ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್​ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಉದ್ಯಮಿಗಳ ವಿರೋಧಕ್ಕೆ ಮಣಿದ್ರಾ?

ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಆದ್ರೆ, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಿಎಂ ತಮ್ಮ ಟ್ವೀಟ್ ಡಿಲೀಟ್ ಮಾಡಿಕೊಂಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್​ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಉದ್ಯಮಿಗಳ ವಿರೋಧಕ್ಕೆ ಮಣಿದ್ರಾ?
ಸಿಎಂ ಸಿದ್ದರಾಮಯ್ಯ
Follow us
| Updated By: Digi Tech Desk

Updated on:Jul 17, 2024 | 2:51 PM

ಬೆಂಗಳೂರು, (ಜುಲೈ 17): ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್​ ಅನ್ನು ಡಿಲೀಟ್​ ಮಾಡಿಕೊಂಡಿದ್ದಾರೆ. ಇದಕ್ಕೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಉದ್ಯಮಿಗಳ ಒತ್ತಡಕ್ಕೆ ಮಣಿದು ಸಿಎಂ ಟ್ವೀಟ್ ಡಿಲೀಟ್ ಮಾಡಿದ್ರಾ? ಅಥವಾ ಮಸೂದೆಯಲ್ಲಿರುವುದು ತಾವು ಟ್ವೀಟ್​ನಲ್ಲಿ ಹೇಳಿರುವ ಮಾಹಿತಿ ಬೇರೆ ಬೇರೆ ಆಗಿದ್ಯಾ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ (ಜುಲೈ 16) ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ತಮ್ಮ ಟ್ವಿಟ್ ಡಿಲೀಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಆತಂಕ ಬೇಡ, ಉದ್ಯಮಿಗಳಿಗೆ ಕರ್ನಾಟಕ ಸರ್ಕಾರ ಅಭಯ

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆ ಹುದೆಗಳಲ್ಲಿ ಶೇ. 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎನ್ನುವ ಕೂಗು ಮೊದಲಿನಿಮದಲೂ ಕೇಳಿಬರುತ್ತಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದ್ದು, ಇದನ್ನು ಸದನದಲ್ಲಿ ಮಂಡನೆ ಮಾಡುವುದು ಬಾಕಿ ಇತ್ತು. ಆದ್ರೆ, ಇದಕ್ಕೂ ಮುನ್ನ ಉದ್ಯಮಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕನ್ನಡಿಗರ ನೇಮಕಾತಿ ಬಗ್ಗೆ ಮಾಡಿದ್ದ ಟ್ವೀಟ್ ಅನ್ನು ಏಕಾಏಕಿ ಡಿಲೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಏಕಾಏಕಿ ಟ್ವೀಟ್ ಡಿಲೀಟ್‌ ಮಾಡಲು ಕಾರಣವೇನು ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.  ಮುಖ್ಯಮಂತ್ರಿಗಳು ಖಚಿತ ಮಾಹಿತಿ ನೀಡದೇ ಇರುವುದು ಎನ್ನಲಾಗಿದೆ. ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ಶೇ. 100 ರಷ್ಟು ಎನ್ನುವುದು ಇತ್ತು. ಆದರೆ ಬಿಲ್‌ ನಲ್ಲಿ ಆ ರೀತಿ ಇಲ್ಲ. ಮ್ಯಾನೇಜ್‌ಮೆಂಟ್‌ ಕೋಟಾದಲ್ಲಿ 50% ನಾನ್‌ ಮ್ಯಾನೇಜ್‌ಮೆಂಟ್‌ ಕೋಟಾ 70% ಎಂಬ ನಿಯಮ ಬಿಲ್‌ ನಲ್ಲಿ ಇದೆ. ಹೀಗಾಗಿ ಸಿಎಂ ನೂರಕ್ಕೆ ನೂರರಷ್ಟು ಅನ್ನುವ ಪದ ಬಳಕೆ ಟ್ವೀಟ್‌ ನಲ್ಲಿ ಮಾಡಿದ್ದಕ್ಕೆ ಡಿಲೀಟ್‌ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಉದ್ಯಮಿಗಳಿಂದ ವಿರೋಧ

ಸಿದ್ದರಾಮಯ್ಯ ಟ್ವೀಟ್​ನಲ್ಲೇನಿತ್ತು?

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Wed, 17 July 24

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ