ಕುರ್ಚಿ ಕಾಳಗದ ನಡುವೆ ಸಿದ್ದರಾಮಯ್ಯ ಭೇಟಿಯಾಗಿದ್ದೇಕೆ ಪರಮೇಶ್ವರ್?: ಕುತೂಹಲ ಮೂಡಿಸಿದ ಗೃಹ ಸಚಿವರ ನಡೆ
ಸಿಎಂ ರೇಸ್ನಲ್ಲಿ ನಾನೂ ಇದ್ದೇನೆ ಎಂಬ ಹೇಳಿಕೆ ಬೆನ್ನಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಊಹಾಪೋಹಗಳ ನಡುವೆ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇದಕ್ಕೆ ಇಂಬು ನೀಡುವಂತಿವೆ.
ಬೆಂಗಳೂರು, ನವೆಂಬರ್ 24: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಡುವೆ ಪಟ್ಟಕ್ಕೆ ಫೈಟ್ ನಡೆಯುತ್ತಿರುವ ಹೊತ್ತಲ್ಲಿ, ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದರು. ಈ ನಡುವೆ ಅವರು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚಿಸಿರೋದು ರಾಜಕೀಯವಾಗಿ ಸಂಚಲನ ಮೂಡಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
