ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ; ಕುಟುಂಬದಲ್ಲಿ ಒಬ್ಬರಿಗೆ ಮಾತ್ರ: ಸಿಎಂ ಯಡಿಯೂರಪ್ಪ ಘೋಷಣೆ

Relief Fund Package: ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ;  ಕುಟುಂಬದಲ್ಲಿ ಒಬ್ಬರಿಗೆ ಮಾತ್ರ: ಸಿಎಂ ಯಡಿಯೂರಪ್ಪ ಘೋಷಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 14, 2021 | 1:17 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಜೊತೆಗೆ, ಇದು BPL ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. BPL ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಸುಮಾರು 250-300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹ ಹಣಕಾಸು ನೆರವನ್ನು ನಾವು ನೀಡುತ್ತಿದ್ದೇವೆ. ಹಣಕಾಸಿನ‌ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡ್ತಾ ಇದ್ದೇವೆ. ಅಂದ್ರೆ ಇದರ ಅರ್ಥ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿಯೇ ಉತ್ತಮವಾಗಿದೆ ಎಂಬುದು ತಿಳಿದುಬರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಆರ್ಥಿಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

(karnataka CM BS Yediyurappa PC on Lockdown Relief Fund)

Published On - 1:05 pm, Mon, 14 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್