ಲಾಕ್​ಡೌನ್ ಪ್ಯಾಕೇಜ್​ನ ಕಾರ್ಯ ಯೋಜನೆ ರೂಪಿಸಲು ಮೌಖಿಕ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ

|

Updated on: May 16, 2021 | 3:05 PM

Karnataka Lockdown Package: ಆರ್ಥಿಕ ಹಿನ್ನಡೆ ನಡುವೆ ಪ್ಯಾಕೇಜ್ ಹೇಗೆ ಘೋಷಿಸಬೇಕು? ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ಯಾಕೇಜ್ ಘೋಷಣೆಗೆ ಇರುವ ಮಾರ್ಗಗಳನ್ನು ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲಾಕ್​ಡೌನ್ ಪ್ಯಾಕೇಜ್​ನ ಕಾರ್ಯ ಯೋಜನೆ  ರೂಪಿಸಲು ಮೌಖಿಕ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
Follow us on

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲು ಕಾರ್ಯ ಯೋಜನೆ (ಪ್ಲ್ಯಾನ್ ಆಫ್ ಆ್ಯಕ್ಷನ್) ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದಾರೆ. ಆರ್ಥಿಕ ಸಂಕಷ್ಟದ ವೇಳೆ ಪ್ಯಾಕೇಜ್ ಹೇಗೆ ಘೋಷಿಸಬಹುದು? ಜನ, ಸರ್ಕಾರದ ಮೇಲೆ ಹೇಗೆ ಹೊರೆ ಕಡಿಮೆ ಮಾಡಬಹುದು? ಆರ್ಥಿಕ ಹಿನ್ನಡೆ ನಡುವೆ ಪ್ಯಾಕೇಜ್ ಹೇಗೆ ಘೋಷಿಸಬೇಕು? ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ಯಾಕೇಜ್ ಘೋಷಣೆಗೆ ಇರುವ ಮಾರ್ಗಗಳನ್ನು ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಮುನ್ನ ಕೆಲವು ಬಾರಿ ಸಿಎಂ ಯಡಿಯೂರಪ್ಪ ಲಾಕ್​ಡೌನ್ ಪ್ಯಾಕೇಜ್ ಘೋಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಮೊದಲು ಜನರ ಜೀವ ರಕ್ಷಿಸುವುದು ನಮ್ಮ ಆದ್ಯತೆ, ಆನಂತರ ಪ್ಯಾಕೇಜ್ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಮತ್ತು ಅವರ ಸಹೋದ್ಯೋಗಿಗಳು ತಿಳಿಸಿದ್ದರು.

ಮಧುಮೇಹಿಗಳು, ಸ್ಟಿರಾಯ್ಡ್ ಬಳಸುವವರು ಎಚ್ಚರವಾಗಿರಿ
ಬೆಂಗಳೂರಿನಲ್ಲೂ ಬ್ಲ್ಯಾಕ್ ಫಂಗಸ್​ಗೆ ಬಲಿಯಾಗುತ್ತಿರುವ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಬ್ಲ್ಯಾಕ್ ಫಂಗಸ್ ವಿಚಾರದಲ್ಲಿ ಎಚ್ಚರ ವಹಿಸುವುದು ಅಗತ್ಯ. ಮಧುಮೇಹಿಗಳು, ಸ್ಟಿರಾಯ್ಡ್ ಬಳಸುವವರು ಎಚ್ಚರವಾಗಿರಿ. ಕೊವಿಡ್ ಚಿಕಿತ್ಸೆಗೆ ಹೆಚ್ಚಾಗಿ ಸ್ಟಿರಾಯ್ಡ್ ಬಳಸುವುದರಿಂದ, ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಳ್ಳಬಹುದು. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೂ ಬ್ಲ್ಯಾಕ್ ಫಂಗಸ್ ಕಾಣಿಸುತ್ತದೆ. ಹೀಗಾಗಿ ನಾಳೆ ನೇತ್ರ ತಜ್ಞರು, ಮಧುಮೇಹ ತಜ್ಞರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚನೆ ಮಾಡುತ್ತೇವೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುತ್ತೆ. ಬ್ಲ್ಯಾಕ್ ಫಂಗಸ್ ಔಷಧ ಅತ್ಯಂತ ದುಬಾರಿಯಾಗಿದೆ. ಒಬ್ಬ ವ್ಯಕ್ತಿಗೆ 2ರಿಂದ 4 ಲಕ್ಷ ರೂಪಾಯಿವರೆಗೆ ವೆಚ್ಚವಾಗಲಿದೆ. ಬ್ಲ್ಯಾಕ್ ಫಂಗಸ್‌ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ಸಿಎಂ ಬಿಎಸ್‌ವೈ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

( Karnataka CM BS Yediyurappa directs officers to prepare the plan of action of lockdown package)