AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಿಂಗ್​ಹ್ಯಾಮ್ ರಸ್ತೆ To ದೆಹಲಿ, ರೋಚಕವಾಗಿದೆ ಸಿದ್ದರಾಮಯ್ಯ ತಂತ್ರಗಾರಿಕೆ! ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್

ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ತಂತ್ರ-ಪ್ರತಿತಂತ್ರಗಳು ತಾರಕಕ್ಕೇರಿದ್ದು, ಇಂದು (ಮೇ 26) ದೆಹಲಿಯಲ್ಲಿ ನಡೆಯಲಿರುವ ಹೈಕಮಾಂಡ್ ಸಭೆಯಲ್ಲಿ ರಾಜ್ಯದ ಮುಂದಿನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಸದ್ಯ, ಹೈಕಮಾಂಡ್ ಸಭೆಯ ಬಗ್ಗೆ ಕುತೂಹಲ ಹೆಚ್ಚಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಂತ್ರ-ಪ್ರತಿತಂತ್ರ ಏನಿರಬಹುದು ಎಂಬ ಮಾಹಿತಿ ಇಲ್ಲಿದೆ.

ಕನ್ನಿಂಗ್​ಹ್ಯಾಮ್ ರಸ್ತೆ To ದೆಹಲಿ, ರೋಚಕವಾಗಿದೆ ಸಿದ್ದರಾಮಯ್ಯ ತಂತ್ರಗಾರಿಕೆ! ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: May 26, 2026 | 6:50 AM

Share

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತಾದ ಆಂತರಿಕ ರಾಜಕೀಯ ಬಿಕ್ಕಟ್ಟು ಈಗ ಅಂತಿಮ ಘಟ್ಟಕ್ಕೆ ತಲುಪಿರುವಂತೆ ಕಾಣಿಸುತ್ತಿದೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ದೆಹಲಿಗೆ ತೆರಳಿದ್ದು, ಇಂದು (ಮೇ 26 ರ ಬುಧವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಮಹತ್ವದ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮನಹುಂಡಿಯ ಮಾಸ್ ಲೀಡರ್ ಸಿದ್ದರಾಮಯ್ಯ ಹಾಗೂ ಕನಕಪುರದ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರ ನಡುವಿನ ಈ ‘ಪವರ್ ಫೈಟ್’ಗೆ ದಿಲ್ಲಿ ದರ್ಬಾರ್‌ನಲ್ಲಿ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ಸಭೆಯ ಅಜೆಂಡಾ ಎದುರಿಸಲು ಇಬ್ಬರೂ ನಾಯಕರು ತಮ್ಮದೇ ಆದ ಅಸ್ತ್ರಗಳೊಂದಿಗೆ ಸಜ್ಜಾಗಿದ್ದಾರೆ.

ಮುಖ್ಯಾಂಶಗಳು

  • ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಸಿದ್ದರಾಮಯ್ಯ ಸೀಕ್ರೆಟ್ ಪ್ಲ್ಯಾನ್.
  • ಅಧಿಕಾರ ಹಂಚಿಕೆ ಪ್ರಸ್ತಾಪವಾದರೆ ಸಿದ್ದು ಪರ್ಯಾಯ ದಾಳ ಸಿದ್ಧ.
  • ಹೈಕಮಾಂಡ್ ಕರೆ ಬೆನ್ನಲ್ಲೇ ಡಿಕೆ ಸಹೋದರರು ಜಂಟಿ ಸಭೆ ನಡೆಸಿದ್ದು, ಪ್ರತಿ ತಂತ್ರ ರೂಪಿಸಿದ್ದಾರೆ.

ಪ್ರತಿಷ್ಠೆಯ ಕಣವಾದ ದಿಲ್ಲಿ ಸಭೆ: ಹೈಕಮಾಂಡ್‌ಗೆ ಸವಾಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ದಂಡನ್ನೇ ಕಟ್ಟುಕೊಂಡು ದೆಹಲಿಗೆ ತೆರಳುವ ಮೂಲಕ ಪರೋಕ್ಷವಾಗಿ ಶಕ್ತಿ ಪ್ರದರ್ಶನಕ್ಕೆ ಇಳಿದಿದ್ದಾರೆ. ಒಂದು ವೇಳೆ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಯ ಒತ್ತಡ ಹೇರಿದರೆ, ಜಿ. ಪರಮೇಶ್ವರ್ ಅವರ ಹೆಸರನ್ನು ಮುಂಚೂಣಿಗೆ ತರುವ ಅಥವಾ ಆಪ್ತರ ಸಲಹೆ ಪಡೆದು ನಿರ್ಧಾರ ಪ್ರಕಟಿಸುವುದಾಗಿ ಹೇಳಿ ಕಾಲಹರಣ ಮಾಡುವ ಸೂತ್ರವನ್ನು ಸಿದ್ದರಾಮಯ್ಯ ಸಿದ್ಧಪಡಿಸಿಕೊಂಡಿದ್ದಾರೆ. ಇದರೊಂದಿಗೆ ಸಂಪುಟ ವಿಸ್ತರಣೆ ಮಾಡದಿದ್ದರೆ ಉಂಟಾಗಬಹುದಾದ ರಾಜಕೀಯ ನಷ್ಟದ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಲು ತಯಾರಿ ನಡೆಸಿದ್ದಾರೆ.

ಇನ್ನೊಂದೆಡೆ, ಡಿಕೆ ಶಿವಕುಮಾರ್ ತಮಗೆ ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಪಟ್ಟು ಹಿಡಿಯಲಿದ್ದಾರೆ. ಮುಂಬರುವ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ನಾಯಕತ್ವದ ಅನಿವಾರ್ಯತೆ ಹಾಗೂ ಗಾಂಧಿ ಕುಟುಂಬಕ್ಕೆ, ವಿಶೇಷವಾಗಿ ಸೋನಿಯಾ ಗಾಂಧಿ ಅವರಿಗೆ ತಾವು ತೋರಿರುವ ನಿಷ್ಠೆಯ ಭಾವನಾತ್ಮಕ ವಿಷಯಗಳನ್ನು ಮುಂದಿಡಲಿದ್ದಾರೆ. ಕೇವಲ ಸಂಪುಟ ಪುನಾರಚನೆಗೆ ದೆಹಲಿ ಭೇಟಿ ಸೀಮಿತವಾದರೆ ತಮಗೆ ಹಿನ್ನಡೆಯಾಗಲಿದೆ ಎಂಬ ಆತಂಕದಲ್ಲಿರುವ ಡಿಸಿಎಂ, ಮೊದಲು ನಾಯಕತ್ವದ ಗೊಂದಲ ನಿವಾರಣೆಗೆ ಹಠ ಹಿಡಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು!

ಒಟ್ಟಿನಲ್ಲಿ, ಇಬ್ಬರು ಮಹಾ ನಾಯಕರ ಹಿತಾಸಕ್ತಿ ಕಾಯ್ದು ಪಕ್ಷವನ್ನು ಮುನ್ನಡೆಸುವುದು ಈಗ ಎಐಸಿಸಿ ನಾಯಕತ್ವಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್