AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರ್ಚಿ ಕಾಳಗದ ನಡುವೆ ಸಿದ್ದರಾಮಯ್ಯ ಭೇಟಿಯಾಗಿದ್ದೇಕೆ ಪರಮೇಶ್ವರ್​?: ಕುತೂಹಲ ಮೂಡಿಸಿದ ಗೃಹ ಸಚಿವರ ನಡೆ

ಕುರ್ಚಿ ಕಾಳಗದ ನಡುವೆ ಸಿದ್ದರಾಮಯ್ಯ ಭೇಟಿಯಾಗಿದ್ದೇಕೆ ಪರಮೇಶ್ವರ್​?: ಕುತೂಹಲ ಮೂಡಿಸಿದ ಗೃಹ ಸಚಿವರ ನಡೆ

ಕಿರಣ್​ ಹನಿಯಡ್ಕ
| Edited By: |

Updated on: Nov 24, 2025 | 11:53 AM

Share

ಸಿಎಂ ರೇಸ್​​ನಲ್ಲಿ ನಾನೂ ಇದ್ದೇನೆ ಎಂಬ ಹೇಳಿಕೆ ಬೆನ್ನಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್​​ ಕ್ರಾಂತಿ ಊಹಾಪೋಹಗಳ ನಡುವೆ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇದಕ್ಕೆ ಇಂಬು ನೀಡುವಂತಿವೆ.

ಬೆಂಗಳೂರು, ನವೆಂಬರ್​​ 24: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಡುವೆ ಪಟ್ಟಕ್ಕೆ ಫೈಟ್​​ ನಡೆಯುತ್ತಿರುವ ಹೊತ್ತಲ್ಲಿ, ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಹೇಳಿದ್ದರು. ಈ ನಡುವೆ ಅವರು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚಿಸಿರೋದು ರಾಜಕೀಯವಾಗಿ ಸಂಚಲನ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More