AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್‌ಗೆ ಷಡ್ಯಂತ್ರ, ಅಲ್ಪಸಂಖ್ಯಾತ, ದಲಿತ ಮತಗಳೇ ಟಾರ್ಗೆಟ್: ಸಿಎಂ ಡಿಕೆಶಿ ಗಂಭೀರ ಆರೋಪ

ಎಸ್​ಐಆರ್ ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳಿವೆ ಹಾಗೂ ಬಿಜೆಪಿಯವರ ಸೂಚನೆಗೆ ಮೇರೆಗೆ ಅಲ್ಪಸಂಖ್ಯಾತರು, ದಲಿತರು ಹಾಗೂ ಒಬಿಸಿ ಸಮುದಾಯದವರನ್ನೇ ಗುರಿಯಾಗಿಸಿ ಮತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. 45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಷಡ್ಯಂತ್ರ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್‌ಗೆ ಷಡ್ಯಂತ್ರ, ಅಲ್ಪಸಂಖ್ಯಾತ, ದಲಿತ ಮತಗಳೇ ಟಾರ್ಗೆಟ್: ಸಿಎಂ ಡಿಕೆಶಿ ಗಂಭೀರ ಆರೋಪ
ಮುಖ್ಯಮಂತ್ರಿ ಡಿಕೆ ಶಿವಕುಮಾರ್Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Oct 01, 2026 | 2:39 PM

Share

ಮುಖ್ಯಾಂಶಗಳು

  • ಎಸ್​ಐಆರ್ ವಿಚಾರದಲ್ಲಿ ಡಿಕೆಶಿ ಗಂಭೀರ ಆರೋಪ
  • 45 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್‌ಗೆ ಷಡ್ಯಂತ್ರ ಎಂದ ಸಿಎಂ
  • ಮತದಾರರ ಹಕ್ಕು ರಕ್ಷಣೆಗೆ ಬದ್ಧ ಎಂದ ಡಿಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್ 1: ಎಸ್​​ಐಆರ್ ಪ್ರಕ್ರಿಯೆ ಹಾಗೂ ಫಾರ್ಮ್-7 ಸಲ್ಲಿಕೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್​​ಐಆರ್ ಪ್ರಕ್ರಿಯೆ ಕುರಿತ ವಿಡಿಯೋ ಬಿಡುಗಡೆ ಮಾಡಿ ಮತದಾರರ ಹಕ್ಕು ರಕ್ಷಣೆ ಕುರಿತು ಮಾತನಾಡಿದರು. ಮತಗಳ್ಳತನದ ವಿರುದ್ಧ ದೊಡ್ಡ ಐತಿಹಾಸಿಕ ಹೋರಾಟ ನಡೆಸಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಲವು ವಿಚಾರಗಳನ್ನು ದೇಶದ ಗಮನಕ್ಕೆ ತಂದಿದ್ದಾರೆ. ಇದೀಗ ಇಡೀ ದೇಶದಾದ್ಯಂತ ದೊಡ್ಡ ಆಂದೋಲನ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈಗ ಸುಮಾರು 4 ಕೋಟಿ ಮತದಾರರು ಉಳಿದುಕೊಂಡಿದ್ದಾರೆ. ಅವರನ್ನೂ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಷಡ್ಯಂತ್ರ ನಡೆಯುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ. ಪ್ರತಿಯೊಬ್ಬ ಮತದಾರರ ಹಕ್ಕನ್ನು ರಕ್ಷಿಸುವುದು ತಮ್ಮ ಜವಾಬ್ದಾರಿ ಎಂದಿರುವ ಅವರು, 45 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸ್​​ಐಆರ್ ಆರಂಭವಾದ ಬಳಿಕ ಚುನಾವಣಾ ಆಯೋಗಕ್ಕೆ ತಾವು ಸಹಕಾರ ನೀಡಿದ್ದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಸ್​​ಐಆರ್ ಕುರಿತು ಪಕ್ಷ ಹಾಗೂ ಸರ್ಕಾರದ ವತಿಯಿಂದಲೂ ಜಾಗೃತಿ ಮೂಡಿಸಲಾಗಿದೆ. ಮುಖ್ಯಮಂತ್ರಿಯಾಗಿ ಮತದಾನದ ಹಕ್ಕು ಉಳಿಸುವುದು ತಮ್ಮ ಜವಾಬ್ದಾರಿ ಎಂದಿದ್ದಾರೆ.

45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್‌ಗೆ ಷಡ್ಯಂತ್ರ: ಡಿಕೆಶಿ ಆರೋಪ

45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಷಡ್ಯಂತ್ರ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ನಾಯಕರು ಫಾರ್ಮ್-7 ತೆಗೆದುಕೊಂಡು ಮತದಾರರ ಹೆಸರು ಹಾಗೂ ಮಾಹಿತಿಯನ್ನು ಡಿಲೀಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಬಬಲೇಶ್ವರ, ಭಾಲ್ಕಿ, ಬೆಳಗಾವಿ ಸೇರಿದಂತೆ ಹಲವೆಡೆ ಈ ರೀತಿಯ ಕೆಲಸ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರು ಫಾರ್ಮ್-7 ಸಲ್ಲಿಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ. ಈ ಫಾರ್ಮ್‌ಗಳನ್ನು ಯಾರು ಪ್ರಿಂಟ್ ಮಾಡಿದ್ದಾರೆ ಮತ್ತು ಅವರಿಗೆ ಮತದಾರರ ಮಾಹಿತಿ ಹೇಗೆ ಸಿಕ್ಕಿತು ಎಂಬುದನ್ನು ತನಿಖೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು, ದಲಿತರು, ಒಬಿಸಿ ಮತಗಳು ಟಾರ್ಗೆಟ್: ಸಿಎಂ

ಅಲ್ಪಸಂಖ್ಯಾತರು, ದಲಿತರು ಹಾಗೂ ಒಬಿಸಿ ಮತದಾರರನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ಡಿಲೀಟ್ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಒಂದೇ ಕ್ಷೇತ್ರದಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಪ್ರಯತ್ನಿಸಲಾಗಿದೆ ಎಂದು ಹೇಳಿದ್ದಾರೆ. ಭಾಲ್ಕಿ ಕ್ಷೇತ್ರದಲ್ಲೂ 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 7 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ ಎಂದು ತಿಳಿಸಿದ್ದಾರೆ.

ಈ ಷಡ್ಯಂತ್ರದ ಕುರಿತು ಪ್ರಕಾಶ್ ರಾಜ್ ತನಿಖೆ ನಡೆಸಿದ್ದಾರೆ ಎಂದು ಹೇಳಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿರುವ ನಾಯಕರಿಗೂ ಧನ್ಯವಾದ ತಿಳಿಸಿದ್ದಾರೆ.

ಬೆಳಗಾವಿ, ಭಾಲ್ಕಿಯಲ್ಲಿ ದೂರು: ಎಫ್‌ಐಆರ್ ದಾಖಲು

ಬಿಜೆಪಿಗರಿಗೆ ಮತದಾರರ ಡೇಟಾ ಹೇಗೆ ಸಿಕ್ಕಿತು? ಯಾರು ನೀಡಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಳಗಾವಿ ಹಾಗೂ ಭಾಲ್ಕಿಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ದೂರು ಹಾಗೂ ಎಫ್‌ಐಆರ್ ದಾಖಲಾಗಿದೆ ಎಂದು ಹೇಳಿದ್ದಾರೆ. ಕ್ರಿಮಿನಲ್ ಕೃತ್ಯ ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಬಿಜೆಪಿ ನಾಯಕರು ಹಾಗೂ ದೆಹಲಿಯ ನಾಯಕರು ಈ ರೀತಿ ಫಾರ್ಮ್‌ಗಳನ್ನು ಪ್ರಿಂಟ್ ಮಾಡಿಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.

ಪ್ರತಿಯೊಬ್ಬ ಮತದಾರರ ಹಕ್ಕನ್ನು ಕಾಪಾಡಬೇಕು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಈ ವಿಚಾರ ಸುಮ್ಮನೇ ಬಿಡಲ್ಲ: ಡಿಕೆ ಶಿವಕುಮಾರ್ ಎಚ್ಚರಿಕೆ

ಈ ವಿಚಾರವನ್ನು ನಮ್ಮ ಸರ್ಕಾರ ಇಲ್ಲಿಗೆ ಬಿಡುವುದಿಲ್ಲ. ಇದರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಜಿಲ್ಲಾ ಅಧಿಕಾರಿಗಳು ಹಾಗೂ ಬಿಎಲ್‌ಒಗಳೂ ಈ ಕುರಿತು ದೂರು ನೀಡಬೇಕು. ಸಂಪೂರ್ಣ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರವೂ ಈ ಬಗ್ಗೆ ತನಿಖೆ ನಡೆಸಬೇಕು. ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದವರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ. ಆಳಂದ ಹಾಗೂ ಬಬಲೇಶ್ವರದಲ್ಲೂ ಇದೇ ರೀತಿಯ ಕೆಲಸ ನಡೆದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಫಾರಂ 7 ಬಗ್ಗೆ ನನಗೆ ಮಾಹಿತಿ ಕೊಡಿ, ನಿಮ್ಮ ಮತ ಉಳಿಸಿಕೊಡ್ತೇನೆ’: ಎಸ್​ಐಆರ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶ

ರಾಜಧರ್ಮವನ್ನು ತಾವು ಪಾಲಿಸುತ್ತೇನೆ ಎಂದು ಹೇಳಿರುವ ಡಿಕೆ ಶಿವಕುಮಾರ್, ಪ್ರತಿಯೊಬ್ಬ ಮತದಾರರ ಹಕ್ಕು ಹಾಗೂ ಮಾಹಿತಿಯನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಬಡ ರೋಗಿಗಳಿಗೆ ಸಿಗಬೇಕಿದ್ದ ಸರ್ಕಾರಿ ಮಾತ್ರೆಗಳು ಅರಣ್ಯ ಪಾಲು
ಬಡ ರೋಗಿಗಳಿಗೆ ಸಿಗಬೇಕಿದ್ದ ಸರ್ಕಾರಿ ಮಾತ್ರೆಗಳು ಅರಣ್ಯ ಪಾಲು
ಸಾಲ ಮಂಜೂರಾಗುವ ಯೋಗವಿದೆ ಈ ರಾಶಿಗೆ
ಸಾಲ ಮಂಜೂರಾಗುವ ಯೋಗವಿದೆ ಈ ರಾಶಿಗೆ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ