ಕರ್ನಾಟಕದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.
ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.
ಮತ್ತಷ್ಟು ಓದಿ:
ರೈತರಿಗೆ ನೀಡಿರುವ ವಕ್ಫ್ ನೋಟೀಸ್ ವಾಪಸ್ ಪಡೆಯಿರಿ, ತಕ್ಷಣ ತಿದ್ದುಪಡಿ ರದ್ದು ಮಾಡಿ: ಸಿದ್ದರಾಮಯ್ಯ ಖಡಕ್ ಸೂಚನೆ
ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ.
ಆರಂಭವಾಗಿದ್ದೆಲ್ಲಿಂದ?
ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಬೋರ್ಡ್‌ನಿಂದ ಬಂದ ನೋಟಿಸ್ ಶಾಕ್ ನೀಡಿತ್ತು. ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದದ್ದ ರೈತರು ಜಮೀನು ಕಳೆದುಕೊಳ್ಳುವ ಆತಂಕ ಎದುರಿಸಿದ್ದರು. ನೋಟಿಸ್‌ನಲ್ಲಿ ಅವರು ಉಳುಮೆ ಮಾಡುತ್ತಿದ್ದ ಜಮೀನು ವಕ್ಪ್ ಸ್ವತ್ತು ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲದೆ ರೈತರ ಪಹಣಿಯಲ್ಲೂ ವಕ್ಫ್ ಜಮೀನು ಎಂದು ಬದಲಾವಣೆ ಮಾಡಲಾಗಿತ್ತು. ಇದು ರೈತರ ಆತಂಕಕ್ಕೆ ಕಾರಣವಾಗಿತ್ತು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:45 am, Sun, 10 November 24