ಬೆಳಗಾವಿಯಲ್ಲೇ ವಾಸ್ತವ್ಯ ಹೂಡಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸದಲ್ಲಿ ದಿಢೀರ್ ಬದಲಾವಣೆ

| Updated By: ganapathi bhat

Updated on: Apr 05, 2022 | 1:04 PM

ಬೆಳಗಾವಿಯಲ್ಲಿ ನಿಗದಿಯಾಗಿದ್ದ ಬಿಜೆಪಿ ಮುಖಂಡರ ಸಭೆ ರದ್ದು ಮಾಡಲಾಗಿದೆ. ಇಂದು ರಾತ್ರಿಯೇ ಯಡಿಯೂರಪ್ಪ, ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಬೆಳಗಾವಿಯಲ್ಲೇ ವಾಸ್ತವ್ಯ ಹೂಡಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸದಲ್ಲಿ ದಿಢೀರ್ ಬದಲಾವಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಸದಲ್ಲಿ ದಿಢೀರ್ ಬದಲಾವಣೆ ಮಾಡಿಕೊಂಡಿದ್ದಾರೆ. ಇಂದು (ಮಾರ್ಚ್ 30) ಬೆಳಗಾವಿಯಲ್ಲೇ ವಾಸ್ತವ್ಯ ಹೂಡಬೇಕಿದ್ದ ಬಿ.ಎಸ್. ಯಡಿಯೂರಪ್ಪ ತಮ್ಮ ಕಾರ್ಯಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ವಾಪಾಸಾಗಲಿರುವ ತೀರ್ಮಾನ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ನಿಗದಿಯಾಗಿದ್ದ ಬಿಜೆಪಿ ಮುಖಂಡರ ಸಭೆ ರದ್ದು ಮಾಡಲಾಗಿದೆ. ಇಂದು ರಾತ್ರಿಯೇ ಯಡಿಯೂರಪ್ಪ, ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಬೆಳಗಾವಿಯಿಂದ ಹುಬ್ಬಳ್ಳಿಗೆ ಆಗಮಿಸಲಿರುವ ಮುಖ್ಯಮಂತ್ರಿ, ವಿಮಾನದ ಮೂಲಕ ರಾತ್ರಿಯೇ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ. ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಬೆಳವಣಿಗೆಗಳಾಗಿದೆ. ಸಿಡಿಯಲ್ಲಿದ್ದ ಯುವತಿ ಕೋರ್ಟ್‌ಗೆ ಹಾಜರಾಗಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸದಲ್ಲಿ ಬದಲಾವಣೆ ಕಂಡುಬಂದಿದೆ.

ದೇವರ ಮೊರೆ ಹೋಗಿದ್ದಾರೆ ರಮೇಶ್ ಜಾರಕಿಹೊಳಿ‌
ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ರಮೇಶ್ ಜಾರಕಿಹೊಳಿ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯದತ್ತ ಪ್ರಯಾಣ ಬೆಳೆಸಿದ್ದಾರೆ. ಪೂಜೆ ಮಾಡಿಸಲು ಸಮಯ ಕೇಳಿದ್ದ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, CD ಕೇಸ್‌ನಿಂದ ಕಂಗೆಟ್ಟಿದ್ದಾರೆ. ಹೀಗಾಗಿ ದೇವರ ಮೊರೆ ಹೋಗಿದ್ದಾರೆ.

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಕಂಗೆಟ್ಟಿದ್ದ, ರಮೇಶ್ ಜಾರಕಿಹೊಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಮನೆಯಿಂದ ತೆರಳಿದ್ದರು. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಗೋಕಾಕ್‌ನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದರು. ಗೋಕಾಕ್ ಫಾಲ್ಸ್ ರಸ್ತೆಯಲ್ಲಿ ತೆರಳಿದ್ದರು. ನಿನ್ನೆ ರಾತ್ರಿ ಗೋಕಾಕ್‌ಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ ಬೆಳಗ್ಗೆಯಿಂದ ಮನೆಯಿಂದ ಹೊರಬಂದಿರಲಿಲ್ಲ. ಯುವತಿ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಮನೆಯಿಂದ ಹೊರಕ್ಕೆ ಹೊರಟಿದ್ದರು. ಮಾಧ್ಯಮಗಳ ಕಣ್ತಪ್ಪಿಸಿ ಮನೆಯಿಂದ ತೆರಳಿದ್ದರು.

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದರು.

ಇದನ್ನೂ ಓದಿ: ಸಿಡಿ ಪ್ರಕರಣದ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಸಾಧ್ಯತೆ; ನನಗೆ ಸುಸ್ತಾಗ್ತಿದೆ ಎಂದ ಯುವತಿ

ನಮ್ಮ ಮಗಳು ಕೋರ್ಟ್​ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು.. ಸಿಡಿ ಕಿಂಗ್​ಪಿನ್​ ನಮ್ಮ ಮಗಳ ತಲೆ ಕೆಡಿಸಿದ್ದಾರೆ- ಸಿಡಿ ಯುವತಿ ಪೋಷಕರ ಮನವಿ

Published On - 5:20 pm, Tue, 30 March 21