AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿದ್ದರಾಮಯ್ಯ: ಸಿಎಂ ಹುದ್ದೆ ಚರ್ಚೆಗೆ ಮೆಗಾ ಟ್ವಿಸ್ಟ್

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿದ್ದರಾಮಯ್ಯ: ಸಿಎಂ ಹುದ್ದೆ ಚರ್ಚೆಗೆ ಮೆಗಾ ಟ್ವಿಸ್ಟ್
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Feb 13, 2025 | 4:37 PM

Share

ಬೆಂಗಳೂರು, ಫೆಬ್ರವರಿ 13: ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಹಳ್ಳಿಯಿಂದ ಹಿಡಿದು ದೆಹಲಿಯ ತನಕ ಪಟ್ಟದ ರಾಜಕಾರಣ ಜೋರಾಗಿ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ಮಂಡಿ ನೋವಿನಿಂದ ಓಡಾಡಲು ಅಸಾಧ್ಯವಾದರೂ ಕುಳಿತಲ್ಲೇ ಇರುವಂತಾಗಿದ್ದರೂ ಸಿಎಂ ಸಿದ್ದರಾಮಯ್ಯ ಉರುಳಿಸುತ್ತಿರುವ ದಾಳ ಅಸಾಧ್ಯವಾದ್ದು. ಸಿಎಂ ಸಿದ್ದರಾಮಯ್ಯ ಇದೀಗ ಮನಸ್ಸಿನ ಮಾತೊಂದನ್ನು ಬಿಚ್ಚಿಟ್ಟಿದ್ದು ಕಾಂಗ್ರೆಸ್​ನ ಆಂತರಿಕ ರಾಜಕಾರಣ ಅಷ್ಟು ಸುಲಭ ಇಲ್ಲ ಎಂಬುದನ್ನು ಬಿಂಬಿಸಿದೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಎಂಬ ದಾಖಲೆಯ ಖ್ಯಾತಿ ತಮಗೇ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿಗೆ ಸಿಎಂ ಆಗಿ ಸ್ಥಾನ ಅಲಂಕರಿಸಿದ್ದರು. ಬರೋಬ್ಬರಿ ಏಳು ವರ್ಷ ಏಳು ತಿಂಗಳ ಕಾಲ ದೇವರಾಜ ಅರಸು ಸಿಎಂ ಆಗಿ ಅಧಿಕಾರ ನಡೆಸಿದ್ದರು. ದೇವರಾಜ ಅರಸು ಬಳಿಕ ಐದು ವರ್ಷ ಪೂರ್ಣಾವಧಿ ಮುಗಿಸಿದ ಸಿಎಂ ಅಂದರೆ ಅದು ಸಿದ್ದರಾಮಯ್ಯ. ಇದೀಗ ದೇವರಾಜ ಅರಸು ಅವರ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಮುರಿಯುವುದಕ್ಕೆ ಸಿದ್ದರಾಮಯ್ಯ ಇನ್ನೂ ಕೆಲವು ತಿಂಗಳು ಅಧಿಕಾರದಲ್ಲಿ ಮುಂದುವರಿಯಲೇಬೇಕಿದೆ. ಡಿಸಂಬರ್ ವರೆಗೆ ಸಿದ್ದರಾಮಯ್ಯ ಅನಾಯಾಸವಾಗಿ ಅಧಿಕಾರದಲ್ಲಿ ಮುಂದುವರಿದರೆ ದೇವರಾಜ ಅರಸು ದಾಖಲೆ ಮುರಿದು ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯಗೆ ಸಿಗಲಿದೆ. ಇದರ ಬಗ್ಗೆ ತನಗೆ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ ಮಾತು ಹೊಸ ಕಿಚ್ಚು ಹಚ್ಚಿಸಿದೆ.

ಸಿದ್ದರಾಮಯ್ಯ ಹೀಗೆ ದಾಖಲೆಯ ಅವಧಿಯ ಬಗ್ಗೆ ಪ್ತಸ್ತಾಪ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಆಪ್ತ ಸಚಿವರು ಹಿತೈಷಿಗಳು ಜೈ ಎಂದಿದ್ದಾರೆ.

ಸಿದ್ದರಾಮಯ್ಯ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿಕೆಶಿವಕುಮಾರ್ ಗೆ ಬಿಟ್ಟು ಕೊಡುತ್ತಾರೆ ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಡಾ. ಜಿ ಪರಮೇಶ್ವರ್, ಅಂತಹ ಯಾವುದೇ ಸೂತ್ರದ ಬಗ್ಗೆ ತಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರಲಿ ಎಂದಿದ್ದಾರೆ‌. ಎಂಬಿ ಪಾಟೀಲ್, ಎಚ್​ಸಿ ಮಹದೇವಪ್ಪ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿ ಸಚಿವರನ್ನು ಬದಲಾಯಿಸಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಮುನಿರತ್ನ ಪತ್ರ

ಸದ್ಯ ಕಾಂಗ್ರೆಸ್​‌ನಲ್ಲಿ ಆಂತರಿಕ ಬೇಗುದಿ ಹೆಚ್ಚಿಸಿರುವುದೇ ಸಿದ್ದರಾಮಯ್ಯ ಅಧಿಕಾರ ಮೊಟಕಾಗುತ್ತದಾ ಎಂಬ ಪ್ರಶ್ನೆಯಿಂದ. ಇದೀಗ ಸಿದ್ದರಾಮಯ್ಯ ಅವರೇ ದಾಖಲೆಯ ಅವಧಿಗೆ ತಾವು ಮುಂದುವರಿಯುತ್ತೇನೆ ಎನ್ನುವ ಮೂಲಕ ಪವರ್ ಶೇರಿಂಗ್ ಅಷ್ಟು ಸುಲಭದ ವಿಷಯವಲ್ಲ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಇದರ ಮಧ್ಯೆ ದಾಖಲೆಯ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯ ಸೀಟು ಬಿಟ್ಟುಕೊಡ್ತಾರಾ? ಅಥವಾ ದಾಖಲೆಯನ್ನು ಮಾಡುವುದಕ್ಕೆ ಸಿದ್ದರಾಮಯ್ಯಗೆ ಡಿಕೆಶಿವಕುಮಾರ್ ಅವಕಾಶ ಬಿಟ್ಟುಕೊಡ್ತಾರಾ? ಇದೇ ಸದ್ಯದ ಪ್ರಶ್ನೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ