AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

CM BS Yediyurappa meets PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಭೇಟಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ
ದೆಹಲಿಯಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದರು.
Ghanashyam D M | ಡಿ.ಎಂ.ಘನಶ್ಯಾಮ
|

Updated on:Jul 16, 2021 | 7:42 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಭೇಟಿ ಮಾಡಿದರು. ಕರ್ನಾಟಕ ಭವನದಿಂದ ತೆರಳಿದ ಯಡಿಯೂರಪ್ಪ ದೆಹಲಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಿ ಮೋದಿ ಭೇಟಿಯಾಗಿ ನಿವಾಸದಿಂದ ಹೊರಬಂದ ಯಡಿಯೂರಪ್ಪ ಕರ್ನಾಟಕ ಭವನಕ್ಕೆ ಹಿಂದಿರುಗಿದರು. ಮೋದಿ ಜತೆ  ಯಡಿಯೂರಪ್ಪ 10 ನಿಮಿಷ ಚರ್ಚೆ ನಡೆಸಿದರು. ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಕೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ದೆಹಲಿಯಲ್ಲಿ ಇಂದು ರಾತ್ರಿ ಕರ್ನಾಟಕ ಮೂಲದ ಸಚಿವರ ಜೊತೆಗೆ ಯಡಿಯೂರಪ್ಪ ಊಟ ಮಾಡಲಿದ್ದಾರೆ.

ಭೇಟಿಗೆ ಹಲವು ಬಣ್ಣ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ದೆಹಲಿ ಭೇಟಿಗೆ ಹಲವು ಅರ್ಥಗಳು ಬಂದಿವೆ.

ಸಂಪುಟ ವಿಸ್ತರಣೆ ಬಗ್ಗೆ ಯಡಿಯೂರಪ್ಪ ಯಾವುದೇ ವಿಚಾರ ಪ್ರಸ್ತಾಪಿಸಬಾರದು ಎಂದುಕೊಂಡಿದ್ದಾರೆ. ಆದರೆ ವರಿಷ್ಠರು ಪ್ರಸ್ತಾಪಿಸಿದರೆ ತಮ್ಮ ನಿಲುವು ಸ್ಪಷ್ಟಪಡಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ಸಾಧ್ಯತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೇಕೆದಾಟು ಯೋಜನೆ ಕುರಿತು ಚರ್ಚಿಸುವುದಾಗಿ ಯಡಿಯೂರಪ್ಪ ಹೇಳಿದ್ದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯೂ ಇಲ್ಲ. ಆದರೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ ಎಂದು ತಿಳಿದಿಲ್ಲ. ಮೇಕೆದಾಟು ಯೋಜನೆ ಜಾರಿಗೆ ನಮಗೆ ಅವಕಾಶ ಇದೆ. ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ. ಮೇಕೆದಾಟು ಯೋಜನೆ ಆರಂಭಕ್ಕೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಆರು ತಿಂಗಳ ಬಳಿಕ ದೆಹಲಿಗೆ ಬರುತ್ತಿದ್ದೇನೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಹೊಸ ಸಚಿವರನ್ನು ಭೇಟಿ ಮಾಡುತ್ತೇನೆ. ಜತೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್​ರನ್ನು ಭೇಟಿ ಮಾಡುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದರು.

(Karnataka CM BS Yediyurappa meets PM Narendra Modi amid Talks of His removal and cabinet reshuffle)

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್​ಗೆ ತರಲು ಯತ್ನ: ಮಾಜಿ ಸಚಿವ ಎಂ ಬಿ ಪಾಟೀಲ್

ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ; ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅಚಲ ನುಡಿ

Published On - 7:08 pm, Fri, 16 July 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್