AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ

ಉಪ ಚುನಾವಣೆ ಸಂದರ್ಭದಲ್ಲಿ ಒಂದಲ್ಲ ಒಂದು ವಿವಾದ ಮೈಮೇಲೆ ಎಳೆದುಕೊಳ್ಳುತ್ತಿರುವ ರಾಜ್ಯ ಸರ್ಕಾರ ಕಾಮಗಾರಿಗಳ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4ರಷ್ಟು ಮೀಸಲಾತಿ ನೀಡಲು ಮುಂದಾಗಿತ್ತು. ಈ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದಂತೆ ಮತ್ತು ಮತಗಳ ಮೇಲೆ ಪ್ರಭಾವ ಬೀಳುವ ಸಾಧ್ಯತೆ ಇದೆ ಎಂದು ಅರಿತ ಸರ್ಕಾರ, ಈ ವಿಚಾರವಾಗಿ ಸ್ಪಷ್ಟನೆ ನೀಡಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ
ಸಿಎಂ ಸಿದ್ದರಾಮಯ್ಯ, ಪ್ರಸ್ತಾವನೆ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 12, 2024 | 12:12 PM

Share

ಬೆಂಗಳೂರು, ನವೆಂಬರ್​ 12: ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ (Muslim) ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಒಂದು ದಿನ ಬಾಕಿ ಇರುವಾಗಲೇ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್​ (Congress) ಸರ್ಕಾರವನ್ನು ಧರ್ಮ ಸಂಕಷ್ಟಕ್ಕೆ ಸಿಲುಕಿಸಿತ್ತು. ಈ ಚರ್ಚೆ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುವುದನ್ನು ಮನಗಂಡ ಕಾಂಗ್ರೆಸ್​ ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿದೆ.

ಸಿಎಂ ಕಚೇರಿ ಸ್ಪಷ್ಟನೆ

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ. ಹೀಗಾಗಿ ಸರ್ಕಾರ ದ್ವಂದ್ವದಿಂದ ಕೂಡಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕಾಯ್ದೆ ತಿದ್ದುಪಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಿಎಂಗೆ ಮನವಿ ಮಾಡಿದ್ದ ಮುಸ್ಲಿಂ ಶಾಸಕ, ಸಚಿವರು

ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು.

ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕಿಸ್ ಬಾನು ಸಹಿ ಮಾಡಿದ್ದರು. ಇದರಂತೆ, ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:02 pm, Tue, 12 November 24