AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾರಂ 7 ಬಗ್ಗೆ ನನಗೆ ಮಾಹಿತಿ ಕೊಡಿ, ನಿಮ್ಮ ಮತ ಉಳಿಸಿಕೊಡ್ತೇನೆ’: ಎಸ್​ಐಆರ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶ

ಎಸ್​ಐಆರ್ ವೇಳೆ ಬಿಜೆಪಿಯವರ ಸೂಚನೆ ಮೇರೆಗೆ ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರ, ದಲಿತರ ಹೆಸರುಗಳನ್ನು ಕೈಬಿಡಲು ಫಾರ್ಮ್-7 ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಫಾರ್ಮ್-7 ಬಗ್ಗೆ ತಕ್ಷಣವೇ ನೇರ ತಮ್ಮ ಕಚೇರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

‘ಫಾರಂ 7 ಬಗ್ಗೆ ನನಗೆ ಮಾಹಿತಿ ಕೊಡಿ, ನಿಮ್ಮ ಮತ ಉಳಿಸಿಕೊಡ್ತೇನೆ’: ಎಸ್​ಐಆರ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶ
ಡಿಕೆ ಶಿವಕುಮಾರ್Image Credit source: DK Shivakumar X Handle
ಗಣಪತಿ ಶರ್ಮಾ
|

Updated on: Oct 01, 2026 | 10:06 AM

Share

ಬೆಂಗಳೂರು, ಅಕ್ಟೋಬರ್ 1: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​ಐಆರ್) ವಿಚಾರವಾಗಿ ರಾಜ್ಯದ ಜನರಿಗೆ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಸಂದೇಶ ನೀಡಿದ್ದಾರೆ. ಎಸ್​ಐಆರ್​​ನಿಂದ ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಬೇಕು ಎಂದು ಅವರು ಹೇಳಿದ್ದಾರೆ. ಜನರ ಮತವನ್ನು ಕಾಪಾಡಲು ಮುಖ್ಯಮಂತ್ರಿಯಾಗಿ ಹಾಗೂ ಪ್ರಜಾಸೇವಕನಾಗಿ ಪ್ರಯತ್ನಿಸುತ್ತಿದ್ದೇನೆ. ಆದರೆ, ಇದರಲ್ಲಿ ವಿಫಲನಾಗಿದ್ದೇನೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು ಎಂದು ತಿಳಿಸಿದ್ದಾರೆ. ಒಂದು ಕೋಟಿಗೂ ಹೆಚ್ಚು ಮತಗಳು ಕಡಿಮೆಯಾಗಿರುವುದನ್ನು ಗಮನಿಸಿದ್ದೀರಿ. ಇದು ವಿವಿಧ ಕಾರಣಗಳಿಂದ ಆಗಿರಬಹುದು. ಆದರೆ, 50 ಲಕ್ಷಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಸೂಚನೆ ಮೇರೆಗೆ ಅಲ್ಪಸಂಖ್ಯಾತರು, ದಲಿತರ ಮತಕ್ಕೆ ಕೊಕ್: ಸಿಎಂ ಆರೋಪ

ಇದರ ಬೆನ್ನಲ್ಲೇ ಇನ್ನೂ ಮೂರು ದಿನಗಳ ಒಳಗೆ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲ ಬಿಜೆಪಿ ನಾಯಕರು ತಮ್ಮ ನಾಯಕರ ನಿರ್ದೇಶನದ ಮೇರೆಗೆ ಅಲ್ಪಸಂಖ್ಯಾತರು ಹಾಗೂ ದಲಿತರ ಮತಗಳನ್ನು ತೆಗೆದುಹಾಕಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದಕ್ಕಾಗಿ ಫಾರ್ಮ್-7 ನೀಡಲಾಗುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷದ ನಾಯಕರು ದಾಖಲೆಗಳನ್ನು ನೀಡಿದ್ದಾರೆ. ಈ ಬಗ್ಗೆ ಕ್ರಿಮಿನಲ್ ತನಿಖೆಯ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಮತವನ್ನು ಉಳಿಸುವುದು ತಮ್ಮ ಕರ್ತವ್ಯ ಎಂದಿದ್ದಾರೆ.

ಏನೇ ಮಾಹಿತಿ ಇದ್ದರೂ ನನ್ನ ಕಚೇರಿಗೆ ತಲುಪಿಸಿ: ಸಿಎಂ ಮನವಿ

BLA-1, BLA-2 ಹಾಗೂ BLOಗಳಿಗೆ ಅರ್ಜಿ ನೀಡಿ ಮತಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಈ ಬಗ್ಗೆ ಸಾರ್ವಜನಿಕರ ಬಳಿ ಇರುವ ಯಾವುದೇ ಮಾಹಿತಿಯನ್ನು ಕೂಡಲೇ ತಮ್ಮ ಕಚೇರಿಗೆ ತಲುಪಿಸುವಂತೆ ಮನವಿ ಮಾಡಿದ್ದಾರೆ. ನಾಳೆ ತಾವು ಖುದ್ದಾಗಿ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ. ಅನೇಕ ಸಂಗತಿಗಳೊಂದಿಗೆ ಈ ವಿಚಾರವನ್ನು ಬಯಲಿಗೆಳೆಯುತ್ತೇನೆ. ಇದಕ್ಕೆ ಜನರ ಮಾಹಿತಿ ಅಗತ್ಯವಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ತಮ್ಮ ಪಕ್ಷದ ಹಾಲಿ ಶಾಸಕರು ಇರುವ ಕ್ಷೇತ್ರಗಳಲ್ಲಿಯೂ ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಡಿಕೆ ಶಿವಕುಮಾರ್ ವಿಡಿಯೋ ಸಂದೇಶ

ಈಶ್ವರ್ ಖಂಡ್ರೆ ಅವರ ಭಾಲ್ಕಿ ಕ್ಷೇತ್ರ, ನಯನ ಮೋಟಮ್ಮ ಹಾಗೂ ತನ್ವೀರ್ ಸೇಠ್ ಅವರ ಕ್ಷೇತ್ರಗಳಲ್ಲೂ ಇಂತಹ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಹೀಗಾಗಿ ಇಡೀ ರಾಜ್ಯದಲ್ಲಿ ದೊಡ್ಡ ಕುತಂತ್ರ ನಡೆಯುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ, ಎಲ್ಲರೂ ಜಾಗೃತರಾಗಿರುವಂತೆ ಮನವಿ ಮಾಡಿದ್ದಾರೆ. ಎಲ್ಲೆಲ್ಲಿ ಫಾರ್ಮ್-7 ಸಲ್ಲಿಸಲಾಗಿದೆ ಎಂಬುದರ ಕುರಿತು 12 ಗಂಟೆಯೊಳಗೆ ಮಾಹಿತಿ ಒದಗಿಸುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಮತದಾನವು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು ಎಂದು ಹೇಳಿದ್ದಾರೆ. SIR ನೆಪದಲ್ಲಿ ಬಿಜೆಪಿ ಜನರಿಂದ ಈ ಹಕ್ಕನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ತಪ್ಪು ಮಾಹಿತಿಯೊಂದಿಗೆ ಫಾರ್ಮ್-7 ಸಲ್ಲಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದ ಕಾಂಗ್ರೆಸ್: CWC ಸಭೆಯಲ್ಲಿ 3 ನಿರ್ಣಯ

ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಪ್ಪು ಮಾಹಿತಿ ನೀಡಿ ನಾಗರಿಕರನ್ನು ಮತದಾರರ ಪಟ್ಟಿಯಿಂದ ದೂರವಿಡುವವರ ಬಗ್ಗೆ ಬಿಎಲ್​ಎಗಳು ನಿಖರ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು

ಪ್ರಶ್ನೆ: ಎಸ್​ಐಆರ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಾಡಿರುವ ಆರೋಪ ಏನು?

ಉತ್ತರ: ಬಿಜೆಪಿ ನಾಯಕರ ಸೂಚನೆಗೆ ಮೇರೆಗೆ BLA-1, BLA-2 ಹಾಗೂ BLOಗಳಿಗೆ ಅರ್ಜಿ ನೀಡಿ ಮತಗಳನ್ನು ತೆಗೆದುಹಾಕಲು ಯತ್ನಿಸಲಾಗುತ್ತಿದೆ.

ಪ್ರಶ್ನೆ: ಮತದಾರರಲ್ಲಿ ಡಿಕೆ ಶಿವಕುಮಾರ್ ಮಾಡಿದ ಮನವಿ ಏನು?

ಉತ್ತರ: ಸಾರ್ವಜನಿಕರ ಬಳಿ ಇರುವ ಯಾವುದೇ ಮಾಹಿತಿಯನ್ನು ಕೂಡಲೇ ಸಿಎಂ ಕಚೇರಿಗೆ ತಲುಪಿಸಬೇಕು.

ಪ್ರಶ್ನೆ: ಡಿಕೆಶಿ ಪ್ರಕಾರ ಯಾರ ಮತ ಹಕ್ಕನ್ನು ಹೆಚ್ಚು ಕೈಬಿಡಲಾಗುತ್ತಿದೆ?

ಉತ್ತರ: ಅಲ್ಪಸಂಖ್ಯಾತರು, ದಲಿತರನ್ನೇ ಮತಪಟ್ಟಿಯಿಂದ ಹೆಚ್ಚು ಕೈಬಿಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More