BS Yediyurappa: ಇಂದು ಸಂಜೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ; ವಿಷಯವೇನು?

BS Yediyurappa: ಇಂದು ಸಂಜೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ; ವಿಷಯವೇನು?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

CM Yediyurappa Press Meet: ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಅವಧಿಯನ್ನು ಇದೇ ಜೂನ್​ 7 ನಂತರ ವಿಸ್ತರಿಸುವುದಾ ಅಥವಾ ನಿಲ್ಲಿಸುವುದಾ ಅಥವಾ ರಿಯಾಯಿತಿ ಮಾದರಿ ಅನ್ವಯಗೊಳಿಸುವುದಾ ಇವೇ ಮೊದಲಾದ ವಿಷಯಗಳ ಬಗ್ಗೆ ಸಿಎಂ ಯಡಿಯೂರಪ್ಪ ರಾಜ್ಯದ ಜನತೆಗೆ ತಿಳಿಸಲಿದ್ದಾರೆ.

sadhu srinath

|

Jun 03, 2021 | 12:16 PM

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಮಹತ್ವದ ಸುದ್ದಿಗೋಷ್ಠಿ ಇಂದು ಸಂಜೆ 5 ಗಂಟೆಗೆ ನಿಗದಿಯಾಗಿದೆ. ರಾಜ್ಯದಲ್ಲಿ ಬೆಂಬಿಡದೆ ಕಾಡುತ್ತಿರುವ ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ, ತತ್ಫಲವಾಗಿ ವಿಳಂಬವಾಗುತ್ತಿರುವ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಅವಧಿಯನ್ನು ಇದೇ ಜೂನ್​ 7 ನಂತರ ವಿಸ್ತರಿಸುವುದಾ ಅಥವಾ ನಿಲ್ಲಿಸುವುದಾ ಅಥವಾ ರಿಯಾಯಿತಿ ಮಾದರಿ ಅನ್ವಯಗೊಳಿಸುವುದಾ ಇವೇ ಮೊದಲಾದ ವಿಷಯಗಳ ಬಗ್ಗೆ ಸಿಎಂ ಯಡಿಯೂರಪ್ಪ ರಾಜ್ಯದ ಜನತೆಗೆ ತಿಳಿಸಲಿದ್ದಾರೆ.

(Karnataka CM BS Yediyurappa scheduled Press Meet on sslc puc exam and lockdown extension in Karnataka)

ಲಾಕ್ಡೌನ್ ವಿಸ್ತರಣೆ ಬಗ್ಗೆ ಸಚಿವರ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡ್ತಾರೆ -ಗೃಹ ಸಚಿವ ಬಸವರಾಜ ಬೊಮ್ಮಾಯಿ

Follow us on

Related Stories

Most Read Stories

Click on your DTH Provider to Add TV9 Kannada