದೆ. ಹೀಗಾಗಿ ನಾಳೆ ನೇತ್ರ ತಜ್ಞರು, ಮಧುಮೇಹ ತಜ್ಞರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚನೆ ಮಾಡುತ್ತೇವೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುತ್ತೆ. ಬ್ಲ್ಯಾಕ್ ಫಂಗಸ್ ಔಷಧ ಅತ್ಯಂತ ದುಬಾರಿಯಾಗಿದೆ. ಒಬ್ಬ ವ್ಯಕ್ತಿಗೆ 2ರಿಂದ 4 ಲಕ್ಷ ರೂಪಾಯಿವರೆಗೆ ವೆಚ್ಚವಾಗಲಿದೆ. ಬ್ಲ್ಯಾಕ್ ಫಂಗಸ್‌ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ಸಿಎಂ ಬಿಎಸ್‌ವೈ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

( Karnataka CM BS Yediyurappa directs officers to prepare the plan of action of lockdown package)

Follow Us
guruganesh bhat
guruganesh bhat
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ